ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನುಷ ಘಟನೆ ಬೆಳಕಿಗೆ ಬಂದಿದ್ದು, ಪೋಷಕರ ದೂರಿನ ಮೇರೆಗೆ ಬಾಗೇಪಲ್ಲಿ ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮನೆ ಅಂಗಳದಲ್ಲಿ ಆಡುತ್ತಿದ್ದ ಬಾಲಕಿಯನ್ನು ದುಷ್ಕರ್ಮಿ ಪುಸಲಾಯಿಸಿ ದೌರ್ಜನ್ಯ ಎಸಗಿದ್ದಾನೆ. ಮಗುವಿನ ನಿತ್ಯದ ಚಟುವಟಿಕೆಯಲ್ಲಿ ಅಸಹಜತೆ ಗಮನಿಸಿದ ಪೋಷಕರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದನ್ನು ಧೃಢಪಡಿಸಿದ್ದಾರೆ.
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತಾಲೂಕು ವೈದ್ಯಾಧಿಕಾರಿ ಡಾ. ಸಿ.ಎನ್. ಸತ್ಯನಾರಾಯಣ ರೆಡ್ಡಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಸದಸ್ಯ ಎ.ಜಿ. ಸುಧಾಕರ್ ಮತ್ತು ಇನ್ಸ್‌ಪೆಕ್ಟರ್ ಅಜಯ್ ಸಾರಥಿ ಆಸ್ಪತ್ರೆಯಲ್ಲಿರುವ ಬಾಲಕಿಯನ್ನು ಭೇಟಿ ಮಾಡಿದ್ದಾರೆ.




