ಪತ್ರಕರ್ತರ ಹಕ್ಕುಗಳು ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲು ‘ಬೆಳಗಾವಿ ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು,ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಮಟ್ಟದ ಪತ್ರಕರ್ತರು ಮತ್ತು ಸಂಘಟನೆಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ತಾಲೂಕು ಅಧ್ಯಕ್ಷ ಸೈಯದ್ ಅಸ್ಲಾಂ ಪಾಷಾ ಕಳಕಳಿಯ ಮನವಿ ಮಾಡಿದ್ದಾರೆ.
ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಪುತ್ಥಳಿ ನಿರ್ಮಾಣದಲ್ಲಿ ಪ್ರತಿಷ್ಠೆಗಿಂತ ಗೌರವ, ರಕ್ಷಣೆಗೆ ಆದ್ಯತೆ: ಕೊತ್ತೂರು ಮಂಜುನಾಥ್
ಈ ಕುರಿತು ಮಾತನಾಡಿದ ಅವರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬೆಳಗಾವಿ ಚಲೋ ಹೋರಾಟವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.ಇತ್ತೀಚಿನ ದಿನಗಳಲ್ಲಿ ಪತ್ರಕರ್ತರ ಮೇಲೆ ದೌರ್ಜನ್ಯ ಮತ್ತು ದಬ್ಬಾಳಿಕೆ ನಡೆಯುತ್ತಿರುವ ಹಲವಾರು ಘಟನೆಗಳು ನಮ್ಮ ಮುಂದಿದ್ದು,ಪತ್ರಕರ್ತರ ಹಕ್ಕುಗಳ ರಕ್ಷಣೆ ಹಾಗೂ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂಬುದು ಈ ಹೋರಾಟದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ವಿವರಿಸಿದ್ದಾರೆ.



