ಬಾಗೇಪಲ್ಲಿ | ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಉತ್ತಮ ನಡೆ, ನುಡಿಯನ್ನು ಅಳವಡಿಸಿಕೊಳ್ಳಬೇಕು : ಪ್ರಾಂಶುಪಾಲ ನಂಜಿರೆಡ್ಡಿ

Date:

ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಂಸ್ಕಾರ ಹಾಗೂ ಉತ್ತಮ ನಡೆ, ನುಡಿಯನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಬಾಗೇಪಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ನಂಜಿರೆಡ್ಡಿ ಅಭಿಮತ ವ್ಯಕ್ತಪಡಿಸಿದರು.

- Advertisement -

ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕಾಲೇಜು ಆಡಳಿತಮಂಡಳಿಯಿಂದ ಅಯೋಜಿಸಿದ್ದ 2026 ನೇ ಸಾಲಿನ ಕಾಲೇಜು ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬಹುತೇಖ ವಿದ್ಯಾರ್ಥಿಗಳು ಬೆಳೆಯುತ್ತಿದ್ದಂತೆ ತಮ್ಮ ಬಾಲ್ಯದ ಹವ್ಯಾಸಗಳನ್ನು ಬದಲಿಸಿಕೊಂಡು ಹೊಸದಾದ ಹವ್ಯಾಸಗಳತ್ತ ಆಸಕ್ತರಾಗುತ್ತಾರೆ ಆದರೆ ನಿಮ್ಮ ಅಯ್ಕೆ ಸರಿ ದಾರಿಯನ್ನು ಮಾತ್ರ ಅಯ್ಕೆ ಮಾಡಿಕೊಳ್ಳಬೇಕಾಗಿದೆ. ಉತ್ತಮ ವ್ಯಕ್ತಿತ್ವವುಳ್ಳ ಸ್ನೇಹಿತರ ಸಹವಾಸಗಳನ್ನು ಮಾಡಿ ಉನ್ನತ ಗುರಿಗಳತ್ತ ಸಾಗುವ ಸಂಕಲ್ಪ ಮಾಡಿಕೊಳ್ಳಬೇಕಾಗಿದೆ. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಕಲಿತು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸುವಂತಹ ಮನೋಭಾವನೆಗಳನ್ನು ಅಳವಡಿಸಿಕೊಳ್ಳಬೇಕಾಗಿದೆ. ಪ್ರೌಢ ಶಾಲೆಯಿಂದ ಕಾಲೇಜು ಮೆಟ್ಟಿಲು ಹತ್ತುತ್ತಿದ್ದಂತೆ ತಮ್ಮ ಎಲ್ಲಾ ರೀತಿಯ ಶೈಲಿಗಳನ್ನು ಬದಲಿಸಿಕೊಂಡು ಜೀವನದಲ್ಲಿ ಬಹುದೊಡ್ಡ ಸಾಧನೆ ಮಾಡಿದ್ದೇವೆ ಎಂಬ ಭಾವನೆಯಿಂದ ಹೊರಬಂದು ಭವಿಷ್ಯದ ಬದುಕುನ್ನು ಕಟ್ಟಿಕೊಳ್ಳಲು ಆಗತ್ಯವಾದ ಶಿಕ್ಷಣ, ನಡೆ, ನುಡಿಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ತಂದೆ ತಾಯಿ, ಗುರು ಹಿರಿಯರನ್ನು ಗೌರವಿಸುವ ಸಂಸ್ಕಾರ ರೂಡಿಸಿಕೊಂಡು ಸಾಧನೆಯತ್ತ ಮುನ್ನಡೆದು ಸಮಾಜದ ಉತ್ತಮ ಪ್ರಜೆಯಾಗಿ ಕಾಲೇಜು ಕೀರ್ತಿಯನ್ನು ಹೆಚ್ಚಿಸ ಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಇದನ್ನು ಓದಿದ್ದೀರಾ..? ಕೋಲಾರ | ಯುಜಿಡಿ ಕಾಮಗಾರಿ ಪೂರ್ಣಗೊಳ್ಳುವವರೆಗೆ ಹೊಸ ರಸ್ತೆ ನಿರ್ಮಾಣವಿಲ್ಲ: ಶಾಸಕ ಕೊತ್ತೂರು ಮಂಜುನಾಥ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷೆ ಸರಸ್ವತಮ್ಮ ಶಿವರಾಮರೆಡ್ಡಿ, ಮುಖಂಡರಾದ ಎಸ್.ಎನ್.ನರಸಿಂಹಪ್ಪ, ಶ್ರೀನಿವಾಸ್, ಪಿ.ಎನ್.ನರಸಿಂಹಪ್ಪ, ಮಲ್ಲಿಕಾರ್ಜುನರೆಡ್ಡಿ, ಪ್ರಭಾವತಿ, ಉಪನ್ಯಾಸಕರಾದ ಪಿ.ಎನ್.ಶಿವಕುಮಾರ್, ಎಸ್.ವಿ.ಕೃಷ್ಣ, ಅಶ್ವಿನಿ, ಪುಷ್ಪಾ, ಅಂಜಲಿ, ವೇದಾವತಿ, ಅರುಣ್, ಲಕ್ಷ್ಮೀ, ಮತ್ತಿತರರು ಇದ್ದರು..

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ...