ಚಿಕ್ಕಬಳ್ಳಾಪುರ | ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಕೈಗಾರಿಕಾ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಬಾರದು : ರವಿ ಕೃಷ್ಣಾ ರೆಡ್ಡಿ

Date:

ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿ ವ್ಯಾಪ್ತಿಯ 13 ಗ್ರಾಮಗಳ ಸುಮಾರು 2,390 ಎಕರೆ ಫಲವತ್ತಾದ ಕೃಷಿ ಭೂಮಿಯಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಸರಕಾರ ಮುಂದಾಗಿರುವುದನ್ನು ಹಾಗೂ ಭೂಸ್ವಾಧೀನಕ್ಕೆ ಕೆಐಎಡಿಬಿ ನೋಟಿಸ್ ನೀಡಿರುವುದನ್ನು ವಿರೋಧಿಸಿ ರೈತ ಸಂಘ,ಹಸಿರು ಸೇನೆ ಹಾಗೂ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಗರ ಹೊರವಲಯದ ಜಿಲ್ಲಾಡಳಿತ ಭವನದ ಮುಂಭಾಗ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಬುಧವಾರ 136ನೇ ದಿನಕ್ಕೆ ಕಾಲಿಟ್ಟಿತು.

ಹೋರಾಟಕ್ಕೆ ಬೆಂಬಲ ಸೂಚಿಸಿ ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯಾಧ್ಯಕ್ಷ ರವಿ ಕೃಷ್ಣಾ ರೆಡ್ಡಿ ಧರಣಿ ಸ್ಥಳಕ್ಕೆ ಭೇಟಿ ನೀಡಿ,ಆಗಸ್ಟ್ ತಿಂಗಳ ಎರಡನೇ ವಾರದಲ್ಲಿ ಜಂಗಮಕೋಟೆಯಿಂದ ಬೃಹತ್ ಬೈಕ್ ರ್ಯಾಲಿ ನಡೆಸುವುದಾಗಿ ಘೋಷಿಸಿದರು.

ಈ ವೇಳೆ ಮಾತನಾಡಿದ ಅವರು ಫಲವತ್ತಾದ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಕೈಗಾರಿಕಾ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಬಾರದು ನಮ್ಮ ಭೂಮಿ ನಮ್ಮ ಹಕ್ಕು ಅದನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡಬಾರದು.ರೈತರು ತಮ್ಮ ಹಕ್ಕಿಗಾಗಿ ಸಂಘಟಿತವಾಗಿ ಹೋರಾಟ ಮುಂದುವರಿಸಬೇಕು ಎಂದು ಕರೆ ನೀಡಿದರು.
ಬೆಂಗಳೂರು ಸುತ್ತಮುತ್ತಲಿನ ಹಸಿರು ಪ್ರದೇಶಗಳು ಮತ್ತು ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕೆಗಾಗಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವುದು ಸರಿಯಲ್ಲ ಎಂದು ಪ್ರಶ್ನಿಸಿದ ರವಿ ಕೃಷ್ಣಾ ರೆಡ್ಡಿ,ರಾಜ್ಯದ ವಿವಿಧ ಭಾಗಗಳಲ್ಲಿ ರೈತರ ಭೂಮಿ ಸಂಬಂಧ ನಡೆಯುತ್ತಿರುವ ಹೋರಾಟಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ ಬೆಂಬಲವಾಗಿ ನಿಂತಿದೆ ಎಂದು ತಿಳಿಸಿದರು.

ದೇಶಕ್ಕೆ ಅನ್ನ ನೀಡುವ ರೈತರು ಇಂದು ಮಳೆ ಕೊರತೆ, ಬೆಳೆ ಕುಸಿತ ಹಾಗೂ ಮಾರುಕಟ್ಟೆ ಸಂಕಷ್ಟ ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.ಇಂತಹ ಸಂದರ್ಭದಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವುದು ಅತ್ಯಂತ ನೋವಿನ ಸಂಗತಿ.ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು ರೈತರು ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ವಿಷಾದನೀಯ. ಭೂಸ್ವಾಧೀನದಿಂದ ಭೂಮಿ ಕಳೆದುಕೊಳ್ಳುವ ರೈತರಿಗೆ ಮುಂದಿನ ದಿನಗಳಲ್ಲಿ ಆದಾಯದ ಮೂಲವೇ ಉಳಿಯುವುದಿಲ್ಲ.ತಾವು ಕಳೆದುಕೊಂಡ ಜಮೀನಿನಲ್ಲೇ ನಿರ್ಮಾಣವಾಗುವ ಕಾರ್ಖಾನೆಗಳಲ್ಲಿ ಉದ್ಯೋಗ ಮಾಡುವ ಪರಿಸ್ಥಿತಿ ಎದುರಾಗಬಹುದು.ರಾಜಕಾರಣಿಗಳು ತಮ್ಮ ನೈತಿಕತೆಯನ್ನು ಪ್ರಶ್ನಿಸಿಕೊಂಡು ರೈತರ ಪರ ನಿಲುವು ತಾಳಬೇಕು ಎಂದರು.

