ಬಾಗೇಪಲ್ಲಿ | ಗೂಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕವಿ.ವೆಂಕಟೇಶ್ ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ

Date:

ತಾಲ್ಲೂಕು ಗೂಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾದ ವಿ.ವೆಂಕಟೇಶ್ ಅವರು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

30 ವರ್ಷಗಳಿಂದ ಅವರು ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ವಿ.ವೆಂಕಟೇಶ್ ಅವರು ಕೆಲಸ ನಿರ್ವಹಿಸಿದ ಶಾಲೆಗಳಲ್ಲಿ ಎಸ್‌ಡಿಎಂಸಿ ಸಮುದಾಯ ಸಹಶಿಕ್ಷಕರು ಸೇರಿದಂತೆ ಎಲ್ಲರ ಸಹಕಾರದಲ್ಲಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ವಿದ್ಯಾರ್ಥಿಗಳಿಗೆ ವಿವಿಧ ನಾವೀನ್ಯ ರೀತಿಯ ಬೋಧನಾ ತಂತ್ರಗಳನ್ನು ಹಾಗೂ ತಾಂತ್ರಿಕ ಉಪಕರಣಗಳನ್ನು ಬಳಸಿಕೊಂಡು ಕಲಿಸಿದ್ದಾರೆ.

ಇದನ್ನು ಓದಿದ್ದೀರಾ..?ಕೋಲಾರ | ಪ್ರಜಾ ಆಂದೋಲನ ಕಾರ್ಯಕ್ರಮ: ಒಂದೇ ವೇದಿಕೆಯಲ್ಲಿ ನೂರಾರು ಸಮಸ್ಯೆಗಳಿಗೆ ಪರಿಹಾರ: ಅಂಬರೀಷ್

ಶಾಲೆಯ ಪರಿಸರ ಆಕರ್ಷಕಗೊಳಿಸಲು ಶ್ರಮಿಸಿದ್ದಾರೆ. ಹೀಗೆ ತಾವು ಕೆಲಸ ನಿರ್ವಹಿಸಿದ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಅವರ ಪಾತ್ರ ಪ್ರಮುಖವಾಗಿದೆ. ಈ ಎಲ್ಲವನ್ನು ಪರಿಗಣಿಸಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಲಾಗಿದೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...