ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘದ 2026-28 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಚಿಂತಾಮಣಿ ನಗರದ ಪ್ರವಾಸಿ ಮಂದಿರದಲ್ಲಿ ಜರುಗಿತು.
ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಿದರು ನಂತರ ಮಾತನಾಡಿದವರು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಘಟನೆ ಗಟ್ಟಿಯಾಗಿದ್ದು,ಬಾಕಿ ಇರುವ ಜಿಲ್ಲೆಗಳಲ್ಲೂ ಸಂಘಟನೆ ವಿಸ್ತರಿಸಲಾಗುವುದು ಎಂದರು.ಪದಾಧಿಕಾರಿಗಳು ಮತ್ತು ಸದಸ್ಯರು ಯಾವುದೇ ಆಸೆ-ಆಮಿಷಗಳಿಲ್ಲದೆ ಒಗ್ಗಟ್ಟಿನಿಂದ ಹೋರಾಟಕ್ಕೆ ಸಜ್ಜಾಗಬೇಕು,ಡಿಸೆಂಬರ್ 7 ರಂದು ಪತ್ರಕರ್ತರ ರಕ್ಷಣೆ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಬೆಳಗಾವಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ರಾಜ್ಯದ ಎಲ್ಲಾ ಪತ್ರಕರ್ತರು ಈ ಹೋರಾಟಕ್ಕೆ ಸಾಥ್ ನೀಡಬೇಕು ಎಂದು ಎಂದು ಕರೆ ನೀಡಿದರು.ಎಲ್ಲರೂ ಒಗ್ಗಟ್ಟಿನಿಂದ ಮತ್ತು ಹೋರಾಟದ ಮನೋಭಾವದಿಂದ ಮುಂದುವರಿಯಬೇಕು.ಮುಂದಿನ ದಿನಗಳಲ್ಲಿ ಸರ್ಕಾರದ ಮಟ್ಟದಲ್ಲೂ ಸಂಘಟನೆಯ ಧ್ವನಿ ಮತ್ತು ಪ್ರಭಾವ ಗಟ್ಟಿಯಾಗಿ ಕೇಳಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ನೂತನ ಅಧ್ಯಕ್ಷ ಸೈಯದ್ ಅಸ್ಲಾಂ ಪಾಷಾ ಸಂಘದ ಮುಂದಿನ ಯೋಜನೆ ಕುರಿತು ಮಾಹಿತಿ ನೀಡುತ್ತಾ ಮಾತನಾಡಿದವರು ಪತ್ರಕರ್ತರ ರಕ್ಷಣಾ ಕಾಯ್ದೆಯನ್ನು ಸರ್ಕಾರ ಕೂಡಲೇ ಜಾರಿಗೊಳಿಸಬೇಕು ಮತ್ತು ಪತ್ರಕರ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಪತ್ರಕರ್ತರ ಆರ್ಥಿಕ ಪರಿಸ್ಥಿತಿ ಕಠಿಣವಾಗಿದ್ದು,ಪತ್ರಕರ್ತರ ಮೇಲೆ ದೌರ್ಜನ್ಯ ಮತ್ತು ದಬ್ಬಾಳಿಕೆಗಳು ನಡೆಯುತ್ತಿವೆ.ಇದಕ್ಕೆ ಕಡಿವಾಣ ಹಾಕಲು ಪತ್ರಕರ್ತರ ರಕ್ಷಣಾ ಕಾಯ್ದೆಯನ್ನು ಸರ್ಕಾರ ತಕ್ಷಣ ಜಾರಿಗೆ ತರಬೇಕು.
ಬೆಳಗಿನಿಂದ ಸಂಜೆಯವರೆಗೂ ಸಮಾಜಕ್ಕೆ ನ್ಯಾಯ ಒದಗಿಸಲು,ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಮತ್ತು ಸುದ್ದಿ ಮಾಡಲು ಪತ್ರಕರ್ತರು ಶ್ರಮಿಸುತ್ತಾರೆ.ಆದ್ದರಿಂದ ಸರ್ಕಾರ ಪತ್ರಕರ್ತರಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಹೇಳಿದರು.
ಈ ವೇಳೆ ಜಿಲ್ಲಾ ಹಾಗೂ ತಾಲ್ಲೂಕ್ ಮಟ್ಟದ ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ ಅಧಿಕಾರ ಹಸ್ತಾಂತರಿಸಿದರು.
ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಪುತ್ಥಳಿ ನಿರ್ಮಾಣದಲ್ಲಿ ಪ್ರತಿಷ್ಠೆಗಿಂತ ಗೌರವ, ರಕ್ಷಣೆಗೆ ಆದ್ಯತೆ: ಕೊತ್ತೂರು ಮಂಜುನಾಥ್
ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಪುಟ್ಟ ರಂಗಯ್ಯ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಮುದ್ದುಕೃಷ್ಣ,ಚಿಂತಾಮಣಿ ತಾಲೂಕು ನಿಕಟಪೂರ್ವ ಅಧ್ಯಕ್ಷರಾದ ಇಮ್ರಾನ್ ಖಾನ್ ತಾಲೂಕು ಗೌರವಾಧ್ಯಕ್ಷರಾದ ಮಸ್ತಾನ್ ವಲಿ,ಉಪಾಧ್ಯಕ್ಷ ಗಂಗಾಧರ ಸಿ,ಪ್ರಧಾನ ಕಾರ್ಯದರ್ಶಿ ಸೀನಾ ಟಿ, ಕಾರ್ಯದರ್ಶಿ ಮೊಹಮ್ಮದ್ ಮನ್ಸೂರ್ ಅಹ್ಮದ್, ಕಾರ್ಯಾಧ್ಯಕ್ಷರಾದ ಅಂಬಾನಿ ಮಂಜುನಾಥ್ ,ಸಂಘಟನಾ ಕಾರ್ಯದರ್ಶಿ ಸಲ್ಮಾನ್ ಪಾಷಾ,ಸದಸ್ಯರಾದ ನರಸಿಂಹ, ಎಸ್ ಮೌಲಾ ಅಲಿ,ಬಾಗೇಪಲ್ಲಿ ತಾಲ್ಲೂಕು ಅಧ್ಯಕ್ಷರಾದ ಬಾಬಾ ಜಾನ್,ಗುಡಿಬಂಡೆ ತಾಲ್ಲೂಕು ಅಧ್ಯಕ್ಷರಾದ ಶ್ರೀನಿವಾಸ್,ಸೇರಿದಂತೆ ಜಿಲ್ಲಾ ಹಾಗೂ ವಿವಿಧ ತಾಲೂಕುಗಳ ಪತ್ರಕರ್ತರು ಭಾಗವಹಿಸಿದ್ದರು.



