ಚಿಕ್ಕಬಳ್ಳಾಪುರ | ಶಾಸಕ ಪ್ರದೀಪ್ ಈಶ್ವರ್‌ರನ್ನು ‘ಹುಚ್ಚ-ಹುಚ್ಚ’ ಎಂದು, ಚಪ್ಪಲಿ ಎಸೆದ ಎಚ್‌ಡಿಕೆ ಬೆಂಬಲಿಗರು; ಕಿಡಿಗೇಡಿಗಳು ವಶಕ್ಕೆ

Date:

ಚಿಕ್ಕಬಳ್ಳಾಪುರದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ. ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್ ಅವರನ್ನು ‘ಹುಚ್ಚ-ಹುಚ್ಚ’ ಎಂದು ಕೂಗಿರುವ ಜೆಡಿಎಸ್‌ ಕಾರ್ಯಕರ್ತರು, ಅವರ ಮೇಲೆ ಚಪ್ಪಲಿ ಎಸೆದಿದ್ದಾರೆ. ದಾಂಧಲೆ ನಡೆಸಿದ ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತವು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರದೀಪ್ ಈಶ್ವರ್ ಬರುತ್ತಿದ್ದಂತೆಯೇ, ಅವರ ಮೇಲೆ ಜೆಡಿಎಸ್‌ ಕಾರ್ಯಕರ್ತರು ಮುಗಿಬಿದ್ದಿದ್ದಾರೆ. ವೇದಿಕೆಯ ಮುಂಭಾಗದಲ್ಲೇ ಚಪ್ಪಲಿಗಳನ್ನು ಕೈಯಲ್ಲಿ ಹಿಡಿದು, ಪ್ರದೀಪ್ ಈಶ್ವರ್ ವಿರುದ್ಧ ಘೋಷಣೆ ಕೂಗಿದ್ದಾರೆ. ತಕ್ಷಣವೇ ಎಚ್ಚೆತ್ತ ಪೊಲೀಸರು ಪ್ರತಿಭಟನಾಕಾರರನ್ನು ಹೊರದಬ್ಬಿಸಿದ್ದಾರೆ. ಚಪ್ಪಲಿ ಎಸೆದು ದಾಂಧಲೆ ಮಾಡಿದವರನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಎಚ್.ಡಿ. ಕುಮಾರಸ್ವಾಮಿ ಅವರ ಚೇಲಾಗಳು ನನ್ನ ಮೇಲೆ ಮುಗಿಬಿದ್ದಿದ್ದಾರೆ. ನನ್ನ ವಿರುದ್ಧ ಕೂಗಾಡುತ್ತಿದ್ದಾರೆ. ಇಂತಹ ಬೆದರಿಕೆಗಳಿಗೆಲ್ಲ ನಾನು ಹೆದರುವವನಲ್ಲ” ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಇತ್ತೀಚೆಗೆ, ಪ್ರದೀಪ್ ಈಶ್ವರ್ ಬಗ್ಗೆ ಮಾತನಾಡಿದ್ದ ಕುಮಾರಸ್ವಾಮಿ ಅವರು, ಪ್ರದೀಪ್ ಈಶ್ವರ್ ಅವರ ಪರಿಶ್ರಮ ನೀಟ್‌ ಅಕಾಡೆಮಿಗೆ ಸಿಎ ಸೈಟ್‌ ಮಂಜೂರಾಗಿದೆ ಎಂದು ಆರೋಪಿಸಿದ್ದರು. ಅವರ ಆರೋಪಕ್ಕೆ ಪ್ರತಿಕ್ರಿಯಿಸಿ ಶುಕ್ರವಾರ ಸುದ್ದಿಗೋ‍ಷ್ಠಿ ನಡೆಸಿದ್ದ ಪ್ರದೀಪ್ ಈಶ್ವರ್, “ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರ ಬಳಿ 85 ವಾಚುಗಳು, 700-800 ಎಕರೆ ಜಮೀನಿದೆ. ಅವರ ವಾಚ್‌ಗಳ ಒಟ್ಟು ಮೌಲ್ಯವೇ 10 ರಿಂದ 20 ಕೋಟಿ ರೂ. ಆಗುತ್ತದೆ. ಇಷ್ಟು ಆಸ್ತಿಯನ್ನು ಅವರು ತೋಟದ ಮನೆಯಲ್ಲಿ ಬೆಳೆದ ಬದನೆಕಾಯಿ ಮಾರಿ ಗಳಿಸಿದರೇ? ಅಥವಾ ಬಳ್ಳಾರಿಯ ಕಿಕ್‌ಬ್ಯಾಕ್ (ಕಮಿಷನ್) ಹಣದಿಂದ ಖರೀದಿಸಿದರೇ? ಬಿಡದಿಯಲ್ಲಿ ಅನಿತಾ ಕುಮಾರಸ್ವಾಮಿ ಅವರು 32 ಎಕರೆ ಜಮೀನನ್ನು ‘ರಾಮ್‌ರಾಜ್ ಪಂಚೆ’ ಮಾರಿ ಖರೀದಿಸಿದ್ದಾರೆಯೇ?” ಎಂದು ವಾಗ್ದಾಳಿ ನಡೆಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

ಕೋಲಾರ | ಪದವೀಧರರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ: ಡಾ. ನಾಗರಾಜ್

ಆಗ್ನೇಯ ಪದವೀಧರರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಹಾಗೂ ಪಕ್ಷದ ಯುವ ಘಟಕದ...