ಚಿಕ್ಕಬಳ್ಳಾಪುರ | ಮಾದಕ ವಸ್ತುಗಳ ವಿರುದ್ಧ ಕಂಕಣಬದ್ಧರಾಗಿ ಕೈ ಜೋಡಿಸೋಣ: ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ

Date:

ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ ಮತ್ತು ಜೀವನ ಹಾಳಾಗು ವುದಲ್ಲದೆ, ಇಡೀ ಕುಟುಂಬದ ನೆಮ್ಮದಿ ಹಾಗೂ ದೇಶದ ಭವಿಷ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ಯುವಜನತೆಯನ್ನು ಮಾದಕ ವಸ್ತುಗಳ ಪಿಡುಗಿನಿಂದ ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಮಾದಕ ವಸ್ತುಗಳ ನಿಷೇಧ ಹಾಗೂ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದ ಸೇಂಟ್ ಜೋಸೆಫ್ ಕಾಲೇಜಿನಿಂದ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

- Advertisement -

ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ದೇಶಾದ್ಯಂತ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಕ್ಕಳು ಮತ್ತು ಯುವಜನತೆಯೇ ದೇಶದ ಭವಿಷ್ಯವಾಗಿದ್ದು, ಅವರನ್ನು ದುಶ್ಚಟಗಳಿಂದ ದೂರವಿಡಲು ಪೋಷಕರು, ಶಿಕ್ಷಣ ಸಂಸ್ಥೆಗಳು ಹಾಗೂ ಸಮಾಜ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಆರೋಗ್ಯವನ್ನು ಹದಗೆಡಿಸುವುದರ ಜೊತೆಗೆ ಕುಟುಂಬದ ನೆಮ್ಮದಿಯನ್ನು ಕಸಿದುಕೊಳ್ಳುತ್ತದೆ. ದೇಶದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೂ ಮಾರಕವಾಗುತ್ತದೆ ಎಂದರು.

ಮಾದಕ ವಸ್ತುಗಳ ನಿಯಂತ್ರಣಕ್ಕಾಗಿ ಭಾರತ ಸರ್ಕಾರ 1985ರಲ್ಲಿ ಕಠಿಣ ಕಾನೂನು ಜಾರಿಗೆ ತಂದಿದ್ದರೂ, ಈ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕಾನೂನು ಕ್ರಮಗಳ ಜೊತೆಗೆ ಜನಸಾಮಾನ್ಯರ ಸಹಕಾರವೂ ಅಗತ್ಯವಾಗಿದೆ. ಯುವಜನತೆಯಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಅಪಾಯಗಳ ಕುರಿತು ಅರಿವು ಮೂಡಿಸಿ, ಅವುಗಳಿಂದ ದೂರವಿರು ವಂತೆ ಪ್ರೇರೇಪಿಸಬೇಕು. ಪ್ರತಿಯೊಬ್ಬರೂ ಡ್ರಗ್ಸ್ ಬೇಡ ಎಂಬ ದೃಢ ಸಂಕಲ್ಪ ಕೈಗೊಂಡಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಮಾತನಾಡಿ, ಮಕ್ಕಳು ದೇಶದ ಅಮೂಲ್ಯ ಆಸ್ತಿಯಾಗಿದ್ದು, 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸು ವಲ್ಲಿ ಯುವಜನತೆಯ ಪಾತ್ರ ಮಹತ್ವದ್ದಾಗಿದೆ. ಈ ಗುರಿ ಸಾಧನೆಗೆ ಯುವಜನತೆ ಆರೋಗ್ಯವಂತ ರಾಗಿ, ಸದೃಢವಾಗಿ ಬೆಳೆಯಬೇಕು. ಮಾದಕ ವಸ್ತುಗಳ ವಿರುದ್ಧ ಪ್ರತಿಯೊಬ್ಬರೂ ಕಂಕಣಬದ್ಧರಾಗಿ ಹೋರಾಡಬೇಕು. ಮಾದಕ ವಸ್ತುಗಳ ಸೇವನೆಗೆ ಪ್ರಚೋದನೆ ನೀಡುವವರಿಗೆ ಯುವಕ-ಯುವತಿಯರು ದೃಢವಾಗಿ ‘ನೋ ಬ್ರೋ’ ಎಂದು ಹೇಳುವ ಮೂಲಕ ದುಶ್ಚಟಗಳಿಂದ ದೂರವಿರಬೇಕು. ಅಲ್ಲದೆ, ಮಾದಕ ವಸ್ತುಗಳ ವಿರುದ್ಧದ ಜಾಗೃತಿ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿತು. ವಿದ್ಯಾರ್ಥಿಗಳು ಜಾಗೃತಿ ಘೋಷಣೆ ಗಳನ್ನು ಕೂಗುವ ಮೂಲಕ ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣದ ಸಂದೇಶ ಸಾರಿದರು. ನ್ಯಾಯಾ ಧೀಶರು ಹಾಗೂ ಗಣ್ಯರು ಜಾಥಾದಲ್ಲಿ ಹೆಜ್ಜೆ ಹಾಕಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು.


ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ಶಿಲ್ಪ, ಇತರ ನ್ಯಾಯಾಧೀಶರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚೇತನ್, ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್, ವಕೀಲರು, ಜಿಲ್ಲಾ ನ್ಯಾಯಾಲಯದ ಸಿಬ್ಬಂದಿ, ಶಾಲಾ-ಕಾಲೇಜುಗಳ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಎಷ್ಟೇ ಖರ್ಚಾದರೂ ಪರವಾಗಿಲ್ಲ; ನಾನೇ ನಗರ ಸ್ವಚ್ಛಗೊಳಿಸುತ್ತೇನೆ : ಶಾಸಕ ಕೊತ್ತೂರು ಮಂಜುನಾಥ್ ಗರಂ

ನಗರದಲ್ಲಿ ತ್ಯಾಜ್ಯ ಸಮಸ್ಯೆ ಹೆಚ್ಚುತ್ತಿದ್ದು, ನಗರಸಭೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ....

ಶಿವಮೊಗ್ಗ | ಇಂದಿನಿಂದ ಭದ್ರಾ ಜಲಾಶಯದ ಎರಡೂ ನಾಲೆಗೆ ನೀರು ಬಿಡಲು ತೀರ್ಮಾನ

ಭದ್ರಾ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ...

ಶಿವಮೊಗ್ಗ ವಿಮಾನ ನಿಲ್ದಾಣದ ಖಾಸಗೀಕರಣಕ್ಕೆ ಆಸ್ಪದವಿಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ...

ಉಳ್ಳಾಲ | ಕಾರ್ಮಿಕ ವಿರೋಧಿ ಸಂಹಿತೆಗಳ ಕೈಬಿಡಲು ಸಿಐಟಿಯು ಆಗ್ರಹ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಉಳ್ಳಾಲ ವಲಯ...