ಚಿಂತಾಮಣಿ | ಮುರುಗಮಲ್ಲ ದರ್ಗಾ ನಮ್ಮ ಜಿಲ್ಲೆಯ ಸೌಹಾರ್ದತೆಗೆ ಸಾಕ್ಷಿ : ಜಿ.ಪಂ.ಸಿಇಒ ಡಾ.ವೈ.ನವೀನ್ ಭಟ್

Date:

ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಸಂಕೇತವಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ಪವಿತ್ರ ಯಾತ್ರಾ ಸ್ಥಳ ಮುರುಗಮಲ್ಲದ ಹಜರತ್ ಅಮ್ಮಜಾನ್ ಬಾವಾಜಾನ್ ದರ್ಗಾಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ – ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ಅವರು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ,ದರ್ಗಾದ ಅಭಿವೃದ್ಧಿ ಕಾಮಗಾರಿಗಳು, ಮೂಲಸೌಕರ್ಯ ಮತ್ತು ಭಕ್ತರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.ದರ್ಗಾಕ್ಕೆ ಪ್ರತಿದಿನ ನೂರಾರು ಭಕ್ತರು ಆಗಮಿಸುತ್ತಾರೆ.ಉರುಸ್ ಸಮಯದಲ್ಲಿ ಲಕ್ಷಾಂತರ ಭಕ್ತರು ಸೇರುತ್ತಾರೆ ಎಂದು ದರ್ಗಾ ಸಮಿತಿಯ ವ್ಯವಸ್ಥಾಪಕ ತೈಯೂಬ್ ನವಾಜ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಧಿಕಾರಿಗಳಿಗೆ ಮಾಹಿತಿಯನ್ನು ಒದಗಿಸಿದರು ಅದೇ ರೀತಿ ರಾಜ್ಯ ವಕ್ಫ್ ಮಂಡಳಿಯ ಮೂಲಕ ಈಗಾಗಲೇ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳ ಕುರಿತು ವಿವರಣೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಬಿಸ್ಲೆರಿ’ ವಿರುದ್ಧದ ಕ್ರಮಕ್ಕೂ ನೀರು ಮಾರುಕಟ್ಟಗೆ ‘ಅಂಬಾನಿ’ ಪ್ರವೇಶಕ್ಕೂ...

ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸುಮಾರು 35ರಿಂದ 36%ರಷ್ಟು ಮಾರುಕಟ್ಟೆ ಪಾಲನ್ನು ಬಿಸ್ಲೆರಿ ಹೊಂದಿದೆ. ಬಿಸ್ಲೆರಿ ನೀರಿನ ಸಂಸ್ಥೆ ‘ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು...

ಸಂವಿಧಾನ ದಿನ | ಸಂವಿಧಾನಕ್ಕೆ ಮೋದಿ ಸರ್ಕಾರ ಮತ್ತು...

ಭಾರತವು ಸಂವಿಧಾನ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ಆಶಯಗಳು ಅಭೂತಪೂರ್ವ ಬಿಕ್ಕಟ್ಟಿಗೆ ಸಿಲುಕಿವೆ. 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ದರ್ಗಾದಲ್ಲಿ ಬರುವ ಭಕ್ತಾದಿಗಳಿಗೆ ಮೂಲಭೂತವಾಗಿ ಕುಡಿಯುವ ನೀರು,ಶೌಚಾಲಯ,ವಾಹನ ನಿಲುಗಡೆ,ರಸ್ತೆ, ವಿದ್ಯುತ್ ದೀಪ,ಸ್ವಚ್ಛತೆ ಮತ್ತು ವಸತಿ ಸೌಲಭ್ಯಗಳನ್ನು ಇನ್ನಷ್ಟು ಸುಧಾರಿಸಲು ಕ್ರಮ ಕೈಗೊಳ್ಳುವಂತೆ ಸಿಇಒ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದರ್ಗಾ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು,ಪ್ಲಾಸ್ಟಿಕ್ ಮುಕ್ತ ವಾತಾವರಣ ನಿರ್ಮಿಸುವುದು ಮತ್ತು ಭಕ್ತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುವ ಬಗ್ಗೆ ಸೂಕ್ತ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮುರುಗಮಲ್ಲ ದರ್ಗಾ ಹಿಂದೂ-ಮುಸ್ಲಿಮರು ಒಟ್ಟಾಗಿ ಪೂಜಿಸುವ ಪವಿತ್ರ ಕ್ಷೇತ್ರ.ಇಲ್ಲಿ ಜಾತಿ-ಧರ್ಮ ಮೀರಿ ಎಲ್ಲರೂ ಒಟ್ಟಾಗಿ ಸೇರಿ ಪ್ರಾರ್ಥನೆ ಸಲ್ಲಿಸುತ್ತಾರೆ ಇದು ನಮ್ಮ ಜಿಲ್ಲೆಯ ಸೌಹಾರ್ದತೆ ಮತ್ತು ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದು ಭಕ್ತಾದಿಗಳಿಂದ ತಿಳಿದುಕೊಂಡಿದ್ದೇನೆ ಈ ಪವಿತ್ರ ಸ್ಥಳದ ಪಾವಿತ್ರ್ಯತೆ ಮತ್ತು ಸೌಹಾರ್ದತೆಯನ್ನು ಉಳಿಸಿಕೊಂಡು ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಡಾ. ನವೀನ್ ಭಟ್ ಹೇಳಿದರು.


ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಪುತ್ಥಳಿ ನಿರ್ಮಾಣದಲ್ಲಿ ಪ್ರತಿಷ್ಠೆಗಿಂತ ಗೌರವ, ರಕ್ಷಣೆಗೆ ಆದ್ಯತೆ: ಕೊತ್ತೂರು ಮಂಜುನಾಥ್

ಜಿಲ್ಲಾ ಪಂಚಾಯತಿ ಪ್ರಭಾರ ಸಹಾಯಕ ಕಾರ್ಯದರ್ಶಿ ಹೇಮಾವತಿ,ತಾಲೂಕು ಪಂಚಾಯಿತಿ ಇಒ ಆನಂದ್ ಕುಮಾರ್,ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಸದಸ್ಯ ತಮೀಮ್ ಪಾಷ,ಶಿಡ್ಲಘಟ್ಟ ನಗರಸಭೆ ಮಾಜಿ ನಾಮ ನಿರ್ದೇಶನ ಸದಸ್ಯ ಅಬ್ದುಲ್ ಗಫೂರ್.ದರ್ಗಾ ಅಭಿವೃದ್ಧಿ ಸಮಿತಿಯ ವ್ಯವಸ್ಥಾಪಕ ತಯೂಬ್ ನವಾಜ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಜಿ ಅನ್ಸರ್ ಖಾನ್,ಪಿಡಿಓ ಸುರೇಶ್ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಸಂವಿಧಾನವು ಪ್ರತಿಯೊಬ್ಬರ ಸಾಮಾಜಿಕ ಸಮಾನತೆಯ ದಾರಿದೀಪ : ಜಿಲ್ಲಾಧಿಕಾರಿ

ಸಮಾನತೆ, ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ಪ್ರತಿಪಾದಿಸುವ...

ವಿಜಯಪುರ |ಸಂವಿಧಾನ ಎಲ್ಲ ಭಾರತೀಯರ ಆಸ್ತಿ ;ಪ್ರೊ ಬಿ ಎಲ್ ಲಕ್ಕಣ್ಣನವರ

ಸಂವಿಧಾನ ಯಾವುದೇ ಧರ್ಮ ಅಥವಾ ಜನಾಂಗಕ್ಕೆ ಸೀಮಿತವಾದುದಲ್ಲ. ಅದು ಇಡೀ ಭಾರತೀಯರ...

ವಿಜಯಪುರ |ಸಂವಿಧಾನದ ಮೌಲ್ಯಗಳು ಸಮಾನತೆ, ನ್ಯಾಯ ಮತ್ತು ಭ್ರಾತೃತ್ವದ ಸಮಾಜ ನಿರ್ಮಾಣಕ್ಕೆ ದಾರಿ ;ವಿಠಲ ಕಟಕಧೋಂಡ

ಭಾರತೀಯ ಸಂವಿಧಾನವು ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಒಳಗೊಂಡಿದ್ದು,...