ಚಿಕ್ಕಬಳ್ಳಾಪುರ | ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ನೀಡಲು ಡಿಸಿಸಿ ಬ್ಯಾಂಕ್ ಬದ್ಧ: ಕೊತ್ತೂರು ಮಂಜುನಾಥ್

Date:

ಡಿಸಿಸಿ ಬ್ಯಾಂಕ್ ರೈತರ ಬ್ಯಾಂಕ್ ಆಗಿದ್ದು, ರೈತರ ಆರ್ಥಿಕ ಏಳಿಗೆಯೇ ಬ್ಯಾಂಕಿನ ಮುಖ್ಯ ಉದ್ದೇಶವಾಗಿದೆ. ರೈತರು ಹಾಗೂ ಮಹಿಳಾ ಸ್ವಸಹಾಯ ಸಂಘಗಳಿಗೆ ಕಾಲಕಾಲಕ್ಕೆ ಸಮರ್ಪಕವಾಗಿ ಸಾಲ ಸೌಲಭ್ಯ ಒದಗಿಸಲು ಬ್ಯಾಂಕ್ ಬದ್ಧವಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಕೋಲಾರ ಶಾಸಕ ಜಿ. ಮಂಜುನಾಥ್ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಬ್ಯಾಂಕಿನ ಕಾರ್ಯಚಟುವಟಿಕೆಗಳ ಕುರಿತು ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸರ್ಕಾರ ಹಾಗೂ ಡಿಸಿಸಿ ಬ್ಯಾಂಕ್ ಸದಾ ರೈತರ ಪರವಾಗಿವೆ. ಈ ಬ್ಯಾಂಕ್ ಯಾವುದೇ ದೊಡ್ಡ ಉದ್ಯಮಿಗಳಿಗಾಗಿ ಅಥವಾ ಶ್ರೀಮಂತರಿಗಾಗಿ ಸ್ಥಾಪನೆಯಾಗಿಲ್ಲ. ಇದು ಸಂಪೂರ್ಣವಾಗಿ ರೈತರ ಹಿತಕ್ಕಾಗಿ ಕಾರ್ಯನಿರ್ವಹಿಸುವ ಬ್ಯಾಂಕ್. ರೈತರಿಗೆ ಅಗತ್ಯವಿರುವ ಸಮಯದಲ್ಲಿ ಸಾಲ ಸೌಲಭ್ಯ ಒದಗಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.

ರೈತರಿಗೆ ಕೆಸಿಸಿ (ಕಿಸಾನ್ ಕ್ರೆಡಿಟ್ ಕಾರ್ಡ್) ಸಾಲ ಹಾಗೂ ಮಹಿಳೆಯರ ಶ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲ ನೀಡಲು ಬ್ಯಾಂಕ್ ಸಿದ್ಧವಿದೆ. ರೈತರ ಕೃಷಿ ಚಟುವಟಿಕೆಗಳು ಮತ್ತು ಆರ್ಥಿಕ ಸಾಮರ್ಥ್ಯಕ್ಕೆ ಅನುಗುಣವಾಗಿ ಐದು ಲಕ್ಷ ರೂಪಾಯಿವರೆಗೆ ಸಾಲ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ರೈತರು ಕೆಸಿಸಿ ಸಾಲ ಸೌಲಭ್ಯವನ್ನು ಸಮರ್ಪಕವಾಗಿ ಪಡೆದುಕೊಳ್ಳಬೇಕು. ಇದರ ಜತೆಗೆ ಶ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘಗಳಿಗೂ ಸಾಲ ವಿತರಣೆ ಮಾಡಲಾಗುವುದು. ಕೆಸಿಸಿ ಸಾಲ ನೀಡುವಾಗ ರೈತರ ಕೃಷಿ ಚಟುವಟಿಕೆಗಳನ್ನು ಆಧಾರವಾಗಿಟ್ಟುಕೊಂಡರೆ, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ನೀಡುವ ಸಂದರ್ಭದಲ್ಲಿ ಸಂಘದ ಸದಸ್ಯರ ಒಗ್ಗಟ್ಟು ಮತ್ತು ಸಂಘಟಿತ ಬದ್ಧತೆಯನ್ನು ಪರಿಗಣಿಸಲಾಗುತ್ತದೆ ಎಂದು ಹೇಳಿದರು.

