​ಚಿಂತಾಮಣಿ | ತಾಕತ್ತಿದ್ದರೆ ಚಿಕ್ಕಬಳ್ಳಾಪುರದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಿ ತೋರಿಸಿ:ಪ್ರದೀಪ್ ಈಶ್ವರ್‌ಗೆ ದಲಿತ ಸೇನೆ ಸವಾಲು

Date:

ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬೀಡ್ ಶ್ರೀನಿವಾಸ್ ಅವರು ತೀವ್ರ ವಾಗ್ದಾಳಿ ನಡೆಸಿದ್ದು,ಪತ್ರಿಕಾಗೋಷ್ಠಿಯಲ್ಲಿ ಅವರ ವಿರುದ್ಧ ಹರಿದಾಯ್ದಿದ್ದಾರೆ.

2024ರಲ್ಲಿ ಪಿಒಪಿ ಅಂಬೇಡ್ಕರ್ ಪುತ್ಥಳಿ ವಿಷಯವಾಗಿ ಚಿಂತಾಮಣಿಯಲ್ಲಿ ಪ್ರತಿಭಟನೆ ನಡೆಸಿದಾಗ ಪ್ರದೀಪ್ ಈಶ್ವರ್ ಎ ಎಲ್ಲಿದ್ದರು ಎಂದು ಪ್ರಶ್ನಿಸಿದ ಬೀಡ್ ಶ್ರೀನಿವಾಸ್,ಅವರಿಗೆ ಬುದ್ಧಿ ಇದೆಯಾ ಎಂದು ತೀವ್ರವಾಗಿ ತೊಳೆಯಿದ್ದಾರೆ.ಚಿಂತಾಮಣಿ ತಾಲೂಕಿನಲ್ಲಿ 2 ವರ್ಷಗಳ ಹಿಂದೆ ನಡೆದ ಘಟನೆಯನ್ನು ಮರೆತು,ಎಲ್ಲರೂ ಒಗ್ಗಟ್ಟಾಗಿ ಅಂಬೇಡ್ಕರ್ ಭವನವನ್ನು ಉದ್ಘಾಟನೆ ಮಾಡಿದ್ದಾರೆ.ಮಾಜಿ ಉನ್ನತ ಶಿಕ್ಷಣ ಸಚಿವರು,ಡಿಸಿಎಂ ಮತ್ತು ಸಮಾಜ ಕಲ್ಯಾಣ ಸಚಿವರ ನೇತೃತ್ವದಲ್ಲಿ ಅಂಬೇಡ್ಕರ್ ಭವನ ಮತ್ತು ಪ್ರತಿಮೆ ಉದ್ಘಾಟನೆಯಾಗಿದೆ.ಈಗ ಬಂದು ಚಿಂತಾಮಣಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಗೊಂದಲ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಶ್ರೀನಿವಾಸ್,”ತಾಕತ್ತಿದ್ದರೆ ಚಿಕ್ಕಬಳ್ಳಾಪುರದಲ್ಲಿ ಅಂಬೇಡ್ಕರ್ ಭವನ ಹಾಗೂ ಪ್ರತಿಮೆ ನಿರ್ಮಿಸಿ ಉದ್ಘಾಟಿಸಿ ತೋರಿಸಲಿ”ಎಂದು ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಸವಾಲು ಹಾಕಿದ್ದಾರೆ.

ಶಾಸಕರಾಗಿ ಅವರಿಗೆ ಪತ್ರ ಅಥವಾ ಮನವಿ ನೀಡುವಾಗ ಗೌರವ ಇರಬೇಕು,ಆದರೆ ಪ್ರದೀಪ್ ಈಶ್ವರ್ ಅವರು ಬೇರೆಯವರು ಬರೆದುಕೊಟ್ಟಿದ್ದನ್ನು ಹಿಡಿದುಕೊಂಡು ಹೇಳಿಕೆ ನೀಡುತ್ತಿದ್ದಾರೆ”ಎಂದು ವಾಗ್ದಾಳಿ ನಡೆಸಿದರು.

ದಲಿತ ಮುಖಂಡರು ಮತ್ತು ಸಮುದಾಯಕ್ಕೆ ಉಂಟಾಗಿರುವ ಅವಮಾನದ ವಿರುದ್ಧ ಪ್ರತಿಭಟಿಸಲು ಹಾಗೂ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಅಟ್ರಾಸಿಟಿ ಜಾತಿ ನಿಂದನೆ ಪ್ರಕರಣ ದಾಖಲಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಎಚ್ಚರಿಕೆ ನೀಡಿದರು.

ಮುಂದಿನ ದಿನಗಳಲ್ಲಿ ಎಲ್ಲ ದಲಿತ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಿ,ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ ಕಾನೂನು ಹೋರಾಟ ರೂಪಿಸುವುದಾಗಿ ಬೀಡ್ ಶ್ರೀನಿವಾಸ್ ಸ್ಪಷ್ಟಪಡಿಸಿದರು.

ಇದನ್ನು ಓದಿದ್ದೀರಾ..?ಚಿಂತಾಮಣಿ | ಎನ್.ವಿ. ಶ್ರೀನಿವಾಸನ್ ಅವರ ಚೊಚ್ಚಲ ಕವನ ಸಂಕಲನ ‘ಕಾವ್ಯ ಕುಸುಮಗಳು ಅರಳಿದಾಗ’ಲೋಕಾರ್ಪಣೆ

- Advertisement -

ಪತ್ರಿಕಾಗೋಷ್ಠಿಯಲ್ಲಿ ದಲಿತ ಸೇನೆಯ ತಾಲೂಕು ಉಪಾಧ್ಯಕ್ಷರಾದ ನಾಗರಾಜ್,ನಗರಾಧ್ಯಕ್ಷರಾದ ನರಸಿಂಹ,ಪ್ರಧಾನ ಕಾರ್ಯದರ್ಶಿ ವೆಂಕಟೇಶ್,ಜಿಲ್ಲಾ ಉಪಾಧ್ಯಕ್ಷರಾದ ನಾರಾಯಣಸ್ವಾಮಿ,ಗಂಗಾಧರ,ಬೀಡಾ ಗಂಗಾಧರ,ಹರೀಶ್,ಶಂಕರ,ಉಮೇಶ್,ಗಂಗೋಲಪ್ಪ, ಸೇರಿದಂತೆ ಮತ್ತಿತರರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ಕಾರವಾರ | ಫ್ಲೈ ಓವರ್ ಕೆಳಗಿನ ಸರ್ಕಾರಿ ಜಾಗದಲ್ಲಿ ಅನಧಿಕೃತ ನರ್ಸರಿ

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ...

ಕೋಲಾರ | ಜಿಲ್ಲೆಗೆ ₹600 ಕೋಟಿ‌ ಬರ ಪರಿಹಾರ ನೀಡಲು ಜೆಡಿಎಸ್ ಆಗ್ರಹ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರೈತರಿಗೆ ಸಮರ್ಪಕ ಬರ ಪರಿಹಾರ...

ಕೋಲಾರ | ಎಸ್ಐಆರ್ ವಿರುದ್ಧ ಸಿಪಿಐಎಂ ಪ್ರತಿಭಟನೆ: ಜ್ಞಾನೇಶ್ ಕುಮಾರ್ ವಜಾಕ್ಕೆ ಒತ್ತಾಯ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಶೀಲನೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಚುನಾವಣಾ...