ಚಿಕ್ಕಬಳ್ಳಾಪುರ | ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್ ವೇಳೆ ದುರಂತ: ಓಡುತ್ತಿದ್ದಾಗಲೇ ಕುಸಿದು ಬಿದ್ದು ಕ್ರೀಡಾಪಟು ಸಾವು

Date:

ನಂದಿ ಹಿಲ್ಸ್‌ನಲ್ಲಿ ನಡೆದ ಮಾನ್ಸೂನ್ ಮ್ಯಾರಥಾನ್ ವೇಳೆ ದುರಂತ ಸಂಭವಿಸಿದ್ದು, 21 ಕಿ.ಮೀ ಓಟದಲ್ಲಿ ಭಾಗವಹಿಸಿದ್ದ ಕ್ರೀಡಾಪಟುವೊಬ್ಬರು ಓಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಪಂಜಾಬ್ ಮೂಲದ ಅಮನ್ ದೀಪ್ ಸಿಂಗ್ ಜಗಡೆ (31) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿರುವ ಖಾಸಗಿ ಕಂಪನಿಯೊಂದರಲ್ಲಿ ಅಮನ್ ದೀಪ್ ಸಿಂಗ್ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ನಡೆದ ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ಸುಮಾರು 4,500 ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಪೈಕಿ ಅಮನ್ ದೀಪ್ ಸಿಂಗ್ ಅವರು 21 ಕಿ.ಮೀ ಮ್ಯಾರಥಾನ್‌ನಲ್ಲಿ ಪಾಲ್ಗೊಂಡಿದ್ದರು. ನಂದಿ ಬೆಟ್ಟದ ಅರ್ಧ ಭಾಗದಷ್ಟು ಓಟವನ್ನು ಪೂರ್ಣಗೊಳಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಮುದ್ದೇನಹಳ್ಳಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಾಥಮಿಕವಾಗಿ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಇದನ್ನು ಓದಿದ್ದೀರಾ..?ಕೋಲಾರ | ಕಾಳಹಸ್ತಿಪುರ ಕೆರೆಯಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ಆರೋಪ: ಕ್ರಮಕ್ಕೆ ದಲಿತ ರಕ್ಷಣಾ ಸಮಿತಿ ಆಗ್ರಹ

ಮ್ಯಾರಥಾನ್‌ಗೆ ಮುನ್ನ ಅಮನ್ ದೀಪ್ ಸಿಂಗ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ‘ದೇವರು ನನ್ನ ಜೊತೆ ಇದ್ದಾನೆ’ ಎಂದು ಬರೆದುಕೊಂಡಿದ್ದರು ಎನ್ನಲಾಗಿದೆ. ಇದೀಗ ಮ್ಯಾರಥಾನ್ ವೇಳೆ ಸಂಭವಿಸಿದ ಈ ದುರಂತ ಸಹಭಾಗಿಗಳು ಹಾಗೂ ಕ್ರೀಡಾಭಿಮಾನಿಗಳಲ್ಲಿ ಆಘಾತ ಮೂಡಿಸಿದೆ

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...