ಬರದಿಂದ ತತ್ತರಿಸಿರುವ ರೈತರಿಗೆ ಸಾಲ ಮರುಪಾವತಿ ಮಾಡುವಂತೆ ಬ್ಯಾಂಕ್ ನೋಟಿಸ್ ನೀಡಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ. ಯಾರಿಗಾದರೂ ನೋಟಿಸ್ ನೀಡಿದ್ದರೆ ಅದನ್ನು ನನ್ನ ಗಮನಕ್ಕೆ ತರಲಿ. ರೈತರಿಗೆ ಸಾಲ ಮರುಪಾವತಿ ಮಾಡುವಂತೆ ಮನವಿ ಮಾಡಿದ್ದೇವೆಯೇ ಹೊರತು ಯಾರಿಗೂ ನೋಟಿಸ್ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಕಾರು ಖರೀದಿ, ಕಟ್ಟಡ ನಿರ್ಮಾಣ ಹಾಗೂ ಕೋಳಿ ಫಾರಂ ಸೇರಿದಂತೆ ವಿವಿಧ ಉದ್ದೇಶಗಳಿಗೆ ಪಡೆದಿರುವ ಸಾಲಗಳನ್ನು ಹಾಗೆಯೇ ಬಿಡಲು ಸಾಧ್ಯವಿಲ್ಲ. ಅಂತಹ ಸಾಲಗಳ ವಸೂಲಾತಿಗೂ ಬ್ಯಾಂಕ್ ಕ್ರಮ ಕೈಗೊಳ್ಳಲಿದೆ. ರೈತರು ಹಾಗೂ ಉದ್ಯಮಿಗಳು ಬ್ಯಾಂಕ್‌ನಿಂದ ಪಡೆದ ಸಾಲವನ್ನು ನಿಯಮಾನುಸಾರ ಮರುಪಾವತಿ ಮಾಡಬೇಕು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಪುತ್ಥಳಿ ನಿರ್ಮಾಣದಲ್ಲಿ ಪ್ರತಿಷ್ಠೆಗಿಂತ ಗೌರವ, ರಕ್ಷಣೆಗೆ ಆದ್ಯತೆ: ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಬ್ಯಾಂಕ್ ಉಪಾಧ್ಯಕ್ಷ ಮೋಹನ್ ರೆಡ್ಡಿ, ಮಂಜುನಾಥ್ ರೆಡ್ಡಿ, ಹನುಮೆಗೌಡ, ಭಾಸ್ಕರ್ ಮತ್ತು ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೆರವಂಡ ಉಮೇಶ್ ನೇಮಕ

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಕೊಡಗಿನ ಹಿರಿಯ ಕಲಾವಿದ,...

ರಾಯಚೂರು | ಶಿಕ್ಷಣದ ಅವಕಾಶ ಕಟ್ಟಕಡೆಯ ವ್ಯಕ್ತಿಗೂ ತಲುಪಲಿ: ಡಿಡಿಪಿಐ ಮಲ್ಲಿಕಾರ್ಜುನ

ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಕಂಡ ಶಿಕ್ಷಣವಂತ ಹಾಗೂ ಸಮಾನತೆಯ...

ಉಳ್ಳಾಲ | ಉಳ್ಳಾಲದ ಅಬ್ದುಲ್ ರೆಹಮಾನ್‌ಗೆ ಚಿನ್ನದ ಪದಕ; ರಾಷ್ಟ್ರಮಟ್ಟಕ್ಕೆ ಆಯ್ಕೆ

ಧಾರವಾಡದ ಆರ್‌.ಎನ್‌ ಶೆಟ್ಟಿ ಕ್ರೀಡಾಂಗಣದಲ್ಲಿ ನವೆಂಬರ್‌ 14, 15 ರಂದು ನಡೆದ...

ಶಿವಮೊಗ್ಗ | ಪ್ರತಿ ಹನಿ ರಕ್ತವೂ ಅಮೂಲ್ಯ, ಅದು ಸದ್ಬಳಕೆಯಾಗಲಿ : ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ.ನಿಟ್ಟಲಿ

ರಕ್ತನಿಧಿ ಕೇಂದ್ರಗಳಲ್ಲಿ ಸಂಗ್ರಹಿಸುವ ರಕ್ತ ವ್ಯರ್ಥವಾಗುವುದನ್ನು ತಡೆಗಟ್ಟಿ, ಸಮರ್ಪಕ ಬಳಕೆಯಾಗುವ ಕಡೆ...