ಚಿಕ್ಕಬಳ್ಳಾಪುರ | ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

Date:

ಚಿಕ್ಕಬಳ್ಳಾಪುರ ಕಾರ್ಮಿಕರಿಗೆ ಕಾನೂನುಬದ್ಧ ಕನಿಷ್ಠ ವೇತನವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಬಲವಂತದ ಭೂಸ್ವಾಧೀನವನ್ನು ತಕ್ಷಣವೇ ನಿಲ್ಲಿಸಬೇಕು. ಕಾರ್ಪೊರೇಟ್ ಕಂಪನಿಗಳಿಗೆ ಕೃಷಿ ಭೂಮಿ ಹಂಚಿಕೆ ಮಾಡುವುದನ್ನು ನಿಲ್ಲಿಸಬೇಕು. ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಕೂಡಲೇ ಜಾರಿಗೊಳಿಸಬೇಕು ಎಂದು
ವಿವಿಧ ಸಂಘಟನೆಗಳ ನೇತೃತ್ವದಲ್ಲಿ ದೇಶಾದ್ಯಂತ ಇಂದು ಜೈಲ್ ಭರೋ, ರಸ್ತೆ ತಡೆ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಸಂಘಟನೆಗಳ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಬೆಳಿಗ್ಗೆ 11 ಗಂಟೆಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ಕಾರ್ಯಕರ್ತರು, ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ವಿಬಿ-ಜಿ ರಾಮ್ ಜಿ’ ಯೋಜನೆ ರದ್ದುಗೊಳಿಸಬೇಕು, ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು, ಬಲವಂತದ ಭೂಸ್ವಾಧೀನ ನಿಲ್ಲಿಸಬೇಕು ಹಾಗೂ ಕನಿಷ್ಠ ಮೂಲ ವೇತನ ಜಾರಿ ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಸರ್ಕಾರ ಕಾರ್ಮಿಕ ಪರ ನೀತಿಗಳನ್ನು ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ‌.

ಈ ಸಂದರ್ಭದಲ್ಲಿ ಮುಖಂಡ ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ ಗ್ರಾಮೀಣ ಜನರ ಬದುಕಿಗೆ ಬಿಜೆಪಿ ಸರ್ಕಾರ ಚಪ್ಪಡಿ ಎಳೆದಿದೆ. ಕಾರ್ಪೊರೇಟ್ ಸಂಸ್ಥೆಗಳು ದೇಶ ಹಾಗೂ ರಾಜ್ಯದ ಸಂಪನ್ಮೂಲಗಳನ್ನು ಆಳುತ್ತಿವೆ. ಕಾರ್ಪೊರೇಟ್ ಸಂಸ್ಥೆಗಳು ಈ ದೇಶವನ್ನು ಬಿಟ್ಟು ತೊಲಗಬೇಕು. ಬಂಡವಾಳಗಾರರ ಹಿತ ಕಾಪಾಡುವುದರ ಬದಲು ರೈತರು ಮತ್ತು ಕೂಲಿಕಾರ್ಮಿಕರ ಹಿತವನ್ನು ರಕ್ಷಿಸಬೇಕು.

ಕಾರ್ಮಿಕರ ಶೋಷಣೆಯಿಂದ ಮುಕ್ತಿ ಕಲ್ಪಿಸುವ ನಿಟ್ಟಿನಲ್ಲಿ ಹೋರಾಟವನ್ನು ಮುಂದುವರಿಸಲಾಗುವುದು. ರೈತರು, ಕೂಲಿಕಾರ್ಮಿಕರು ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ ಎತ್ತಲಾಗುವುದು ಎಂದರು. ಕೇಂದ್ರ ಸರ್ಕಾರವು ತೆರಿಗೆ ಸಂಗ್ರಹದ ಬಹುಪಾಲನ್ನು ತನ್ನ ಹಿಡಿತದಲ್ಲಿಟ್ಟುಕೊಂಡು ರಾಜ್ಯಗಳಿಗೆ ಸಮರ್ಪಕ ಪಾಲು ನೀಡುತ್ತಿಲ್ಲ.
ಇದರಿಂದ ರಾಜ್ಯಕ್ಕೆ ಅಗತ್ಯ ಪ್ರಮಾಣದ ಅನುದಾನ ದೊರೆಯುತ್ತಿಲ್ಲ ಎಂದು ಅವರು ಆರೋಪಿಸಿದರು.ನರೇಗಾ ಅನುದಾನದ ಕೊರತೆಯಿಂದ ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗದ ಅವಕಾಶಗಳು ಕಡಿಮೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬಂಡವಾಳಶಾಹಿ ಸರ್ಕಾರದ ನೀತಿಗಳ ವಿರುದ್ಧ ಹೋರಾಟ ನಡೆಸಲಾಗುತ್ತಿದೆ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಳಿಕ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದು, ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.

ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ಬಸ್​​ಗಾಗಿ ವಿದ್ಯಾರ್ಥಿಗಳು ಪರದಾಟ.. ಬಸ್ ಬಾಗಿಲಿಗೆ ಜೋತು ಬಿದ್ದು ಪ್ರಯಾಣ..!ಶಾಲೆ-ಕಾಲೇಜ್​ ಸಮಯಕ್ಕೆ ಪ್ರತ್ಯೇಕ ಬಸ್​ ಸಂಚರಿಸಲಿ

ಪ್ರತಿಭಟನೆಯಲ್ಲಿ ಮುಖಂಡ ಎಂ.ಎನ್.ರಘುರಾಮ ರೆಡ್ಡಿ, ಜಿ.ಕೃಷ್ಣಪ್ಪ, ವಾಲ್ಮೀಕಿ ಅಶ್ವತ್ಥಪ್ಪ, ಇಮ್ರಾನ್, ಚನ್ನರಾಯಪ್ಪ, ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ವಿದ್ಯಾರ್ಥಿನಿಯರಿಗಾಗಿ ಇನ್ನೂ ಎರಡು ವಸತಿ ನಿಲಯ : ಸಚಿವ ಶಿವರಾಜ ತಂಗಡಗಿ

ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು...

ಚಿಕ್ಕಮಗಳೂರು | ಸೆ. 26ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು ನಗರದಲ್ಲಿ 66/11 ಕೆ.ವಿ. ಹಿರೇಮಗಳೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...

ಯಾದಗಿರಿ | ಪೌಷ್ಟಿಕ ಆಹಾರದಿಂದ ಮಕ್ಕಳ ಆರೋಗ್ಯಕರ ಬೆಳವಣಿಗೆ: ಮಹಾದೇವಮ್ಮ ಕುರ್ಕುಂದಿ

ಮಕ್ಕಳ ಆರೋಗ್ಯಕರ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೌಷ್ಟಿಕ ಮತ್ತು ಸಮತೋಲಿತ...