ಚಿಕ್ಕಬಳ್ಳಾಪುರ | ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಆದ್ಯತೆ: ಶಾಸಕ ರವಿ ಕುಮಾರ್

Date:

ಗ್ರಾಮೀಣ ಭಾಗದ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅವರ ಸ್ವಂತ ಗ್ರಾಮಗಳಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾ ಸೇವಾ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು.

ಶಿಡ್ಲಘಟ್ಟ ತಾಲೂಕಿನ ಚಿಲಕಲನೇರ್ಪು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಡಕಚೇರಿ ಆವರಣದಲ್ಲಿ ಆಯೋಜಿಸಿದ್ದ ಪ್ರಜಾ ಸೇವಾ ಆಂದೋಲನ ಹಾಗೂ ಜನಸ್ಪಂದನಾ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸರ್ಕಾರದ ಮಾರ್ಗಸೂಚಿಯಂತೆ ಗ್ರಾಮ ಪಂಚಾಯಿತಿ ಮತ್ತು ಹೋಬಳಿ ಮಟ್ಟದಲ್ಲಿ ಪ್ರಜಾ ಸೇವಾ ಆಂದೋಲನ ಆಯೋಜಿಸಲಾಗುತ್ತಿದೆ. ಚಿಲಕಲನೇರ್ಪು ವ್ಯಾಪ್ತಿಯಲ್ಲಿ ಏಳನೇ ಜನಸ್ಪಂದನಾ ಕಾರ್ಯಕ್ರಮ ನಡೆಯುತ್ತಿದ್ದು, ವಿವಿಧ ಇಲಾಖೆಗಳ ಯೋಜನೆಗಳು ಹಾಗೂ ಸೌಲಭ್ಯಗಳ ಮಾಹಿತಿ ಪಡೆದು ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ 56 ಸಾವಿರ ಕುಟುಂಬಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಉದ್ದೇಶ ಹೊಂದಿದ್ದು, ಸಾರ್ವಜನಿಕರು ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಉಪವಿಭಾಗಾಧಿಕಾರಿ ಶೋಭಿತ ಮಾತನಾಡಿ, ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅವರ ಊರಿನಲ್ಲಿಯೇ ಸಮಸ್ಯೆಗಳನ್ನು ಪರಿಹರಿಸು ವುದು ಪ್ರಜಾ ಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ಐಪಿಜಿಎಸ್ ಪೋರ್ಟಲ್‌ನಲ್ಲಿ ದಾಖಲಿಸಿದಾಗ ಮಾತ್ರ ಅವು ಅಧಿಕೃತವಾಗಿ ಪರಿಗಣನೆ ಯಾಗುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಶಾಸಕ ರವಿಕುಮಾರ್ ಅವರು ಇಲಾಖಾವಾರು ಮಳಿಗೆಗಳಿಗೆ ಭೇಟಿ ನೀಡಿ ಯೋಜನೆಗಳ ಅನುಷ್ಠಾನದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಅವುಗಳ ಪರಿಹಾರಕ್ಕೆ ಸಂಬಂಧಿಸಿ ದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.


ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಪುತ್ಥಳಿ ನಿರ್ಮಾಣದಲ್ಲಿ ಪ್ರತಿಷ್ಠೆಗಿಂತ ಗೌರವ, ರಕ್ಷಣೆಗೆ ಆದ್ಯತೆ: ಕೊತ್ತೂರು ಮಂಜುನಾಥ್

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೇಮಾವತಿ ಆರ್, ಆಡಳಿತಾಧಿಕಾರಿ ಅಬೀದ್ ಎಸ್.ಎಸ್, ತಹಸೀಲ್ದಾರ್ ಗಗನ ಸಿಂಧು, ಚೇಳೂರು ತಹಸೀಲ್ದಾರ್ ಶ್ವೇತಾ, ಚೇಳೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರಪ್ಪ ಸೇರಿದಂತೆ ಶಿಡ್ಲಘಟ್ಟ ಮತ್ತು ಚೇಳೂರು ತಾಲೂಕುಗಳ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಹಿನ್ನೆಲೆ; ವಿಬಿ-ಜಿ ರಾಮ್‌ಜಿ ಯೋಜನೆಯಡಿ 175 ದಿನಗಳ ಕೆಲಸಕ್ಕೆ ಪತ್ರ: ಈಶ್ವರ ಖಂಡ್ರೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರಗಾಲ ಆವರಿಸಿದ್ದು, "ವಿಕಸಿತ ಭಾರತ - ಗ್ಯಾರಂಟಿ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ; ಫಲಿಸಿತು ದಶಕಗಳ ಬೇಡಿಕೆ

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ...

ಮುಂಡಗೋಡ | ಮನೆಯಲ್ಲಿ ಕಾಡು ಹಂದಿ ಮಾಂಸ ಪತ್ತೆ: ಓರ್ವ ಅರೆಸ್ಟ್, ಮತ್ತೊಬ್ಬ ಪರಾರಿ!

ಬಾಡಿಗೆ ಮನೆಯಲ್ಲಿ ಅಕ್ರಮವಾಗಿ ಕಾಡು ಹಂದಿ ಮಾಂಸವನ್ನು ಪಾಲು ಮಾಡಿ ಅಡುಗೆ...

ಯಲ್ಲಾಪುರ | ಪ್ರಜಾಸೇವಾ ಆಂದೋಲನಕ್ಕೆ ಜನರಿಂದ ಉತ್ತಮ ಸ್ಪಂದನೆ: ಲಕ್ಷ್ಮಣ ಸವದಿ

ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ದೊರೆಯುತ್ತಿದ್ದು,...