ತುಮಕೂರು | ಸಿದ್ಧಗಂಗಾ ಶ್ರೀಗಳ ಆಶೀರ್ವಾದದೊಂದಿಗೆ ಶಶಿ ಹುಲಿಕುಂಟೆ ಮಠ್ ಪ್ರಚಾರ ಕಾರ್ಯ ಆರಂಭ

Date:

ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಅವರು ಶ್ರೀಮತಿ ಅಮೂಲ್ಯ ಅವರೊಂದಿಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು ಚುನಾವಣಾ ಪ್ರಚಾರ ಕಾರ್ಯ ಆರಂಭಿಸಿದರು. 

- Advertisement -

ಕೆಲಕಾಲ ಸಿದ್ದಗಂಗಾ ಸ್ವಾಮೀಜಿ ಅವರೊಂದಿಗೆ ಚುನಾವಣಾ ವಿಷಯವಾಗಿ ಚರ್ಚಿಸಿ ಮಾರ್ಗದರ್ಶನ ಪಡೆದರು.  ಕಿರಿಯ ವಯಸ್ಸಿಗೆ ಅತಿ ದೊಡ್ಡ ಜವಾಬ್ದಾರಿಯನ್ನು ಹೊತ್ತಿದ್ದೀರಿ. ಎಲ್ಲರ ಸಲಹೆ ಸೂಚನೆಗಳನ್ನು ಸ್ವೀಕರಿಸಬೇಕು. ಭವಿಷ್ಯದ ಯುವ ನಾಯಕನಾಗಿ ಬೆಳೆಯುವ ಸಾಮರ್ಥ್ಯ ನಿಮ್ಮಲ್ಲಿದೆ. ಎಲ್ಲರ ಕಷ್ಟ ಕಾರ್ಪಣ್ಯಗಳಿಗೆ ಸಂತೈಸುವ ಮದ್ದು ನೀವಾಗಬೇಕು. ಭವಿಷ್ಯದಲ್ಲಿ ಉನ್ನತ ಹುದ್ದೆ ಹಾಗೂ ಅವಕಾಶಗಳು ಸಿದ್ದಿಯಾಗಲಿ ಎಂದು ಶ್ರೀಗಳು ಬೆನ್ನು ತಟ್ಟಿ ಶುಭ ಹಾರೈಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಈ ಸಂದರ್ಭದಲ್ಲಿ ಸಿದ್ದಲಿಂಗ ಶ್ರೀಗಳು ಶಶಿಹುಲಿ ಕುಂಟೆ ಮಠ್ ಅವರನ್ನು ಶಾಲು ಹೂದಿಸಿ ಸನ್ಮಾನಿಸಿ ಗೌರವಿಸಿದರು. ಇದಕ್ಕೂ ಮುನ್ನ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. 

1002724551

ಈ ವೇಳೆಯಲ್ಲಿ ಶಶಿಹುಲಿ ಕುಂಟೆಮಠ್ ಗೆ  ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷ ಡಾ. ದರ್ಶನ್ ಕೆ. ಎಲ್ ಬೆಂಬಲ ವ್ಯಕ್ತಪಡಿಸಿದರು.

ಮಹಾಸಭಾ ಪ್ರಧಾನ ಕಾರ್ಯದರ್ಶಿ ಮನು ಕೊಪ್ಪ, ನಿರ್ದೇಶಕರಾದ ಮಲ್ಲಿಕಾರ್ಜುನ್, ನಾಗರ್ಜುನ್, ಕೆಪಿವೈಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಜೆ, ಗಿರಿ ರಾಮಯ್ಯ, ಜೈ ಶಂಕರ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮತ್ತು ವೀರಶೈವ ಲಿಂಗಾಯತ ಮುಖಂಡರು ಉಪಸ್ಥಿತರಿದ್ದರು.

1002724537

ಇಂದಿನಿಂದ ತುಮಕೂರು ಜಿಲ್ಲಾ ಪ್ರವಾಸ ಹಮ್ಮಿಕೊಳ್ಳಲಿದ್ದೇನೆ

ಸ್ವಾಮೀಜಿಗಳ ಭೇಟಿ ಬಳಿಕ ಶಶಿ ಹುಲಿಕುಂಟೆ ಮಠ್ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟಿಕೆಟ್ ಘೋಷಣೆಯಾದ ಬಳಿಕ ಸಿದ್ದಗಂಗಾ ಮಠಕ್ಕೆ ಮೊದಲ ಬಾರಿಗೆ ಭೇಟಿ ನೀಡಿ ಶಿವಕುಮಾರಸ್ವಾಮೀಜಿ ಗದ್ದುಗೆ ಪೂಜೆ ಸಲ್ಲಿಸಿ, ಸಿದ್ದಗಂಗಾ ಸ್ವಾಮೀಜಿ ಆಶೀರ್ವಾದ ಪಡೆದಿದ್ದೇನೆ. ತಾಲೂಕು ಮಟ್ಟ, ವಿಧಾನಸಭಾ ಮಟ್ಟದಲ್ಲಿ ಶಾಸಕರ ನೇತೃತ್ವದಲ್ಲಿ ಚುನಾವಣಾ ಪೂರ್ವ ಭಾವಿ ಚಟುವಟಿಕೆಗಳು ಶುರುವಾಗಿವೆ. ಇದಕ್ಕೆ ಶಿಕ್ಷಕರು, ಪಧವೀದರರು ಬೆಂಬಲವಾಗಿ ನಿಂತಿದ್ದಾರೆ. ಐದು ಜಿಲ್ಲೆಯಿಂದ 1 ಲಕ್ಷದ 76 ಸಾವಿರ ಮತದಾರ ಪದವೀಧರರ ನೋಂದಣಿಯಾಗಿದೆ. ತುಮಕೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 49 ಸಾವಿರಕ್ಕೂ ಅಧಿಕ ನೋಂದಣಿಯಾಗಿದೆ ಎಂದು ಮಾಹಿತಿ ನೀಡಿದರು‌.

ಶಿಕ್ಷಕರು ಸೇರಿದಂತೆ ನನಗೆ ಬೆನ್ನೆಲುಬಾಗಿ ನಿಂತಿರುವವರು ನನ್ನೊಂದಿಗೆ ಮಠಕ್ಕೆ ಬಂದಿದ್ದಾರೆ ಅವರೆಲ್ಲರಿಗೂ ನಾನು ಆಭಾರಿ ಎಂದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಡಿಸಿಸಿ ಬ್ಯಾಂಕ್ ಅಕ್ರಮಗಳ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇಮಿಸಿ: ರೈತ ಸಂಘ ಒತ್ತಾಯ

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ನೂರಾರು...

ತುಮಕೂರು | ನಕಲಿ ಔಷಧ, ಕಲಬೆರಕೆ ಆಹಾರದ ಜಾಲದ ಬಗ್ಗೆ ಎಚ್ಚರಿಕೆ ಇರಲಿ : ಮುರುಳೀಧರ ಹಾಲಪ್ಪ

ಆಹಾರ ಮತ್ತು ಔಷಧ ಎರಡಕ್ಕೂ ನೇರ ಸಂಬಂಧವಿದೆ. ಕಲಬೆರಕೆ ಆಹಾರ ಸೇವಿಸಿ...