ಚಿಂತಾಮಣಿ ನಗರದ ಬೆಸ್ಕಾಂ ಉಪ ವಿಭಾಗದ ಕಚೇರಿಯಲ್ಲಿ ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ವಿಶೇಷ ಪೂಜಾ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಂಗಳವಾದ್ಯ ಹಾಗೂ ವೈದಿಕ ಮಂತ್ರಘೋಷಗಳೊಂದಿಗೆ ಗಣಪತಿಯ ಮೂರ್ತಿಗೆ ವಿಶೇಷ ಮಹಾಮಂಗಳಾರತಿ,ಪುಷ್ಪಾರ್ಚನೆ ಮತ್ತು ಪೂಜಾವಿಧಿಗಳನ್ನು ನೆರವೇರಿಸಿ,ಪ್ರಸಾದ ವಿತರಣೆ ಮಾಡಲಾಯಿತು.
ಈ ಶುಭ ಸಂದರ್ಭದಲ್ಲಿ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು, ನೌಕರರ ಸಂಘದ ಪದಾಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (SC/ST)ಕಲ್ಯಾಣ ಸಂಸ್ಥೆಯ ಪದಾಧಿಕಾರಿಗಳು,ಕೇಂದ್ರ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.
ಇದನ್ನು ಓದಿದ್ದೀರಾ..?ಕೋಲಾರ | ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಶಾಸಕ ಕೊತ್ತೂರು ಮಂಜುನಾಥ್ ನೆರವು
ಅಷ್ಟೇ ಅಲ್ಲದೆ,ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು,ವಿಘ್ನನಿವಾರಕ ಶ್ರೀ ಗಣೇಶನ ದರ್ಶನ ಪಡೆದು ಧನ್ಯತೆ ಮೆರೆದರು.




