ಚಿಕ್ಕಬಳ್ಳಾಪುರ | ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು

Date:

ಸಿಂಗಾಟಕದಿರೇನಹಳ್ಳಿ ಗ್ರಾಮದ ದಲಿತರಿಗೆ ಮಂಜೂರಾಗಿರುವ ಜಮೀನಿನ ವಿವಾದವನ್ನು ಕೂಡಲೇ ಇತ್ಯರ್ಥಪಡಿಸಬೇಕು ಎಂದು ಒತ್ತಾಯಿಸಿ ಕಳೆದ 64ಕ್ಕೂ ಹೆಚ್ಚು ದಿನಗಳಿಂದ ಧರಣಿ ನಡೆಸುತ್ತಿರುವ ದಲಿತ ಸಂಘಟನೆಗಳು, ಆ.27ರಂದು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿವೆ.ಅಂದು ತಿರ್ನಹಳ್ಳಿ ಗ್ರಾಮದಿಂದ ಸಿಂಗಾಟಕದಿರೇನಹಳ್ಳಿಯ ಜಮೀನಿನವರೆಗೆ ಪಾದಯಾತ್ರೆ ನಡೆಸಿ,ನಂತರ ಜಮೀನಿಗೆ ಭೂ ಪ್ರವೇಶ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ,ರೈತ ಹಾಗೂ ಕಾರ್ಮಿಕ ಸಂಘಟನೆಗಳ ಹೋರಾಟ ವೇದಿಕೆ ತಿಳಿಸಿದೆ.

ಸೋಮವಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖಂಡರು, ಆ.27ರಂದು ನಡೆಯಲಿರುವ ಪಾದಯಾತ್ರೆ, ಭೂ ಪ್ರವೇಶ ಮತ್ತು ಪ್ರತಿಭಟನೆಯಲ್ಲಿ ದಲಿತರು, ರೈತರು, ಕಾರ್ಮಿಕರು, ಕನ್ನಡಪರ ಸಂಘಟನೆಗಳು, ಪ್ರಗತಿಪರ ಚಿಂತಕರು ಹಾಗೂ ಜನಪರ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿಲ್ಲ ಎಂದು ಆರೋಪಿಸಿರುವ ಸಂಘಟನೆಗಳು, ಜಮೀನು ಮಂಜೂರಾಗಿರುವ ದಲಿತ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡಬೇಕು ಹಾಗೂ ಸಮಸ್ಯೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿವೆ.
ಸುದ್ದಿಗೋಷ್ಠಿಯಲ್ಲಿ ಕೃಷಿ ಕಾರ್ಮಿಕ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ, ಸಿಂಗಾಟಕದಿರೇನಹಳ್ಳಿ ಗ್ರಾಮದ ದಲಿತರಿಗೆ 1972-73ರಲ್ಲಿ ಜಮೀನು ಮಂಜೂರಾಗಿದ್ದು,ಅಂದಿನಿಂದಲೂ ಅವರು ಭೂಮಿಯನ್ನು ಸಾಗುವಳಿ ಮಾಡಿಕೊಂಡು ಸ್ವಾಧೀನದಲ್ಲಿದ್ದಾರೆ.ಆದರೆ ಇತ್ತೀಚೆಗೆ ಅರಣ್ಯ ಇಲಾಖೆ ಈ ಜಮೀನು ತನ್ನ ವ್ಯಾಪ್ತಿಗೆ ಸೇರಿದೆ ಎಂದು ಹೇಳಿ ರೈತರಿಗೆ ಕಿರುಕುಳ ನೀಡುತ್ತಿದೆ ಸಮಸ್ಯೆ ಬಗೆಹರಿಸುವಂತೆ ದಲಿತರು 60ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.

ದಸಂಸ ಮುಖಂಡ ಕೆ.ಸಿ. ರಾಜಾಕಾಂತ್ ಮಾತನಾಡಿ, ದಲಿತ ಕುಟುಂಬಗಳು ಹಲವು ವರ್ಷಗಳಿಂದ ಜಮೀನನ್ನು ಸಾಗುವಳಿ ಮಾಡಿಕೊಂಡು ಬರುತ್ತಿದ್ದರೂ ಅರಣ್ಯ ಇಲಾಖೆ ಏಕಾಏಕಿ ಜಮೀನು ತನ್ನ ವ್ಯಾಪ್ತಿಗೆ ಸೇರಿದೆ ಎಂದು ಹೇಳುತ್ತಿದೆ. ತಮ್ಮ ಹಕ್ಕಿನ ಭೂಮಿಗಾಗಿ ದಲಿತ ಕುಟುಂಬಗಳು ನಿರಂತರ ಹೋರಾಟ ನಡೆಸುತ್ತಿದ್ದರೂ ಅಧಿಕಾರಿಗಳು ಸಮಸ್ಯೆ ಆಲಿಸಲು ಮುಂದಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಇನ್ನು ಸ್ಥಳೀಯ ಶಾಸಕ ಪ್ರದೀಪ್ ಈಶ್ವರ್ ಕೂಡ ಸೌಜನ್ಯಕ್ಕಾದರೂ ಧರಣಿ ನಿರತ ದಲಿತ ಕುಟುಂಬಗಳನ್ನು ಭೇಟಿ ಮಾಡಿ ಸಮಸ್ಯೆ ಆಲಿಸಲು ಮುಂದಾಗಿಲ್ಲ.ಬಡವರ ಪರವಾಗಿದ್ದೇವೆ ಎನ್ನುವವರು ಬಡವರ ಸಮಸ್ಯೆ ಆಲಿಸಲು ಸಮಯ ನೀಡದಿರುವುದು ವಿಷಾದನೀಯ ಎಂದು ಟೀಕಿಸಿದರು.ಆ.27ರಂದು ತಿರ್ನಹಳ್ಳಿ ಗ್ರಾಮದಿಂದ ಪಾದಯಾತ್ರೆ ಮೂಲಕ ಸಿಂಗಾಟಕದಿರೇನಹಳ್ಳಿಯ ಜಮೀನಿಗೆ ತೆರಳಿ, ದಲಿತ ಕುಟುಂಬಗಳೊಂದಿಗೆ ಭೂ ಪ್ರವೇಶ ನಡೆಸಿ ಪ್ರತಿಭಟನೆ ನಡೆಸಲಾಗುವುದು.

ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ಹನೂರು ಶೂಟೌಟ್‌ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ

ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಸಿ.ಜೆ. ಗಂಗಪ್ಪ,ತಾಲೂಕು ಸಂಚಾಲಕ ಎನ್. ಪರಮೇಶ್, ವಸತಿ ಮತ್ತು ಭೂಮಿ ಹೋರಾಟ ಸಮಿತಿ ರಾಜ್ಯ ಖಜಾಂಚಿ ಶ್ರೀರಂಗಾಚಾರಿ,ಸಿಪಿಐ(ಎಂ) ಜಿಲ್ಲಾಧ್ಯಕ್ಷ ಮುನಿಕೃಷ್ಣಪ್ಪ, ಸಿಐಟಿಯು ಜಿಲ್ಲಾಧ್ಯಕ್ಷ ಸಿದ್ದಗಂಗಪ್ಪ,ದಲಿತ ಸಂರಕ್ಷಣಾ ವೇದಿಕೆ ರಾಜ್ಯ ಯುವ ಅಧ್ಯಕ್ಷ ವೈ. ಶಂಕರ್, ಗಡಿನಾಡು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನಿರಾಜು, ಡಿವೈಎಫ್‌ಐನ ರಾಜಶೇಖರಯ್ಯ, ಶ್ರೀರಂಗಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...