ಚಿಂತಾಮಣಿ | ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಹಾಗೂ ಸಾಲ ಮನ್ನಾಗೆ ಆಗ್ರಹಿಸಿ ರೈತರಿಂದ ತಹಸೀಲ್ದಾರ್‌ಗೆ ಮನವಿ

Date:

​ಮಳೆ ಕೊರತೆಯಿಂದ ಚಿಂತಾಮಣಿ ತಾಲೂಕಿನಲ್ಲಿ ತೀವ್ರ ಬರಗಾಲ ಎದುರಾಗಿದ್ದು,ರೈತರು ಬಿತ್ತನೆ ಮಾಡಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದಾರೆ.ಈ ಹಿನ್ನೆಲೆಯಲ್ಲಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಹಾಗೂ ರೈತರ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಆಗ್ರಹಿಸಿ,ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ ತಾಲೂಕು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

- Advertisement -

ತಾಲೂಕಿನಲ್ಲಿ ಬರಗಾಲದ ಸ್ಥಿತಿ ಇದ್ದರೂ ಸಹ ಬ್ಯಾಂಕ್‌ಗಳು ಹಾಗೂ ಖಾಸಗಿ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿಗಾಗಿ ರೈತರಿಗೆ ಕಿರುಕುಳ ನೀಡುತ್ತಿವೆ.ಗೃಹಲಕ್ಷ್ಮೀ ಮುಂತಾದ ಯೋಜನೆಗಳ ಸೌಲಭ್ಯದ ಹಣವನ್ನೂ ಬ್ಯಾಂಕ್‌ಗಳು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿವೆ ಎಂದು ರೈತರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಪ್ರತಿ ಎಕರೆಗೆ ₹1 ಲಕ್ಷದವರೆಗೆ ಬೆಳೆ ನಷ್ಟ ಪರಿಹಾರ ನೀಡಬೇಕು ಹಾಗೂ ಬ್ಯಾಂಕ್‌ಗಳು ನೋಟಿಸ್ ನೀಡುವುದನ್ನು ತಕ್ಷಣವೇ ಹಿಂಪಡೆದು, ಒಂದು ವರ್ಷದವರೆಗೆ ಸಾಲ ಮರುಪಾವತಿಗೆ ಒತ್ತಾಯಿಸಬಾರದು ಎಂದು ಆಗ್ರಹಿಸಿದರು.

ಇರಗಂಪಲ್ಲಿ ಕೆನರಾ ಬ್ಯಾಂಕ್‌ನಲ್ಲಿ ಸಿಬ್ಬಂದಿ ತೆಲುಗಿನಲ್ಲಿ ಮಾತನಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.ಬಟ್ಲಹಳ್ಳಿ,ಎಂ.ಗೊಲ್ಲಹಳ್ಳಿ ಹಾಗೂ ಪೆದ್ದೂರು ಎಸ್‌ಬಿಐ ಶಾಖೆಗಳಲ್ಲಿ ಸಾಲ ಸೌಲಭ್ಯ ನೀಡದೆ ಅಲಿದಾಡಿಸಲಾಗುತ್ತಿದೆ ಯಗವಕೋಟೆಯ ಕರ್ನಾಟಕ ಬ್ಯಾಂಕ್‌ನಿಂದ ಕೋರ್ಟ್ ನೋಟಿಸ್ ನೀಡಿ ರೈತರಿಗೆ ಭಯ ಹುಟ್ಟಿಸಲಾಗುತ್ತಿದೆ.

​2017 ಮತ್ತು 2018-19ನೇ ಸಾಲಿನಲ್ಲಿ ಸಾಲ ಮನ್ನೆಯಾಗಿರುವ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿ, ಹಣವನ್ನು ಖಾತೆಗಳಿಗೆ ಜಮೆ ಮಾಡಬೇಕು.
​ಸಹಾಯಧನ ಮತ್ತು ಕೂಲಿ ಹಣ ಬಿಡುಗಡೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಬಾಕಿ ಇರುವ ಕುರಿ ಸಾಲ ಸಹಾಯಧನವನ್ನು ನೀಡುವುದು ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು.

ಇದನ್ನು ಓದಿದ್ದೀರಾ..? ಕೋಲಾರ | ಉಪ ಅರಣ್ಯ ಸಂರಕ್ಷಣಾಧಿಕಾರಿ ವಾಟ್ಸಾಪ್ ಸಂದೇಶದಿಂದ ರೈತರಲ್ಲಿ ಆತಂಕ; ತನಿಖೆಗೆ ಆಗ್ರಹ

​ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜೆ.ವಿ.ರಘುನಾಥ ರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ರೈತರು ಭಾಗವಹಿಸಿ,ತಾಲೂಕು ಆಡಳಿತ ಹಾಗೂ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಇಂದು ಅಮರ ಮಹಾವೀರ ಕವನ ಸಂಕಲನ ಲೋಕಾರ್ಪಣೆ

ಅಮರ ಮಾಹಾವೀರ ಕವನ ಸಂಕಲನ ಲೋಕಾರ್ಪಣೆ ಸಮಾರಂಭದಲ್ಲಿ ಕವನ ಸ್ಪರ್ಧೆಗಳಲ್ಲಿನ ವಿಜೇತರಿಗೆ...

ರಾಯಚೂರು | ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಶೇ. 86.02ರಷ್ಟು ಮತದಾನ

ಅಕ್ಟೋಬ‌ರ್ 23ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, ಒಟ್ಟು...

ವಿಜಯಪುರ |ಯುವಜನತೆ ಚೆನ್ನಮ್ಮಳ ಧೈರ್ಯ, ದೇಶಪ್ರೇಮವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲಿ: ಡಾ. ಆನಂದ ಕೆ.

ಬ್ರಿಟಿಷರ ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರರಾಣಿ ಕಿತ್ತೂರು...

ಕಲಬುರಗಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಮುಖ್ಯ...