ಆನೇಕಲ್,ಬಿಡದಿ,ಜಂಗಮಕೋಟೆ ಹಾಗೂ ಇತರ ಭಾಗಗಳ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಕೈಬಿಡುವಂತೆ ಆಗ್ರಹಿಸಿ ಮುಂದಿನ ದಿನಗಳಲ್ಲಿ ಮೂರು ದಿನಗಳ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದ ಅವರು,ಎಲ್ಲ ರೈತರೂ ಸಂಘಟಿತವಾಗಿ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

- Advertisement -

ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಮಾತನಾಡಿ ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಬೇಕು ಎಂದು ಜಂಗಮಕೋಟೆ 13 ಹಳ್ಳಿಗಳ ರೈತರು ನಡೆಸುತ್ತಿರುವ ಹೋರಾಟ 136ನೇ ದಿನಕ್ಕೆ ಕಾಲಿಟ್ಟಿದೆ. ಆದರೂ ಸರ್ಕಾರ ಮೌನ ವಹಿಸಿರುವುದು ಬೇಸರದ ಸಂಗತಿ.
ಕೈಗಾರಿಕೆಗಾಗಿ ಬಂಜರು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಫಲವತ್ತಾದ ಕೃಷಿ ಭೂಮಿಯ ಮೇಲೆಯೇ ಸರ್ಕಾರ ಏಕೆ ಕಣ್ಣಿಟ್ಟಿದೆ ಎಂಬುದು ಅರ್ಥವಾಗುತ್ತಿಲ್ಲ.ಹೋರಾಟವು 150ನೇ ದಿನಕ್ಕೆ ತಲುಪಿದ ಸಂದರ್ಭದಲ್ಲಿ ಬೃಹತ್ ಚಳುವಳಿ ನಡೆಸಲು ರೂಪರೇಷೆ ಸಿದ್ಧಪಡಿಸಲಾಗುತ್ತಿದೆ. ನಮ್ಮ ಹೋರಾಟಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷ ಬೆಂಬಲ ಸೂಚಿಸಿದ್ದು, ಅದರ ಭಾಗವಾಗಿ ಬೃಹತ್ ಬೈಕ್ ರ್ಯಾಲಿ ನಡೆಸುವುದಾಗಿ ಘೋಷಿಸಿದೆ. ಇದು ರೈತರ ಹೋರಾಟಕ್ಕೆ ಮತ್ತಷ್ಟು ಶಕ್ತಿ ನೀಡಿದೆ.

ಜಂಗಮಕೋಟೆ ಹೋಬಳಿ ವ್ಯಾಪ್ತಿಯ 13 ಗ್ರಾಮಗಳ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಹೀರೆಬಲ್ಲ ಕೃಷ್ಣಪ್ಪ ಮಾತನಾಡಿ ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಬೇಕು ಎಂಬ ಆಗ್ರಹದೊಂದಿಗೆ ಕಳೆದ 136 ದಿನಗಳಿಂದ ವಿವಿಧ ರೀತಿಯ ಹೋರಾಟಗಳನ್ನು ನಡೆಸಲಾಗುತ್ತಿದೆ.ನಮ್ಮ ಹೋರಾಟಕ್ಕೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದು,ಹಗಲು-ರಾತ್ರಿ ಎನ್ನದೆ ನಿರಂತರ ಧರಣಿ ನಡೆಸಲಾಗುತ್ತಿದೆ.ಆದರೂ ಸರಕಾರ ಮೌನ ವಹಿಸಿದೆ ಹೋರಾಟಕ್ಕೆ ಅಡ್ಡಿಪಡಿಸುವ ಪ್ರಯತ್ನಗಳೂ ನಡೆದಿವೆ.ಆದರೆ ಯಾವುದೇ ಒತ್ತಡಕ್ಕೂ ಜಗ್ಗುವುದಿಲ್ಲ ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವವರೆಗೆ ಹೋರಾಟವನ್ನು ನಿರಂತರವಾಗಿ ಮುಂದುವರಿಸಲಾಗುವುದು. ಇಂದು ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್)ಪಕ್ಷ ನಮ್ಮ ಪರವಾಗಿ ನಿಂತು ಬೃಹತ್ ಬೈಕ್ ರ್ಯಾಲಿ ನಡೆಸುವುದಾಗಿ ಘೋಷಿಸಿರುವುದು ಹೋರಾಟಕ್ಕೆ ಮತ್ತಷ್ಟು ಬಲ ನೀಡಿದೆ ಎಂದರು.

