ಬಾಗೇಪಲ್ಲಿ | ಕೆಪಿಎಸ್ ಮ್ಯಾಗ್ನೆಟ್ ಯೋಜನೆ’ಯನ್ನು ವಿರೋಧಿಸಿ ಪ್ರತಿಭಟನೆ

Date:

ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಹೆಸರಿನಲ್ಲಿ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಮ್ಯಾಗ್ನೆಟ್ ಯೋಜನೆ ಜಾರಿಗೊಳಿಸುವ ಮೂಲಕ ರಾಜ್ಯದ ಸುಮಾರು 45 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿ, ಯೋಜನೆ ವಿರೋಧಿಸಿ ಎಐಡಿಎಸ್ಓ ನೇತೃತ್ವದಲ್ಲಿ ತಾಲೂಕಿನ ಪಾತಬಾಗೇಪಲ್ಲಿ ಗ್ರಾಮದಲ್ಲಿ ಗ್ರಾಮಸ್ಥರು, ಪೋಷಕರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ಎ.ಐ.ಡಿ.ಎಸ್.ಓ ಜಿಲ್ಲಾ ಸಂಚಾಲಕಿ ತುಳಸಿ ಮಾತನಾಡಿ ಕೆಪಿಎಸ್ ಶಾಲೆಗಳನ್ನು ಸ್ಥಾಪಿಸಿ ಸುತ್ತಮುತ್ತಲಿನ ಸರ್ಕಾರಿ ಶಾಲೆಗಳನ್ನು ಮುಚ್ಚುವುದು, ಖಾಸಗಿ ಮತ್ತು ಕಾರ್ಪೊರೇಟ್ ಕಂಪನಿಗಳು ಶಾಲೆಗಳನ್ನು ದತ್ತು ಪಡೆದು ತಮ್ಮ ಅಗತ್ಯಕ್ಕೆ ಅನುಗುಣವಾಗಿ ಪಠ್ಯಕ್ರಮ ರೂಪಿಸುವುದು, ಮುಂದಿನ ದಿನಗಳಲ್ಲಿ ಕೆಪಿಎಸ್ ಶಾಲೆಗಳಿಗೆ ಮಾತ್ರ ಶಿಕ್ಷಕರ ನೇಮಕಾತಿ ಮಾಡುವುದು ಹಾಗೂ 2030ರ ವೇಳೆಗೆ ಕೆಪಿಎಸ್ ಶಾಲೆಗಳನ್ನು ಖಾಸಗಿ ಕಂಪನಿಗಳಿಗೆ ವಹಿಸುವ ಉದ್ದೇಶ ಹೊಂದಲಾಗಿದೆ ಎಂಬ ಆರೋಪಗಳನ್ನು ಮುಂದಿಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಈಗ ಅಧಿಕಾರದಲ್ಲಿ ಇರುವ ಕಾಂಗ್ರೆಸ್ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ 45 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಒಟ್ಟಾರೆ ಎಲ್ಲಾ ಸರ್ಕಾರಗಳ ಅಂತಿಮ ಗುರಿ ಸರ್ಕಾರಿ ಶಾಲೆಗಳನ್ನು ಮುಚ್ಚಿ, ಬಡ ವಿದ್ಯಾರ್ಥಿಗಳಿಂದ ಶಿಕ್ಷಣವನ್ನು ಕಸಿದುಕೊಳ್ಳುವುದೆ ಆಗಿದೆ. ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಸರ್ಕಾರವು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕಿನಿಂದ ₹2,500 ಕೋಟಿ ಸಾಲ ಮಾಡಿ ತೆರೆಯುತ್ತಿದೆ. ಖಾಸಗಿ ಬ್ಯಾಂಕಿನಿಂದ ಸಾಲ ಪಡೆದು ಸರ್ಕಾರಿ ಶಾಲೆಗಳನ್ನು ನಡೆಸುವಂತಹ ಕೆಟ್ಟ ಪರಿಸ್ಥಿತಿಗೆ ಸರ್ಕಾರ ಬಂದಿದೆಯೇ. ನಾವು ಕಟ್ಟುತ್ತಿರುವ ತೆರಿಗೆಯು ಸಾಲದೇ’ ಎಂದು ಟೀಕಿಸಿದರು.

ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಹೊರಗುತ್ತಿಗೆ ನೀಡಿ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳನ್ನಾಗಿ ಪರಿವರ್ತಿಸುವ ಹುನ್ನಾರವನ್ನು ಸರ್ಕಾರ ಮಾಡುತ್ತಿದೆ. ಪ್ರತಿ ಕಿಲೋ ಮೀಟರ್ ವ್ಯಾಪ್ತಿಯೊಳಗೆ ಪ್ರಾಥಮಿಕ ಶಾಲೆ ಇರಬೇಕೆನ್ನುವ ಶಿಕ್ಷಣ ಹಕ್ಕು ಕಾಯ್ದೆಯನ್ನು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಉಲ್ಲಂಘಿಸುತ್ತದೆ ಎಂದರು.

‘ಕೆಪಿಎಸ್ ಮ್ಯಾಗ್ನೆಟ್ ಶಾಲೆ ಮಾಡಿ ಸುತ್ತಮುತ್ತಲಿನ ಶಾಲೆಗಳಿಗೆ ಬಸ್ ವ್ಯವಸ್ಥೆ ಮಾಡುತ್ತೇವೆ ಎಂದು ಸರ್ಕಾರ ಹಸಿ ಸುಳ್ಳು ಹೇಳುತ್ತಿದೆ. ಒಂದು ವೇಳೆ ಈ ಯೋಜನೆ ಜಾರಿಗೆ ಬಂದರೆ ಪೋಷಕರಿಗೆ ಆರ್ಥಿಕ ಹೊರೆಯಾಗಲಿದೆ’ ಎಂದರು.‌ ಈ ಯೋಜನೆ ಜಾರಿಯಾದಲ್ಲಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ದಲಿತ, ರೈತ, ಕೂಲಿ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ಪಾತಬಾಗೇಪಲ್ಲಿ ಪೋಷಕರು, ಗ್ರಾಮಸ್ಥರು, ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯು ಸದಸ್ಯರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಶಾಲಾ ಆವರಣದಲ್ಲಿ ರಾಜಕೀಯ ಭಾಷಣ ಖಂಡನೀಯ: ಪದ್ಮರಾಜ್ ಪೂಜಾರಿ ಆಕ್ರೋಶ

ಮಂಗಳೂರು: ಬೆಳ್ತಂಗಡಿಯ ಪೂಂಜಾಲಕಟ್ಟೆಯ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕ ಹರೀಶ್...

ಕರಾವಳಿ ಅಭಿವೃದ್ಧಿಗೆ ವೇಗ: ರೂ. 8,295 ಕೋಟಿ ಮೌಲ್ಯದ ಹೂಡಿಕೆದಾರರ ಕೈಪಿಡಿ ಬಿಡುಗಡೆ

ಕರ್ನಾಟಕ ಜಲಸಾರಿಗೆ ಮಂಡಳಿಯು ₹8,295 ಕೋಟಿ ಮೌಲ್ಯದ, ಸಚಿವ ಸಂಪುಟದ ಅನುಮೋದನೆ...

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರದ ನಿರೀಕ್ಷೆ ಇದೆ: ಸಿಎಂ ಡಿ ಕೆ ಶಿವಕುಮಾರ್

ಮಹಿಳಾ ಮೀಸಲಾತಿಯಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದಲಾವಣೆ ಮಹಿಳೆಯರಿಲ್ಲದ ಪ್ರಜಾಪ್ರಭುತ್ವ ರೆಕ್ಕೆಯಿಲ್ಲದ ಹಕ್ಕಿಯಂತೆ ಮಹಿಳಾ...

ಮಂಗಳೂರು | ತುಳು ಸಾಹಿತ್ಯ ಜಗತ್ತಿಗೆ ತಲುಪಲಿ: ಗಣೇಶ್ ಎಸ್ ರಾವ್

ಪ್ರಾದೇಶಿಕ ಭಾಷೆಯ ಸಾಹಿತ್ಯ ಜಾಗತಿಕ ಭಾಷೆಗೆ ಅನುವಾದಗೊಂಡರೆ ದೇಶೀಯ ಸಾಂಸ್ಕೃತಿಕ ಮೌಲ್ಯಗಳು,...