ಬಾಗೇಪಲ್ಲಿ | ಎಸ್‌. ಎನ್. ಸುಬ್ಬಾರೆಡ್ಡಿ ಗೆ ತಪ್ಪಿದ ಸಚಿವ ಸ್ಥಾನ:ಬಾಗೇಪಲ್ಲಿ ಯಲ್ಲಿ ಟೈರ್ ಸುಟ್ಟು ಬೆಂಬಲಿಗರ ಪ್ರತಿಭಟನೆ!

Date:

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಾಗೇಪಲ್ಲಿ ಅಸಮಾಧಾನ ಭುಗಿಲೆದ್ದಿದೆ. ಬಾಗೇಪಲ್ಲಿ ತಾಲ್ಲೂಕು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ಕಾರ್ಯಕರ್ತರು ಅರೆ ಬೆತ್ತಲೆ ಪ್ರದರ್ಶನ ಮಾಡಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

- Advertisement -

ಸಚಿವ ಸಂಪುಟದ ಹೊಸ ಪಟ್ಟಿಯಲ್ಲಿ ಸುಬ್ಬಾರೆಡ್ಡಿ ಅವರಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ರಸ್ತೆ ಮಧ್ಯೆ ಟೈರ್ ಸುಟ್ಟು ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೆಲಕಾಲ ಪ್ರತಿಭಟನೆಯಿಂದ ಸಂಚಾರಕ್ಕೂ ಅಡಚಣೆ ಉಂಟಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗೆ ಸಮರ್ಪಕ ಪ್ರಾತಿನಿಧ್ಯ ನೀಡಿಲ್ಲ ಎಂದು ಆರೋಪಿಸಿದ ಕಾರ್ಯಕರ್ತರು, ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದಿರುವ ನಿರ್ಧಾರವನ್ನು ಮರುಪರಿಶೀಲಿಸಬೇಕೆಂದು ಒತ್ತಾಯಿಸಿದರು.

ಕಾಂಗ್ರೆಸ್ ಪಕ್ಷದ ಮುಂತಾದ ಅಮರನಾಥ ರೆಡ್ಡಿ ಮಾತನಾಡಿ

ಬಾಗೇಪಲ್ಲಿ ಗಡಿ ಭಾಗದ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಸತತ ಮೂರು ಬಾರಿ ಗೆದ್ದಿರುವ ಅವರಿಗೆ ಸಚಿವ ಸ್ಥಾನ ಕೊಡಲೇಬೇಕು. ಪದೇ ಪದೇ ಒಕ್ಕಲಿಗ ಸಮುದಾಯದ ಶಾಸಕರನ್ನ ಕಡೆಗಣಿಸಲಾಗುತ್ತಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಸಚಿವ ಸ್ಥಾನ ಕೊಡಲಿಲ್ಲ. ಎರಡನೇ ಅವಧಿಯ ಡಿ.ಕೆ ಶಿವಕುಮಾರ್ ಅವಧಿಯಲ್ಲಾದರೂ ಸಿಗುವ ನಿರೀಕ್ಷೆ ಇತ್ತು. ಈ ಬಾರಿಯೂ ಸಚಿವ ಸ್ಥಾನದಿಂದ ವಂಚಿಸುತ್ತಿರುವುದು ಸರಿಯಲ್ಲ.ಆದ್ದರಿಂದ ಬುಧವಾರ ಬಾಗೇಪಲ್ಲಿ ತಾಲ್ಲೂಕು ಬಂದ್ ಗೆ ಕರೆ ನೀಡಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಮುಖಂಡ ಸೋಮಶೇಖರ್ ಮಾತನಾಡಿ ಶಾಸಕ ಎಸ್. ಎನದ.ಸುಬ್ಬಾರೆಡ್ಡಿ ಅವರು ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲ್ಲೂಕಿಗೆ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಿದ್ದು, ಪಕ್ಷ ಸಂಘಟನೆ ಬಲಪಡಿಸುವಲ್ಲಿಯೂ ಮಹತ್ವದ ಪಾತ್ರ ವಹಿಸಿದ್ದಾರೆ. ಬಾಗೇಪಲ್ಲಿ ಗಡಿ ಭಾಗದಲ್ಲಿ ಸತತ ಮೂರು ಬಾರಿ ಗೆದ್ದ ಶಾಸಕರನ್ನು ಸಚಿವ ಸಂಪುಟದಿಂದ ಹೊರಗಿಡುವುದು ಚಿಕ್ಕಬಳ್ಳಾಪುರ ಜಿಲ್ಲೆಯ ಜನತೆಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 2028ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ..?ಕೋಲಾರ | ಎಸ್‌ಐಆರ್‌ ಅವಾಂತರ: ಇಷ್ಟು ವರ್ಷ ಮತ ಚಲಾಯಿಸಿದ್ದರೂ ಕೆಲವರ ಹೆಸರು ಗಾಯಬ್…?

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಎ.ವಿ.ಪೂಜಪ್ಪ, ಜಯಪ್ರಕಾಶ್ ನಾರಾಯಣ್, ಬಿ.ವಿ.ವೆಂಕಟರವಣ, ನಂಜುಂಡಪ್ಪ, ಮಹಮ್ಮದ್ ನೂರುಲ್ಲಾ,ಶಿವರಾಮ ರೆಡ್ಡಿ,ಶ್ರೀರಾಮ ನಾಯಕ್, ಶ್ರೀನಿವಾಸ್,ನಿಜಾಮುದ್ದೀನ್ ಬಾಬು, ನವೀನ್,ಗೂಳೂರು ಬಾಬು,ಹಾಗೂ ಇತರೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದೆ : ಸಚಿವ ಶರಣಪ್ರಕಾಶ ಪಾಟೀಲ

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದ್ದು, ಈ...

ಕಲಬುರಗಿ | ‘ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ’

ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಸಮರ್ಪಕವಾಗಿ ಅನುಷ್ಠಾನಗೊಳ್ಳುವುದರ ಜತೆಗೆ ಕಲ್ಯಾಣ ಕರ್ನಾಟಕದಲ್ಲಿನ...

ಯಾದಗಿರಿ | ಅಭಿವೃದ್ಧಿಗೆ ಕಾಮಗಾರಿಗಳಿಗೆ ನಾಗಲೋಟದ ವೇಗ: ಸಚಿವ ಶರಣಪ್ರಕಾಶ್ ಪಾಟೀಲ್

ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ನಾಗಲೋಟದ ವೇಗ ನೀಡಲಾಗುವುದು. ಯಾದಗಿರಿ ಉತ್ಸವ, ಆರೋಗ್ಯ...

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...