ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ಲಹಳ್ಳಿ ಗೇಟ್ ಸಮೀಪ ರಾತ್ರಿ ಸುಮಾರು 08:00 ಗಂಟೆಯ ವೇಳೆಗೆ ನಡೆದಿದೆ.
ಅಪಘಾತದಲ್ಲಿ ಟಿವಿಎಸ್ ಎಕ್ಸ್‌ಎಲ್ ದ್ವಿಚಕ್ರ ವಾಹನವು ಜಖಂಗೊಂಡಿದ್ದು,ಸವಾರ ಚಿಂತಾಮಣಿ ತಾಲೂಕಿನ ಶೆಟ್ಟಹಳ್ಳಿ ಗ್ರಾಮದ ಬಾಬು(35 ವರ್ಷ)ಇವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ವಾಹನ ಸವಾರರು ನೆರವಿಗೆ ಧಾವಿಸಿ, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು 108 ಆಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ.
ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ
ಗಾಯಳು ರಸ್ತೆಯಲ್ಲಿ ನರಳುತ್ತಿದ್ದರು ಅಪಘಾತವಾಗಿ ಒಂದು ಗಂಟೆಯಾದರೂ ಆಂಬುಲೆನ್ಸ್ ಬರಲಿಲ್ಲ ಇದರಿಂದ ಸಾರ್ವಜನಿಕರು ಆಕ್ರೋಶಗೊಂಡರು ನಂತರ ತಡವಾಗಿ ಆಂಬುಲೆನ್ಸ್ ಬಂದು ಗಾಯಾಳುವನ್ನು ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತು.



