ಸಿಎನ್ಜಿ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಘಟನೆಯಲ್ಲಿ ಚಾಲಕ ನರಸಿಂಹಮೂರ್ತಿ ಹಾಗೂ ಮಾದಪ್ಪ ಎಂಬವರಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುನೇಗಲ್ ಬಳಿ ತಿರುವು ಪಡೆಯಲು ನಿಂತಿದ್ದ ಸಿಎನ್‍ಜಿ ಸಿಲಿಂಡರ್ ತುಂಬಿದ್ದ ಲಾರಿಗೆ, ಕಲ್ಲು ದಿಮ್ಮಿಗಳನ್ನ ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ. ಅಪಘಾತದ ರಭಸಕ್ಕೆ ಸಿಎನ್‍ಜಿ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರ | ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅರ್ಥಮಾಂತ್ರಿಕನಿಗೆ ಶ್ರದ್ಧಾಂಜಲಿ
ಘಟನೆಯಿಂದ ಹುನೇಗಲ್ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಆಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಹಾನಿಗೊಳಗಾದ ವಾಹನ ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.