ಈ ವೇಳೆ ಅಪರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ ಅವರು,ಜಂಗಮಕೋಟೆ ಹೋಬಳಿ ವ್ಯಾಪ್ತಿಯ 13 ಗ್ರಾಮಗಳ ಸಾವಿರಾರು ರೈತರಿಗೆ ಕೃಷಿಯೇ ಬದುಕಿನ ಆಧಾರವಾಗಿದ್ದು,ಫಲವತ್ತಾದ ಭೂಮಿಯನ್ನು ಕಳೆದುಕೊಂಡರೆ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ ಕೈಗಾರಿಕಾ ಅಭಿವೃದ್ಧಿ ಅಗತ್ಯವಿದ್ದರೆ ಬಂಜರು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು,ಫಲವತ್ತಾದ ಕೃಷಿ ಭೂಮಿಯನ್ನು ಅಲ್ಲ ರೈತರೊಂದಿಗೆ ಸಮಗ್ರ ಚರ್ಚೆ ನಡೆಸದೆ ಯಾವುದೇ ಭೂಸ್ವಾಧೀನ ಪ್ರಕ್ರಿಯೆಯನ್ನು ಮುಂದುವರಿಸಬಾರದು.ರೈತರ ಬದುಕಿನೊಂದಿಗೆ ಚೆಲ್ಲಾಟ ಆಡಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ತನ್ನ ಮನವಿಪತ್ರದಲ್ಲಿ ಎಚ್ಚರಿಕೆ ನೀಡಿದೆ.

ಇದನ್ನು ಓದಿದ್ದೀರಾ..?ಕೆಜಿಎಫ್ | ಶಿಕ್ಷಕರ ಕರ್ತವ್ಯ ನಿಷ್ಠೆ ಸಮಾಜಕ್ಕೆ ಮಾದರಿ: ದೇವೇರಹಳ್ಳಿ ನಾರಾಯಣಸ್ವಾಮಿ

ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ರಾಜಣ್ಣ, ಸಿಕಲ್ ಆನಂದ್ ಗೌಡ,ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ,ಜಂಗಮಕೋಟೆ 13 ಹಳ್ಳಿಗಳ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಹೀರೆಬಲ್ಲ ಕೃಷ್ಣಪ್ಪ,ರೈತ ಸಂಘದ ಜಿಲ್ಲಾಧ್ಯಕ್ಷ ರಾಮನಾಥ್ ರೆಡ್ಡಿ,ಜಿಲ್ಲಾ ಕಾರ್ಯದರ್ಶಿ ಗೋಪಾಲ್,ಮರಳುಕುಂಟೆ ರಾಮಾಂಜಿನಪ್ಪ,ತಾದೂರು ಮಂಜುನಾಥ್,ಅಶ್ವಥ್ ನಾರಾಯಣ ಗೌಡ,ಅಜಿತ್ ಕುಮಾರ್,ಡಿಎಸ್ಎಸ್ ಸಂಚಾಲಕ ಎನ್. ವೆಂಕಟೇಶ್,ಹೊಂಬೆ ಗೌಡ,ಕೃಷ್ಣ ಮೂರ್ತಿ,ರಾಘವೇಂದ್ರ,ಮೋಹನ್,ಗೌರಮ್ಮ,ಭಾಗ್ಯಮ್ಮ,ಪದ್ಮಮ್ಮ,ಕೆ.ಆರ್.ಎಸ್ ನ ಕಾರ್ಯದರ್ಶಿ ಹಾಗೂ ಚಿಕ್ಕಬಳ್ಳಾಪುರ ಉಸ್ತುವಾರಿ ಶ್ರೀ ನಿವಾಸ್,ಸಂಘಟನಾ ಕಾರ್ಯದರ್ಶಿ ಆನಂದ್,ಜಿಲ್ಲಾ ಉಪಾಧ್ಯಕ್ಷ ರಾಜಕುಮಾರ್,ಶಿವಾರೆಡ್ಡಿ,ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಮತ್ತು ಇತರರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರ: ದುರಸ್ತಿಗೆ ದಲಿತ ಸೇನೆ ಆಗ್ರಹ

ಮಳಖೇಡದಿಂದ ಚಿತ್ತಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ...

ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಲಕ್ಷಾಂತರ ಮತದಾರರ ಹೆಸರುಗಳು...

ಉಡುಪಿ | ಓವರ್‌ಪಾಸ್‌ ಉದ್ಘಾಟನೆಯಾದರೂ ಸರ್ವಿಸ್‌ ರಸ್ತೆಗೆ ಮುಕ್ತಿ ಸಿಕ್ಕಿಲ್ಲ; ಧೂಳಿನಿಂದ ವಾಹನ ಸವಾರರಿಗೆ ಸಂಕಷ್ಟ

ಉಡುಪಿ ನಗರದ ಕರಾವಳಿ ಜಂಕ್ಷನ್‌ನಿಂದ ಕಿನ್ನಿಮೂಲ್ಕಿವರೆಗಿನ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿರುವ ಸರ್ವಿಸ್‌...