ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್ ಕಲ್ಪಿಸುವಂತೆ ಇಲ್ಲಿನ ಆನೇಕ ಮಂದಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ತಾಲ್ಲೂಕಿನ ಗೂಳೂರು, ಮಾರ್ಗಾನುಕುಂಟೆ ಮೂಲಕ ಹೊನ್ನಂಪಲ್ಲಿ ಕ್ರಾಸ್‌ನಿಂದ ಗ್ರಾಮಕ್ಕೆ 2 ಕಿ.ಮೀ.ನಷ್ಟು ದೂರ ಇದೆ. ಬಸ್‍ಗಳ ಸಂಚಾರಕ್ಕೆ ಉತ್ತಮ ರಸ್ತೆ ಇದೆ. ಆದರೆ, ಗ್ರಾಮಕ್ಕೆ ಈವರೆಗೆ ಕೆಎಸ್‍ಆರ್‌ಟಿಸಿ ಬಸ್ ಸಂಚಾರ ಇಲ್ಲ ಎಂದು ಗ್ರಾಮಸ್ಥರು ಅವಲತ್ತುಕೊಳ್ಳುತ್ತಾರೆ.
ಪ್ರತಿದಿನ ನೂರಾರು ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ, ಸಾರ್ವಜನಿಕರು ಆಸ್ಪತ್ರೆ, ಮಾರುಕಟ್ಟೆ ಹಾಗೂ ಉದ್ಯೋಗಕ್ಕಾಗಿ ಹತ್ತಿರದ ಪಟ್ಟಣದ ಬಾಗೇಪಲ್ಲಿ ಗೆ ಹೋಗಬೇಕಾಗಿದೆ. ಆದರೆ ಸಕಾಲಕ್ಕೆ ಬಸ್ ಸೌಕರ್ಯ ಇಲ್ಲದಿರುವುದರಿಂದ ಖಾಸಗಿ ವಾಹನಗಳನ್ನು ಅವಲಂಬಿಸಬೇಕಾಗಿದೆ. ಇದರಿಂದಾಗಿ ಹಣ ಮತ್ತು ಸಮಯದ ವ್ಯಯವಾಗುತ್ತಿದ್ದು, ವಿಶೇಷವಾಗಿ ಹೆಣ್ಣುಮಕ್ಕಳು ಹಾಗೂ ವೃದ್ಧರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ
ಗ್ರಾಮಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲ. ಗೂಳೂರು ಬಾಗೇಪಲ್ಲಿ ತೆರಳಲು ಆಟೋ ಇಲ್ಲವೆ ಬೈಕ್ ಅವಲಂಬಿಸಬೇಕು. ಆಸ್ಪತ್ರೆ, ಶಾಲೆ ಕಾಲೇಜುಗಳಿಗೆ ಹೋಗಲು ತೊಂದರೆ ಆಗಿದ್ದು, ಕೂಡಲೇ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು.




