ಚಿಂತಾಮಣಿ | ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಸಾಂತ್ವನ

Date:

ಸೋಮವಾರ ಸಂಜೆ ಬೋಲೊರೊ,ಆಟೋ. ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ನಡೆದು,ಅಪಘಾತದಲ್ಲಿ ಚಿಂತಾಮಣಿ ನಗರದ ಜೆಜೆ ಕಾಲೋನಿಯ ೫೫ ವರ್ಷದ ರಾಮಾಂಜಿನಮ್ಮ ಹಾಗೂ ಚಿಂತಾಮಣಿ ತಾಲೂಕು ಜುಂಜನಹಳ್ಳಿ ಗ್ರಾಮದ ನಿವಾಸಿ ಶ್ರೀನಿವಾಸರೆಡ್ಡಿ ಹಾಗೂ ಇವರ ಪತ್ನಿ ನರಸಮ್ಮರವರು ನಿಧನರಾಗಿದ್ದರು.

ಚಿಂತಾಮಣಿಯ ಮಾಜಿ ಶಾಸಕ ಹಾಗೂ ಜೆಡಿಎಸ್ ಪಕ್ಷದ ರಾಜ್ಯ ಕೋರ್ ಕಮಿಟಿ ಅದ್ಯಕ್ಷ ಜೆಕೆ ಕೃಷ್ಣಾರೆಡ್ಡಿರವರು ಜೆಜೆ ಕಾಲೋನಿಯ ಮೃತ ರಾಮಾಂಜಿನಮ್ಮರವರ ನಿವಾಸಕ್ಕೆ ತೇರಳಿ,ಮೃತ ರಾಮಾಂಜಿನಮ್ಮರವರ ಪಾರ್ಥಿವ ಶರಿರಕ್ಕೆ ಹೂಮಾಲೆ ಹಾಕಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿ,ಮೃತರ ಕುಟುಂಬಕ್ಕೆ ಸಾಂತ್ವಾನ ತಿಳಿಸಿ, ೨೫ ಸಾವಿರ ರೂಗಳ ಆರ್ಥಿಕ ಸಹಾಯ ಹಸ್ತ ನೀಡಿ,ನಿಮ್ಮ ಎಲ್ಲಾ ಕಷ್ಟ ಸುಖಗಳಲ್ಲಿ ಭಾಗಿಯಾಗುವುದಾಗಿ ಮೃತರ ಕುಟುಂಬಸ್ಥರಿಗೆ ದೈರ್ಯ ತುಂಬಿದರು.

ಇನ್ನೂ ಮೃತ ರಾಮಾಂಜಿರವರ ಗಂಡ ವೆಂಕಟೇಶ್ ರವರಿಗೂ ಕೂಡ ಅಪಘಾತದಲ್ಲಿ ಗಂಭೀರ ಗಾಯಗಳಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಮಾಜಿ ಶಾಸಕ ಜೆ ಕೆ ಕೃಷ್ಣಾರೆಡ್ಡಿರವರು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳಿಗೆ ಮೊಬೈಲ್ ಮೂಲಕ ಕರೆ ಮಾಡಿ ಮಾತನಾಡಿ ಮೃತರ ಕುಟುಂಬದವರು ತುಂಬಾ ಬಡವರಾಗಿದ್ದು,ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ, ಮೃತರ ಕುಟುಂಬಕ್ಕೆ ಸರಕಾರದಿಂದ ಸಿಗುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಿಗಿಸಿಕೊಡುವಂತೆ ಜಿಲ್ಲಾದಿಕಾರಿಗಳಲ್ಲಿ ಮನವಿ ಮಾಡಿದ ಅವರು ಇನ್ನೂ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಲು ವೆಂಕಟೇಶ್ ರವರಿಗೆ ಉತ್ತಮವಾದ ಚಿಕಿತ್ಸೆ ನೀಡುವಂತೆ ಆಸ್ಪತ್ರೆ ಅಸ್ಪತ್ರೆಯ ವೈದ್ಯಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಈ ಸಂದರ್ಭದಲ್ಲಿ ಜೆಜೆ ಕಾಲೊನಿಯ ನಿವಾಸಿಗಳು ಮತಿತ್ತರರು ಉಪಸ್ಥಿತಿರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಲೋಹಿಯಾ ಪ್ರತಿಷ್ಠಾನದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಈರಣ್ಣ ರುದ್ರಾಕ್ಷಿ ಅವರಿಗೆ ಸನ್ಮಾನ

ರಾಯಚೂರು ಲೋಹಿಯ ಪ್ರತಿಷ್ಠಾನದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಈರಣ್ಣ ರುದ್ರಾಕ್ಷಿ ಅವರಿಗೆ...

ರಾಯಚೂರು | ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚನೆಗೆ ಜೆಡಿಎಸ್ ಆಗ್ರಹ

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರನ್ನು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ...

ಉಡುಪಿ | ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆ ಮಾಡಬೇಕು: ಜಾನ್ ಆರ್. ಡಿಸಿಲ್ವ

ಇಂದು ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ವಿಪುಲ ಅವಕಾಶಗಳಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಚಾಕಚಕ್ಯತೆಯನ್ನು...

ರಾಯಚೂರು | ಹಿರಿಯ ನ್ಯಾಯವಾದಿ ಸೈಯದ್ ಜಾವೀದ್ ಉಲ್ ಹಕ್ ನಿಧನ

ನಗರದ ಹಿರಿಯ ನ್ಯಾಯವಾದಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸೈಯದ್‌...