4.8 ಕೋಟಿ ರೂ. ಪತ್ತೆ ಪ್ರಕರಣ: ಬಿಜೆಪಿ ಸಂಸದ ಸುಧಾಕರ್‌ಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌

Date:

Advertisements

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ ಕೆ ಸುಧಾಕರ್‌ಗೆ ಹೈಕೋರ್ಟ್‌ ಬಿಗ್ ರಿಲೀಫ್ ನೀಡಿದೆ. ಲೋಕಸಭಾ ಚುನಾವಣೆ ವೇಳೆ ಮಾದನಾಯಕನಹಳ್ಳಿ ಮನೆಯಲ್ಲಿ 4.8 ಕೋಟಿ ರೂ. ಪತ್ತೆಯಾಗಿತ್ತು. ಹಣ ಕೆ ಸುಧಾಕರ್ ಗೆ ಸೇರಿದ್ದು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣ ರದ್ದು ಕೋರಿ ಡಾ.ಕೆ. ಸುಧಾಕರ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರುಣ್ ಅವರಿದ್ದ ಏಕಸದಸ್ಯ ಪೀಠ ಎಫ್‌ಐಆರ್‌ ರದ್ದುಗೊಳಿಸಿ ಆದೇಶ ಪ್ರಕಟಿಸಿದೆ.

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನದ ಹಿಂದಿನ ದಿನ ಚುನಾವಣಾ ಆಯೋಗದ ಅಧಿಕಾರಿಗಳು ಗೋವಿಂದಪ್ಪ ಅವರ ಮನೆಯಿಂದ 4.8 ಕೋಟಿ ರೂಪಾಯಿ ಹಣವನ್ನು ಜಪ್ತಿ ಮಾಡಿದ್ದರು. ಈ ಹಣ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಮತದಾರರಿಗೆ ಹಂಚುವ ಉದ್ದೇಶದಿಂದ ಇರಲಿಸಲಾಗಿತ್ತು ಎಂದು ಆರೋಪಿಸಲಾಗಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದೇವರು-ಧರ್ಮದ ದುರುಪಯೋಗ ಸಮಾಜಕ್ಕೆ ಒಳಿತು ಮಾಡುವುದಿಲ್ಲ

ಪ್ರಕರಣದ ಕುರಿತು ಚುನಾವಣಾ ನೀತಿ ಸಂಹಿತೆ ಜಾರಿ ತಂಡದ ಅಧಿಕಾರಿ ಮಾದನಾಯಕಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಫ್‌ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದ ಪೊಲೀಸರು ನೆಲಮಂಗಲ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಸುಧಾಕರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಕಾಂಗ್ರೆಸ್ ಪಕ್ಷ ಇದನ್ನು ಡಾ.ಕೆ.ಸುಧಾಕರ್ ಹಾಗೂ ಬಿಜೆಪಿ ವಿರುದ್ಧ ರಾಜಕೀಯ ಅಸ್ತ್ರವಾಗಿ ಬಳಸಿತ್ತು . ಆದರೆ ಹೈಕೋರ್ಟ್ ತೀರ್ಪಿನಿಂದ ಬಿಜೆಪಿ ಶಿಬಿರದಲ್ಲಿ ಸಂತೋಷ ವ್ಯಕ್ತವಾಗಿದ್ದು, ಈ ಆರೋಪ ಸಂಸದ ಡಾ.ಕೆ.ಸುಧಾಕರ್ ಅವರ ವಿರುದ್ಧ ನಡೆದಿದ್ದ ಷಡ್ಯಂತ್ರ ಎಂಬುದು ಸಾಬೀತಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X