ಚಿಕ್ಕಬಳ್ಳಾಪುರ | ಹಿರಿಯ ಸಾಹಿತಿ ಹಾಗೂ ಕಲಾವಿದ ಗೊಲ್ಲಹಳ್ಳಿ ಶಿವಪ್ರಸಾದ್‌ರವರಿಗೆ ಪತ್ರಕರ್ತರ ಸಂಘದಿಂದ ಹೃದಯಸ್ಪರ್ಶಿ ಸನ್ಮಾನ

Date:

​
ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಹಾಗೂ ಕಲಾವಿದರಾದ ಶ್ರೀಯುತ ಗೊಲ್ಲಹಳ್ಳಿ ಶಿವಪ್ರಸಾದ್ ರವರಿಗೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಭವನದಲ್ಲಿ ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಗೌರವಿಸಲಾಯಿತು.

- Advertisement -

​ನಗರದ ಅಂಬೇಡ್ಕರ್ ಭವನದಲ್ಲಿ ನವೆಂಬರ್ 19 ಮತ್ತು 20ರಂದು ಎರಡು ದಿನಗಳ ಕಾಲ ನಡೆಯಲಿರುವ ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗೊಲ್ಲಹಳ್ಳಿ ಶಿವಪ್ರಸಾದ್ ಅವರು ಆಯ್ಕೆಯಾಗಿರುವುದು ತಾಲೂಕಿನ ಪತ್ರಕರ್ತರಿಗೆ ಹಾಗೂ ಸಾಹಿತ್ಯಾಸಕ್ತರಿಗೆ ಹೆಮ್ಮೆಯ ವಿಷಯವಾಗಿದೆ.
​
ಹಿರಿಯ ಪತ್ರಕರ್ತರಾದ ರಾಧಾಕೃಷ್ಣ,ಎನ್,ನಟರಾಜ್ ಕೆ.ಎಸ್, ನೂರುಲ್ಲಾ ಚಾಂಡ್ರಹಳ್ಳಿ,ರವಿಕುಮಾರ್, ಕೃಷ್ಣಮೂರ್ತಿ,ವಾಸುದೇವ್,ನಾಗರಾಜ್,ದೇವಪ್ಪ,ಅಸ್ಲಂ ಪಾಷಾ,ಮುಂತಾದವರು ಮಾತನಾಡಿ,ಶಿವಪ್ರಸಾದ್ ರವರ ಸುದೀರ್ಘ ಸಾಹಿತ್ಯಕ ಹಾಗೂ ಸಾಮಾಜಿಕ ಸೇವೆಗಳನ್ನು ಸ್ಮರಿಸಿ ಶುಭ ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ಇದೇ ಸಂದರ್ಭದಲ್ಲಿ, ಶಿವಪ್ರಸಾದ್ ಅವರು ರಚಿಸಿರುವ ಪರಿಸರ ಗೀತೆಯೊಂದು ಬೆಂಗಳೂರು ಆಕಾಶವಾಣಿ ಕೇಂದ್ರದಿಂದ ೧೦೦೦ಕ್ಕೂ ಹೆಚ್ಚು ಬಾರಿ ಮರುಪ್ರಸಾರವಾಗಿರುವುದು ಆಕಾಶವಾಣಿ ಇತಿಹಾಸದಲ್ಲೇ ಒಂದು ದಾಖಲೆಯಾಗಿದ್ದು, ಅವರ ಸಾಹಿತ್ಯದ ಶ್ರೇಷ್ಠತೆಗೆ ಸಾಕ್ಷಿಯಾಗಿದೆ ಎಂದು ವಕ್ತಾರರು ಅಭಿಪ್ರಾಯಪಟ್ಟರು.

​ಸನ್ಮಾನ ಸ್ವೀಕರಿಸಿ ಮಾತನಾಡಿದ ಗೊಲಹಳ್ಳಿ ಶಿವಪ್ರಸಾದ್ ತನ್ನನ್ನು ಆತ್ಮೀಯವಾಗಿ ಸನ್ಮಾನಿಸಿದ ಮಾಧ್ಯಮ ಮಿತ್ರರಿಗೆ ಧನ್ಯವಾದಗಳನ್ನು ತಿಳಿಸುತ್ತಾ,ಸಮ್ಮೇಳನವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.


ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

​ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಟಿ.ಅರ್ಜುನ್ ವಹಿಸಿದ್ದರು ಹಾಗೂ ಕಾರ್ಯದರ್ಶಿ ಬಿ. ದೇವಪ್ಪ ಕಾರ್ಯಕ್ರಮವನ್ನು ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...