ಚಿಂತಾಮಣಿ ತಾಲ್ಲೂಕಿನ ಬುರುಗಮಾಕಲಹಳ್ಳಿಯ ಸಂಜೀವಿನಿ ಭವನದಲ್ಲಿಆಗ್ನೇಯ ಪದವೀಧರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಕೆ ಎಂ ಸುರೇಶ್ ಪರ ಬಹಿರಂಗ ಪ್ರಚಾರ ಸಭೆಯನ್ನು ಆಯೋಜಿಸಲಾಗಿತ್ತು.
ಸಭೆಯನ್ನು ಉದ್ದೇಶಿಸಿ ಕೋರ್ ಕಮಿಟಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ಜೆ.ಕೆ. ಕೃಷ್ಣಾರೆಡ್ಡಿ ಅವರು ಮುಂಬರುವ ರಾಜಕೀಯ ಚಟುವಟಿಕೆಗಳು ಹಾಗೂ ಸಭೆಗಳ ಕುರಿತು ಪ್ರಮುಖ ಮಾಹಿತಿ ಹಂಚಿಕೊಂಡಿದ್ದಾರೆ.ಈಗಾಗಲೇ ಅತಿಥಿ ಉಪನ್ಯಾಸಕರ ಜೊತೆ ಸಭೆಗಳನ್ನು ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಭೆಗಳನ್ನು ಆಯೋಜಿಸುವುದಾಗಿ ತಿಳಿಸಿದ್ದಾರೆ.
ಶಿಕ್ಷಕರು,ಉಪನ್ಯಾಸಕರು ಹಾಗೂ ವಿವಿಧ ಸಂಘಟನೆಗಳ ಪ್ರಮುಖರೊಂದಿಗೆ ಸಭೆಗಳನ್ನು ನಡೆಸಿ,ಸ್ಥಳೀಯ ಮಟ್ಟದಲ್ಲಿ ಜನರನ್ನು ತಲುಪುವ ಕಾರ್ಯತಂತ್ರ ರೂಪಿಸಲಾಗುತ್ತಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಕ್ಷದ ಮುಖಂಡರನ್ನು ಭೇಟಿ ಮಾಡಿ,ಮತದಾರರ ಮನವೊಲಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ ಅವರು ಇಂದಿನ ಸರ್ಕಾರದ ಆಡಳಿತ ವೈಖರಿ ಮತ್ತು ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ತಿಳಿಸುವುದಾಗಿ ಕ್ಷೇತ್ರದಾದ್ಯಂತ ಸಂಘಟನೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಮತ್ತು ಜನರ ಸಮಸ್ಯೆಗಳಿಗೆ ಸ್ಪಂದಿಸಲು ಈ ಸಭೆಗಳು ಸಹಕಾರಿಯಾಗಲಿವೆ ಎಂದು ಅವರು ತಿಳಿಸಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಮಾತನಾಡಿ ಈ ಕ್ಷೇತ್ರದ ಮತದಾರರು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿಲ್ಲ ಮತ್ತು ಮುಂದೆಯೂ ನೀಡುವುದಿಲ್ಲ,ಕಾಂಗ್ರೆಸ್ ಪಕ್ಷವು ಕಳೆದ ಚುನಾವಣೆಯಲ್ಲಿ ಮಾಡಿರುವ ಜನವಿರೋಧಿ ಧೋರಣೆಗಳನ್ನು ಮತ್ತು ತಪ್ಪುಗಳನ್ನು ಕ್ಷೇತ್ರದ ಜನತೆ ಗಮನಿಸುತ್ತಿದ್ದಾರೆ.ಮತದಾರರು ಎಲ್ಲವನ್ನೂ ಅರಿತುಕೊಂಡಿದ್ದು, ಮುಂಬರುವ ದಿನಗಳಲ್ಲಿ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.
ಕೋಲಾರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಎಸ್ ಮುನಿಸ್ವಾಮಿ ಮಾತನಾಡಿ ರಾಜ್ಯದ ವಿವಿಧ ವರ್ಗದ ಜನರಿಗೆ ಕಾಂಗ್ರೆಸ್ ಸರ್ಕಾರವು ಹಲವು ಭರವಸೆಗಳನ್ನು ನೀಡಿ,ಕೊನೆಗೆ ಏನೂ ನೀಡದೆ ಮೋಸ ಮಾಡಿದೆ ಎಂದು ಅವರು ಟೀಕಿಸಿದರು. ಆಗ್ನೇಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ.ಅಭ್ಯರ್ಥಿ ಕೆ.ಎಂ.ಸುರೇಶ್ ಅವರನ್ನು ಗೆಲ್ಲಿಸಿದರೆ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಅವರು ತಿಳಿಸಿದರು.
ಮಾಜಿ ಎಂಎಲ್‌ಸಿ ವೈ.ಎ. ನಾರಾಯಣಸ್ವಾಮಿ ಅವರು ಮುಂಬರುವ ಎಲ್ಲಾ ಹಂತದ ಚುನಾವಣೆಗಳಲ್ಲಿ ಅಸೆಂಬ್ಲಿ, ತಾಲ್ಲೂಕು ಪಂಚಾಯತ್,ಜಿಲ್ಲಾ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.ಈ ಹಿಂದೆ ಈ ಕ್ಷೇತ್ರದಲ್ಲಿ ನಡೆದ 10 ಚುನಾವಣೆಗಳಲ್ಲಿ 8 ಬಾರಿ ಬಿಜೆಪಿ ಹಾಗೂ 2 ಬಾರಿ ಜೆಡಿಎಸ್ ಜಯಗಳಿಸಿದ್ದು,ಕಾಂಗ್ರೆಸ್ ಪಕ್ಷದ ಸಾಧನೆ ಶೂನ್ಯವಾಗಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ 11ನೇ ಬಾರಿಗೆ ಮೈತ್ರಿಕೂಟದ ವಿಜಯವನ್ನು ಸಾಧಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ದೆಹಲಿ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಪಿಐಎಂ ಬೆಂಬಲ
ಈ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು,ಮಾಜಿ ಎಂಎಲ್‌ಸಿ ಶಿವ ಶಂಕರ್, ಬಿಜೆಪಿ ಮುಖಂಡ ವೇಣುಗೋಪಾಲ್,ಜೆಡಿಎಸ್ ಜಿಲ್ಲಾಧ್ಯಕ್ಷ ಮುನಿಯಪ್ಪ,ಮಾಜಿ ಎಂಎಲ್‌ಸಿ ತೂಪಲ್ಲಿ ಚೌಡರೆಡ್ಡಿ,ಬೈರೆಡ್ಡಿ,ಗೋವಿಂದ್ ರಾಜು,ಮನು,ರಾಜಣ್ಣ,ಶ್ರೀನಿವಾಸ್ ಗೌಡ,ನವೀನ್,ಮಹೇಶ್ ಬೈ ಸೇರಿದಂತೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು





