ಚಿಕ್ಕಬಳ್ಳಾಪುರ | ಕೈಗಾರಿಕೆಗೆ ರೈತರ ಜಮೀನು ಸ್ವಾಧೀನ ಜಿಲ್ಲಾಡಳಿತ ಭವನದ ಎದುರು ರೈತರು ಪೊಲೀಸರ ನಡುವೆ ಜಟಾಪಟಿ

Date:

ಕೆಐಎಡಿಬಿಗೆ ಭೂ ಸ್ವಾಧೀನ ವಿಚಾರದಲ್ಲಿ ರೈತ ಸಂಘಟನೆಗಳ ಮತ್ತು ಪೊಲೀಸರ ನಡುವೆ ಹೈಡ್ರಾಮಾವೇ ನಡೆದು ಹೋಯಿತು. ಜಿಲ್ಲಾ ಉಸ್ತುವಾರಿ ಸಚಿವರು ಕೆಡಿಪಿ ಸಭೆಗೆ ಬರುವ ಮಾಹಿತಿ ಪಡೆದ ರೈತ ಸಂಘದ ಒಂದು ಬಣ ಬೃಹತ್ ಸಂಖ್ಯೆಯಲ್ಲಿ ಜಮಾವಣೆಗೊಂಡು ಜಿಲ್ಲಾಡಳಿತ ಭವನಕ್ಕೆ ಪ್ರವೇಶಿಸಲು ಮುಂದಾದ ಸಂದರ್ಭದಲ್ಲಿ ರೈತರು ಮತ್ತು ಪೊಲೀಸರ ನಡುವೆ ಸಂಘರ್ಷವೇ ಏರ್ಪಟ್ಟು ಕೆಲ ರೈತರನ್ನು ಬಂಧಿಸಿದ ಘಟನೆಯೂ ನಡೆಯಿತು.

- Advertisement -

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಭೂಮಿ ಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿಯ ಹೋರಾಟ 45ನೇ ದಿನಕ್ಕೆ ಕಾಲಿಟ್ಟಿದ್ದು ಬುಧವಾರ ತೀವ್ರ ಸ್ವರೂಪ ಪಡೆದುಕೊಂಡಿತು. ಜಾನುವಾರುಗಳೊಂದಿಗೆ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಮುಂದ ಸಿದ್ದತೆ ನಡೆಸುತ್ತಿದ್ದಂತೆ ಪೊಲೀಸರು ಬ್ಯಾರಿಕೇಡ್‌ ಗಳನ್ನು ಹಾಕಿ ಹೋರಾಟ ವಿಫಲಗೊಳಿಸಲು ಮುಂದಾದರು. ಈ ವೇಳೆ ಪೊಲೀಸರು ರೈತರ ನಡುವೆ ನೂಕಾಟ ತಳ್ಳಾಟ ನಡೆದಿದೆ. ಈ ವೇಳೆ ಪೇದೆಯೊಬ್ಬ ರೈತನ ಕೊರಳ ಪಟ್ಟಿಗೆ ಕೈ ಹಾಕಿ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದ್ದು ರೈತರನ್ನು ಕೆರಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ 2300 ಎಕರೆ ಜಮೀನು ಸ್ವಾದೀನಕ್ಕೆ ಸರ್ಕಾರ ಮುಂದಾಗಿದೆ. ಇದನ್ನ ವಿರೋಧಿಸಿ ಜಿಲ್ಲಾಡಳಿತ ಭವನದ ಎದುರು ರೈತ ಸಂಘದ ನೇತೃತ್ವದಲ್ಲಿ ಕೆಲ ರೈತರು 45 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ಕೈಗೊಂಡಿದ್ದಾರೆ. ಇದರ ನಡುವೆ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್ ಜಿಲ್ಲಾಡಳಿತ ಭವನಕ್ಕೆ ಕೆಡಿಪಿ ಸಭೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನಕ್ಕೆ ಜಾನುವಾರಗಳೊಂದಿಗೆ ಮುತ್ತಿಗೆ ಹಾಕಲು ರೈತರು ಮುಂದಾಗಿದ್ದರು.
ಆದರೆ ಮುತ್ತಿಗೆ ಹಾಕುವ ವಿಚಾರ ತಿಳಿದಿದ್ದ ಪೊಲೀಸರು ಪೊಲೀಸ್ ಇಲಾಖೆಯು ರೈತರನ್ನು ತಡೆಯಲು ಬ್ಯಾರಿಕೇಡ್‌ಗಳನ್ನು ಅಳವಡಿಸಿ ಪೊಲೀಸರು ಸರ್ಪಗಾವಲು ನಿರ್ಮಿಸಿದ್ದರು. ಇದನ್ನು ಲೆಕ್ಕಿಸದೇ ರೈತರು ಬ್ಯಾರಿಕೇಡ್‌ಗಳನ್ನು ತಳ್ಳಿ ಮುನ್ನುಗ್ಗುಲು ಮುಂದಾದಾಗ ರೈತರು ಹಾಗೂ ಪೊಲೀಸರ ನಡುವೆ ಭಾರೀ ಜಟಾಪಟಿಯಾಗಿ ತಳ್ಳಾಟ ನೂಕಾಟ ನಡೆಯಿತು.

