ಚಿಂತಾಮಣಿ | ಯಾದವ ಸಮುದಾಯದ ಶೈಕ್ಷಣಿಕ,ಆರ್ಥಿಕ ಹಾಗೂ ರಾಜಕೀಯ ಅಭಿವೃದ್ಧಿಗೆ ಒತ್ತು : ಮುನೇಗೌಡ

Date:

ಯಾದವ ಸಂಘದ ಜಿಲ್ಲಾಧ್ಯಕ್ಷರು ಹಾಗೂ ವಕೀಲರಾದ ಮುನೇಗೌಡ ಅವರು ಚಿಂತಾಮಣಿ ತಾಲ್ಲೂಕಿನ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ,ಸಮುದಾಯದ ಮುಖಂಡರು ಮತ್ತು ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಮುಖಂಡರನ್ನು ಭೇಟಿ ಮಾಡಿ ಸಮಾಜದ ಸಂಘಟನೆ ಹಾಗೂ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವುದಾಗಿ ತಿಳಿಸಿದರು.

- Advertisement -

ಈಗಾಗಲೇ ಜಿಲ್ಲೆಯ 8 ತಾಲ್ಲೂಕುಗಳ ಮುಖಂಡರನ್ನು ಭೇಟಿ ಮಾಡಿದ್ದು,ಚಿಂತಾಮಣಿ ತಾಲ್ಲೂಕು ಕೊನೆಯ ಭೇಟಿಯಾಗಿದೆ. ಕೇವಲ ಜಿಲ್ಲಾಧ್ಯಕ್ಷ ಸ್ಥಾನ ಮಾತ್ರವಲ್ಲದೆ,ಇತರೆ ಎಲ್ಲಾ ಪ್ರಮುಖ ಸ್ಥಾನಮಾನಗಳು ಹಾಗೂ ಸೌಲಭ್ಯಗಳು ಎಲ್ಲಾ ತಾಲ್ಲೂಕುಗಳಿಗೂ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಸಿಗುವಂತಾಗಬೇಕು ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದೆ.ಎಲ್ಲಾ ತಾಲ್ಲೂಕುಗಳಲ್ಲಿ ಯಾದವ ಸಮುದಾಯದವರು ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಕಾರಣಗಳನ್ನು ಹಾಗೂ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳ ಕೊರತೆಗಳನ್ನು ಈಗಾಗಲೇ ಗುರುತಿಸಿ ದಾಖಲಿಸಿಕೊಳ್ಳಲಾಗಿದೆ.ಮುಂದಿನ ದಿನಗಳಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಲ್ಪಿಸಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಸಮಾಜದ ಬಡ ವರ್ಗದವರು,ಬೂತ್ ಮಟ್ಟದಲ್ಲಿ ಹಾಗೂ ಗ್ರಾಮ ಪಂಚಾಯಿತಿ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಹಂತಗಳಲ್ಲಿ ಯಾದವ ಸಮುದಾಯದವರಿಗೆ ಹೆಚ್ಚಿನ ಆದ್ಯತೆ ಮತ್ತು ಸ್ಥಾನಮಾನ ದೊರಕಿಸಿಕೊಡಲು ಸಂಘಟಿತ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಸಂಘದಿಂದ ನೂತನ ಅಧ್ಯಕ್ಷರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.


ಇದನ್ನು ಓದಿದ್ದೀರಾ..?ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಕಾರ್ಯಕ್ರಮದಲ್ಲಿ ತಾಲ್ಲೂಕ್ ಅಧ್ಯಕ್ಷರಾದ ಪುಂಗನೂರು ನಾರಾಯಣಸ್ವಾಮಿ,ಖಜಾಂಚಿ ಎನ್ ಸುರೇಶ್ ಬಾಬು,ಜಂಟಿ ಕಾರ್ಯದರ್ಶಿ ಎಂ ಎಸ್ ಶ್ರೀನಿವಾಸಪ್ಪ,ಗೌರವಾಧ್ಯಕ್ಷರಾದ ದಂಡುಪಾಳ್ಯ ಅಶ್ವತಪ್ಪ,ಕೆ ರಮೇಶ್,ಸಂಘಟನಾ ಕಾರ್ಯದರ್ಶಿ ಕಲಾವತಿ ಆಂಜನಪ್ಪ,ಕಾರ್ಯಾಧ್ಯಕ್ಷರಾದ ಮುದ್ದುಕೃಷ್ಣ ಯಾದವ್,ಅಂಬರೀಶ್,ಹೆಚ್ ವಿ ರಾಮಚಂದ್ರಪ್ಪ,ಜಿಲ್ಲಾ ನಿರ್ದೇಶಕರಾದ ನಾಗರಾಜ್ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪ್ರಜಾಸೇವೆ’ ಆಂದೋಲನ ಜನಪರ ಕಾರ್ಯಕ್ರಮ- ಸಿ. ಪುಟ್ಟರಂಗಶೆಟ್ಟಿ

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅವರ...

ಶಿವಮೊಗ್ಗ | ಡಾ. ಕಾಂತರಾಜ್ ಕೆ.ಪಿ ನೂತನ ಡಿಎಚ್ಓ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿ...

ಉಡುಪಿ | ಸಂವಿಧಾನ, ಮಾನವೀಯ ಮೌಲ್ಯಗಳ ರಕ್ಷಣೆಗೆ ಬೀದಿಗಿಳಿಯಿರಿ: ಪ್ರಕಾಶ್ ರಾಜ್

ಪ್ರಸ್ತುತ ದೇಶದ ಪರಿಸ್ಥಿತಿಯಲ್ಲಿ ವೇದಿಕೆಗಳಲ್ಲಿ ನಿಂತು ಭಾಷಣ ಮಾಡುವುದಕ್ಕಿಂತ ಬೀದಿಗಿಳಿದು ಸಂವಿಧಾನ...

ಹಾವೇರಿ | ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಮುಂದೆ ನಡೆಯುತ್ತಿದ್ದ ಧರಣಿ ಹಿಂಪಡೆದ ರೈತರು

"ಕಬ್ಬಿಗೆ ಬೆಂಬಲ ಬೆಲೆ ನಿಗದಿ, ಸ್ವಾಮಿನಾಥನ್ ವರದಿ ಜಾರಿಗೆ ಆಗುವವರೆಗೂ ಕಾರ್ಖಾನೆಗಳನ್ನು...