ಚಿಕ್ಕಬಳ್ಳಾಪುರ | ಹಾಲುಣಿಸುವ ತಾಯಂದಿರಿಗೆ ಉಚಿತ ಪೌಷ್ಟಿಕಾಂಶ ವಿತರಣೆ ಯೋಜನೆಗೆ ಸಚಿವ ಯು.ಟಿ. ಖಾದರ್ ಚಾಲನೆ

Date:

ತಾಯಿ ಮತ್ತು ಮಗುವಿನ ಆರೋಗ್ಯವನ್ನು ಬಲಪಡಿಸುವ ಉದ್ದೇಶದಿಂದ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಹಾಲುಣಿಸುವ ತಾಯಂದಿರಿಗಾಗಿ ರೂಪಿಸಿರುವ ಉಚಿತ ಪೌಷ್ಟಿಕಾಂಶ ವಿತರಣೆ ಯೋಜನೆಗೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಬುಧವಾರ ಚಾಲನೆ ನೀಡಿದರು.
ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್‌ನ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ್ ಸಾಯಿ ಅವರ ಸಾನ್ನಿಧ್ಯದಲ್ಲಿ ಸಚಿವರು ಸಾಯಿ ಶ್ಯೂರ್ ಮಲ್ಟಿನ್ಯೂಟ್ರಿಯಂಟ್ ಸಪ್ಲಿಮೆಂಟ್‌ (ಬಹುಪೋಷಕಾಂಶ ಪೂರಕ) ಲೋಕಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ಫಲಾನುಭವಿಗಳಾದ ಯಶಸ್ವಿನಿ ಮತ್ತು ಸಂಗೀತಾ ಅವರಿಗೆ ಪೌಷ್ಟಿಕಾಂಶ ಪೂರಕ ವಿತರಿಸಲಾಯಿತು.

ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲ್ಲೂಕುಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತಿ ತಿಂಗಳು 1,500 ಹಾಲುಣಿಸುವ ತಾಯಂದಿರಿಗೆ ಸಾಯಿ ಶ್ಯೂರ್ ಪೌಷ್ಟಿಕಾಂಶವನ್ನು ಉಚಿತವಾಗಿ ಒದಗಿಸುವ ಗುರಿ ಹೊಂದಲಾಗಿದೆ. ತಾಯಂದಿರ ಪೌಷ್ಟಿಕಾಂಶದ ಅಗತ್ಯಗಳನ್ನು ಪೂರೈಸುವುದರ ಜತೆಗೆ ಶಿಶುಗಳ ಆರೋಗ್ಯಕರ ಬೆಳವಣಿಗೆಗೆ ನೆರವಾಗುವುದು ಯೋಜನೆಯ ಉದ್ದೇಶವಾಗಿದೆ.

- Advertisement -

ಸರ್ಕಾರದಿಂದ ಸಹಕಾರದ ಭರವಸೆ!!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಬಿಸ್ಲೆರಿ’ ವಿರುದ್ಧದ ಕ್ರಮಕ್ಕೂ ನೀರು ಮಾರುಕಟ್ಟಗೆ ‘ಅಂಬಾನಿ’ ಪ್ರವೇಶಕ್ಕೂ...

ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸುಮಾರು 35ರಿಂದ 36%ರಷ್ಟು ಮಾರುಕಟ್ಟೆ ಪಾಲನ್ನು ಬಿಸ್ಲೆರಿ ಹೊಂದಿದೆ. ಬಿಸ್ಲೆರಿ ನೀರಿನ ಸಂಸ್ಥೆ ‘ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು...

ಸಂವಿಧಾನ ದಿನ | ಸಂವಿಧಾನಕ್ಕೆ ಮೋದಿ ಸರ್ಕಾರ ಮತ್ತು...

ಭಾರತವು ಸಂವಿಧಾನ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ಆಶಯಗಳು ಅಭೂತಪೂರ್ವ ಬಿಕ್ಕಟ್ಟಿಗೆ ಸಿಲುಕಿವೆ. 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆರಂಭಿಸಿರುವ ಈ ಪ್ರಾಯೋಗಿಕ ಯೋಜನೆ ಫಲಿತಾಂಶದ ಆಧಾರದ ಮೇಲೆ ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸಲು ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದರು. ಸದ್ಗುರು ಶ್ರೀ ಮಧುಸೂದನ್ ಸಾಯಿ ಅವರ ಮಾರ್ಗದರ್ಶನದಲ್ಲಿ ಉಚಿತ ಶಿಕ್ಷಣ, ವೈದ್ಯಕೀಯ ಸೇವೆ ಹಾಗೂ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಉಪಾಹಾರ ಒದಗಿಸುತ್ತಿರುವ ಕಾರ್ಯ ಶ್ಲಾಘನೀಯ. ಇಂತಹ ಸೇವಾ ಚಟುವಟಿಕೆಗಳು ಸಮಾಜದ ಆರೋಗ್ಯ ಮತ್ತು ಅಭಿವೃದ್ಧಿಗೆ ಪೂರಕವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇತರ ಜಿಲ್ಲೆಗಳಿಗೂ ವಿಸ್ತರಿಸುವ ಉದ್ದೇಶ!!