ಈ ವೇಳೆ ವೇಳೆ ಪೊಲೀಸ್ ಪೇದೆಯೊಬ್ಬ ರೈತನ ಕೊರಳ ಪಟ್ಟಿಗೆ ಕೈ ಹಾಕಿ ದೌರ್ಜನ್ಯ ಎಸಗಿದ್ದು ಭರತ್ ಎಂಬಾತನನ್ನು ವಶಕ್ಕೆ ಪಡೆದರು. ಇದರಿಂದ ರೈತರು ಹಾಗೂ ಪೊಲೀಸರ ನಡುವೆ ಬಾರಿ ಗಲಾಟೆ ನಡೆದು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಈ ವೇಳೆ ಸುದ್ದಿಗಾರರೊಂದಿಗೆ ರೈತಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಮಾತನಾಡಿ, ರೈತರ ಹೋರಾಟ ೪೫ನೇ ದಿನಕ್ಕೆ ಕಾಲಿಟ್ಟಿದೆ. ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಬಂದಿಲ್ಲ, ರೈತರ ಕಷ್ಟ ಕೇಳಿಲ್ಲ, ಭರತ್ ಎಂಬ ರೈತನ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ, ರೈತರ ಮೇಲೆ ದಾಳಿ ಮಾಡುವ ಅಧಿಕಾರವನ್ನು ಪೊಲೀಸರಿಗೆ ನೀಡಿದವರು ಯಾರು ಎಂದು ಪ್ರಶ್ನಿಸಿದರು.

ರೈತರನ್ನು ಒಡೆಯಲು ಪೊಲೀಸರಿಗೆ ಆದೇಶ ನೀಡಿದವರು ಯಾರು? ಗೂಂಡಾಗಳ ರೀತಿ ಯಲ್ಲಿ ಪೊಲೀಸರು ವರ್ತಿಸುತ್ತಿದ್ದಾರೆ, ಪೊಲೀಸರ ವಿರುದ್ಧ ಮೊಕದ್ದಮೆ ದಾಖಲಿಸಲು ರೈತ ಸಂಘದಿಂದ ನಿರ್ಧರಿಸಲಾಗಿದೆ. ಹೊಸಹುಡ್ಯ ಭಾಗದಲ್ಲಿ ರೈತರನ್ನು ತಡೆಯಲು ಪೊಲೀಸರಿಗೆ ಅಧಿಕಾರ ಏನಿದೆ? ರೈತರ ಅನ್ನ ತಿಂದು, ರೈತರ ಹಾಲು ಕುಡಿದು ರೈತರ ಮೇಲೆ ಹಲ್ಲೆ ನಡೆಸುವ ಪೊಲೀಸರಿಗೆ ಮಾನವೀಯತೆ ಇಲ್ಲ, ಯಾರದೋ ಮುಲಾಜಿಗಾಗಿ ರೈತರ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡುವವರೆಗೂ ಬಿಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ..? ಕೋಲಾರ | ಜಿಲ್ಲಾ ಜಾಗೃತಿ ಸಮಿತಿ ರದ್ದು ಮಾಡಿ ಹೊಸದಾಗಿ ಸಮಿತಿ ನೇಮಕಕ್ಕೆ ಒತ್ತಾಯ

ಜಿಲ್ಲಾ ಕಾರ್ಯದರ್ಶಿ ನೆಲಮಾಕನಹಳ್ಳಿ ಗೋಪಾಲ್, ಮುನಿನಂಜಪ್ಪ, ತಾದೂರು ಮಂಜುನಾಥ್, ರಾಮಾಂಜಿನಪ್ಪ, ಕೃಷ್ಣಪ್ಪ, ಅಶ್ವತ್ಥನಾರಾಯಣಗೌಡ, ನಂಜುಂಡಪ್ಪ, ಗೌರಮ್ಮ, ರತ್ನಮ್ಮ, ಅಂಬಿಕಾ, ರತ್ನಮ್ಮ, ಸೋಮಶೇಖರ್, ನಾರಾಯಣಸ್ವಾಮಿ, ಶ್ರೀರಾಮ, ರಾಜಣ್ಣ, ಮಂಜುನಾಥ, ರಾಘವೇಂದ್ರ, ಕುಮಾರ್, ದೇವರಾಜು, ಮೋಹನ್, ಹರೀಶ್ ಮತ್ತು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಾಡುಪ್ರಾಣಿ ಹಾವಳಿಗೆ ಶಾಶ್ವತ ಪರಿಹಾರ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಯೋಜನೆ

ಮಲೆನಾಡಿನಲ್ಲಿ ಮಾನವ - ಪ್ರಾಣಿ ಸಂಘರ್ಷ ಹೆಚ್ಚಾಗಿದ್ದು, ನಿರಂತರವಾಗಿ ಕಾಡುತ್ತಿರುವ ಕಾಡುಪ್ರಾಣಿ...

ಕೋಲಾರ | ಡಿಸಿಸಿ ಬ್ಯಾಂಕ್ ಅಕ್ರಮಗಳ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇಮಿಸಿ: ರೈತ ಸಂಘ ಒತ್ತಾಯ

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ನೂರಾರು...

ಚಿಕ್ಕಮಗಳೂರು | SIR ಪ್ರಕ್ರಿಯೆ: ಅಂತಿಮ ಪಟ್ಟಿಯಲ್ಲಿ 8,74,462 ಮತದಾರರು; ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಪರಿಷ್ಕರಣೆಯ...