ಚಿಕ್ಕಬಳ್ಳಾಪುರ | ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆ ಹತ್ತಿಕ್ಕಿರುವುದು ಖಂಡನೀಯ: ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್

Date:

ನೀಟ್ ಪರೀಕ್ಷೆಯ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದರೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತದೆ.ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಪ್ರಶ್ನಿಸುವುದು ಪ್ರತಿಯೊಬ್ಬರ ಹಕ್ಕಾಗಿದ್ದು,ಕೇಂದ್ರ ಸರಕಾರ ಈ ವಿಚಾರವನ್ನು ಸಕಾರಾತ್ಮಕವಾಗಿ ಪರಿಗಣಿಸಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಸಂಬಂಧಿಸಿದ ಸಚಿವರು ರಾಜೀನಾಮೆ ನೀಡಬೇಕು.ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯ ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಬುಧವಾರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕುಬೇರ್ ಅಚ್ಚು ಅವರ ನೇತೃತ್ವದಲ್ಲಿ ನಗರದ ಶಿಡ್ಲಘಟ್ಟ ವೃತ್ತದಲ್ಲಿ ನಡೆದ ಜನಸಭೆ ಹಾಗೂ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ದೇಶದ ಯುವಕರ ಭವಿಷ್ಯ,ಶಿಕ್ಷಣ ಮತ್ತು ಉದ್ಯೋಗ ಅತ್ಯಂತ ಮಹತ್ವದ್ದಾಗಿದೆ.ಯುವಕರ ಭವಿಷ್ಯಕ್ಕಾಗಿ ನಡೆಯುವ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಿರುವುದು ತೀವ್ರ ಖಂಡನೀಯ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಮೇಲಿನ ಹಲ್ಲೆ ವಿರುದ್ಧ ಕಾಂಗ್ರೆಸ್ ಪಕ್ಷ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದೆ.ಆದರೆ ರಾಹುಲ್ ಗಾಂಧಿ ಅವರನ್ನು ಬಂಧಿಸುವ ಮೂಲಕ ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗಿದೆ ಎಂದು ಆರೋಪಿಸಿದರು.ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರತಿಯೊಬ್ಬ ಪ್ರಜೆಗೂ ಶಿಕ್ಷಣ ದೊರೆಯಬೇಕು ಎಂಬ ಆಶಯದೊಂದಿಗೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ್ದಾರೆ.ಪ್ರತಿಯೊಬ್ಬರಿಗೂ ಶಿಕ್ಷಣ ಒದಗಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾದರೆ ಸಂಬಂಧಪಟ್ಟ ಸಚಿವರು ರಾಜೀನಾಮೆ ನೀಡಬೇಕು ಆದರೆ ಇದುವರೆಗೂ ಸಚಿವರು ರಾಜೀನಾಮೆ ನೀಡದಿರುವುದು ಖಂಡನೀಯ ಎಂದರು.

ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಕೇಂದ್ರ ಸರಕಾರವೇ ನೇರ ಹೊಣೆಗಾರಿಕೆಯಾಗಿದೆ.ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆದರೂ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇಂದಿಗೂ ಒಂದು ಮಾತನ್ನೂ ಆಡಿಲ್ಲ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರೆ ಅವರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ.ದೇಶದ ಭವಿಷ್ಯವಾಗಿರುವ ಯುವಕರ ಮೇಲೆ ಇಂತಹ ದೌರ್ಜನ್ಯ ನಡೆಸುವುದು ಸರಿಯೇ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದಾಗ ವಿರೋಧ ಪಕ್ಷದ ನಾಯಕರನ್ನೇ ಬಂಧಿಸಲಾಗುತ್ತಿದೆ.ಕಾಂಗ್ರೆಸ್ ಪಕ್ಷ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದೆ.ಆದರೆ ಬಿಜೆಪಿ ಸರಕಾರಕ್ಕೆ ಒಂದು ಪರೀಕ್ಷೆಯನ್ನೂ ಸಮರ್ಪಕವಾಗಿ ನಡೆಸಲು ಸಾಧ್ಯವಾಗುತ್ತಿಲ್ಲ.ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ ಸುಮಾರು 80 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ ಇದರ ವಿರುದ್ಧ ದೇಶದ ಯುವಕರು ಧ್ವನಿ ಎತ್ತುತ್ತಿದ್ದರೂ ಸಂಬಂಧಪಟ್ಟ ಸಚಿವರು ರಾಜೀನಾಮೆ ನೀಡದಿರುವುದು ದುರದೃಷ್ಟಕರ ಸಂಗತಿ ಎಂದರು.

ಇದನ್ನು ಓದಿದ್ದೀರಾ..? ಕೋಲಾರ | ರೈತರ ತೀರ್ಮಾನಕ್ಕೆ ಇನ್ನೆರಡು ತಿಂಗಳ ಕಾಲಾವಕಾಶ : ಶಾಸಕ ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂಪತ್,ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೇಶವ ರೆಡ್ಡಿ, ಅನುಸುಯಮ್ಮ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕುಬೇರ್ ಅಚ್ಚು,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್,ರಕ್ಷಿತ್ ರೆಡ್ಡಿ,ಪ್ರಧಾನ ಕಾರ್ಯದರ್ಶಿ ಪ್ರೆಸ್ ಸುರೇಶ್,ರಾಜೀವ್ ಗೌಡ, ಬಾಬಾ ಜಾನ್,ಯುವ ಕಾಂಗ್ರೆಸ್ ನ ಮುದಾಸಿರ್ ದಾವೂದ್,ಶಾಹಿದ್ ಅಬ್ಬಾಸ್,ನವೀನ್,ನಾಗೇಶ್ ರೆಡ್ಡಿ,ಮತ್ತು ಇತರರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...