ಹಾಲುಣಿಸುವ ತಾಯಂದಿರಿಗೆ ಪೌಷ್ಟಿಕಾಂಶದ ನೆರವು ಒದಗಿಸುವ ಈ ಯೋಜನೆಯು ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಸಹಕಾರಿಯಾಗಲಿದೆ. ಇಂತಹ ಜನಪರ ಉಪಕ್ರಮಗಳನ್ನು ಮುಂದಿನ ದಿನಗಳಲ್ಲಿ ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸುವ ಉದ್ದೇಶವಿದೆ ಎಂದು ಒನ್‌ ವರ್ಲ್ಡ್‌ ಒನ್‌ ಫ್ಯಾಮಿಲಿ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ್ ಸಾಯಿ ಹೇಳಿದರು.

ಸಾಯಿ ಶ್ಯೂರ್‌ನ ಪಯಣ ಹಾಗೂ ಯೋಜನೆಯ ಉದ್ದೇಶವನ್ನು ವಿವರಿಸಿದ ಅನ್ನಪೂರ್ಣ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಕಡಲಿ, ಈ ಯೋಜನೆಯು ತಾಯಿ, ಮಗು ಮತ್ತು ರೈತರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರುವ ಆಶಯ ಹೊಂದಿದೆ. ಅಲ್ಲದೇ ಐದು ಲಕ್ಷ ಹಾಲುಣಿಸುವ ತಾಯಂದಿರಿಗೆ ಪೌಷ್ಟಿಕಾಂಶದ ನೆರವು ಒದಗಿಸುವ ಉದ್ದೇಶದೊಂದಿಗೆ ಈ ಉಪಕ್ರಮವನ್ನು ರೂಪಿಸಲಾಗಿದೆ ಎಂದರು.

ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಪುತ್ಥಳಿ ನಿರ್ಮಾಣದಲ್ಲಿ ಪ್ರತಿಷ್ಠೆಗಿಂತ ಗೌರವ, ರಕ್ಷಣೆಗೆ ಆದ್ಯತೆ: ಕೊತ್ತೂರು ಮಂಜುನಾಥ್

ಕಾರ್ಯಕ್ರಮದಲ್ಲಿ ಪ್ರಶಾಂತಿ ಬಾಲಮಂದಿರ ಟ್ರಸ್ಟ್‌ನ ಅಧ್ಯಕ್ಷ ಬಿ.ಎನ್. ನರಸಿಂಹಮೂರ್ತಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಜಿಲ್ಲೆಯಲ್ಲಿ ನೀರಿನ ಮಿತ ಬಳಕೆಗೆ ಡಿಸಿ ಮನವಿ

ಜಿಲ್ಲೆಯ ಎಲ್ಲ ತಾಲೂಕುಗಳು ಬರಪೀಡಿತವಾಗಿರುವ ಹಿನ್ನೆಲೆಯಲ್ಲಿ, ಮುಂದಿನ ಬೇಸಿಗೆಯ ಕುಡಿಯುವ ನೀರಿನ...

ಶಿವಮೊಗ್ಗ | ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹ : ರೈತರಿಂದ ಸಚಿವರ ಕಚೇರಿಗೆ ಮುತ್ತಿಗೆ

ಶಿವಮೊಗ್ಗ, ಭದ್ರಾ ಎಡ ಮತ್ತು ಬಲದಂಡೆ ನಾಲೆಗಳಿಗೆ ತಕ್ಷಣವೇ ನೀರು ಹರಿಸುವಂತೆ...

ಮಂಡ್ಯ | ಸಂವಿಧಾನವು ಪ್ರತಿಯೊಬ್ಬರ ಸಾಮಾಜಿಕ ಸಮಾನತೆಯ ದಾರಿದೀಪ : ಜಿಲ್ಲಾಧಿಕಾರಿ

ಸಮಾನತೆ, ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ಪ್ರತಿಪಾದಿಸುವ...