ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್ಡಿಎ ಅಭ್ಯರ್ಥಿಯಾದ ಕೆ.ಎಂ. ಸುರೇಶ್ ಅವರ ಪರವಾಗಿ ಜೆಡಿಎಸ್ ಕೋರ್ ಕಮಿಟಿ ರಾಜ್ಯಾಧ್ಯಕ್ಷ ಜೆಕೆ ಕೃಷ್ಣಾರೆಡ್ಡಿ ಹಾಗೂ ಜೆಡಿಎಸ್ ಬಿಜೆಪಿ ಪಕ್ಷದ ಕಾರ್ಯಕರ್ತರು ವಕೀಲರನ್ನು ಭೇಟಿ ಮಾಡಿ,ಚುನಾವಣಾ ಪ್ರಚಾರ ನಡೆಸಿ ಬೆಂಬಲ ಕೋರಿ ಮನವಿ ಮಾಡಿದರು.
ನಂತರ ಮಾಜಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಮಾತನಾಡಿ,ನ್ಯಾಯಾಲಯದ ಭವನ ನಿರ್ಮಾಣಕ್ಕಾಗಿ 15 ಎಕರೆ ಜಮೀನು ಮಂಜೂರು ಮಾಡುವ ವಿಚಾರದಲ್ಲಿ ಹಿಂದಿನ ಸರ್ಕಾರಗಳ ಹಾಗೂ ಅಧಿಕಾರಿಗಳ ಪ್ರಯತ್ನ ಮತ್ತು ಸವಾಲುಗಳನ್ನು ನೆನಪಿಸಿಕೊಂಡು ಮಾತನಾಡಿದವರು ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನ್ಯಾಯಾಲಯದ ಭವನಕ್ಕೆ 20 ಎಕರೆ ಜಮೀನು ಕೋರಿ ಮನವಿ ಮಾಡಲಾಗಿತ್ತು.ಆದರೆ ಈ ಪ್ರಕ್ರಿಯೆಯಲ್ಲಿ ಸಾಕಷ್ಟು ಶ್ರಮವಿತ್ತು ಹಾಗೂ ಕೆಲವು ತಾಂತ್ರಿಕ ಕಾರಣಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ಜಮೀನು ಸಿಗಲಿಲ್ಲ ಎಂದು ಅವರು ತಿಳಿಸಿದ್ದಾರೆ.ಅಂತಿಮವಾಗಿ ಪ್ರಸ್ತುತ 15 ಎಕರೆ ಜಮೀನು ಮಂಜೂರಾಗಿದ್ದು,ಮುಂದಿನ ದಿನಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಹೆಚ್ಚಿನ ಅವಕಾಶಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇದನ್ನು ಓದಿದ್ದೀರಾ..?ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ
ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಶ್ರೀನಾಥ್,ವಕೀಲರ ಸಂಘದ ಅಧ್ಯಕ್ಷ ಮಂಜುನಾಥ್ ರೆಡ್ಡಿ,ವಕೀಲ ರಾಜಾರಾಂ,ನಾ. ಶಂಕರ್,ಸೇರಿದಂತೆ ಇನ್ನೂ ಮುಂತಾದವರು ಇದ್ದರು
ಚಿಂತಾಮಣಿ | ಎನ್ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ
- Advertisement -
ಪೋಸ್ಟ್ ಹಂಚಿಕೊಳ್ಳಿ:





