​ಚಿಂತಾಮಣಿ | ತರಬೇತಿದಾರರ ವೈದ್ಯರಿಂದ ರೋಗಿಗಳಿಗೆ ಚಿಕಿತ್ಸೆ: ಚಿಂತಾಮಣಿ ಆಸ್ಪತ್ರೆ ವೈದ್ಯರ ವಿರುದ್ಧ ಡಾ.ಎನ್.ಮಂಜುಳಾ ಗರಂ

Date:

ಸರ್ಕಾರದ ಅಧೀನ ಕಾರ್ಯದರ್ಶಿ ಡಾ.ಎನ್.ಮಂಜುಳಾ ಅವರು ಇಂದು ಚಿಂತಾಮಣಿ ನಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ,ಆಸ್ಪತ್ರೆಯ ವಿವಿಧ ವಿಭಾಗಗಳನ್ನು ಪರಿಶೀಲಿಸಿದರು.ಈ ವೇಳೆ ಕಂಡುಬಂದ ಲೋಪದೋಷಗಳು ಹಾಗೂ ಸಾರ್ವಜನಿಕರ ದೂರುಗಳ ಕುರಿತು ವೈದ್ಯರು ಮತ್ತು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

- Advertisement -

​ಆಸ್ಪತ್ರೆಯ ಗರ್ಭಿಣಿ ಮಹಿಳೆಯರ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ಅಲ್ಲಿ ಅತಿಯಾದ ಜನದಟ್ಟಣೆ ಮತ್ತು ಗೊಂದಲದ ವಾತಾವರಣ ಕಂಡುಬಂತು. ವಿಭಾಗದ ನಿರ್ವಹಣೆಯನ್ನು ಸರಿಯಾದ ರೀತಿಯಲ್ಲಿ ಮಾಡದಿರುವುದನ್ನು ಕಂಡು ಆಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯರ ಮೇಲೆ ಡಾ.ಮಂಜುಳಾ ಅವರು ತೀವ್ರವಾಗಿ ಗರಂ ಆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

​ಸಾರ್ವಜನಿಕರಿಂದ ನೇರ ದೂರುಗಳು
​ಆಸ್ಪತ್ರೆ ವೀಕ್ಷಣೆ ವೇಳೆ ಚಿಕಿತ್ಸೆಗಾಗಿ ಆಗಮಿಸಿದ್ದ ಸಾರ್ವಜನಿಕರು ಮತ್ತು ರೋಗಿಗಳು ಆಸ್ಪತ್ರೆಯ ಅವ್ಯವಸ್ಥೆಗಳ ಬಗ್ಗೆ ಅಧೀನ ಕಾರ್ಯದರ್ಶಿಗಳ ಬಳಿ ಅಳಲು ತೋಡಿಕೊಂಡರು.

ಆಸ್ಪತ್ರೆಗೆ ಬರುವ ರೋಗಿಗಳಿಗೆ ಅನುಭವಿ ವೈದ್ಯರ ಬದಲಾಗಿ ಹೆಚ್ಚಿನ ಸಂದರ್ಭದಲ್ಲಿ ತರಬೇತಿ ಪಡೆಯುತ್ತಿರುವವರೇ ಚಿಕಿತ್ಸೆ ನೀಡಲು ಬರುತ್ತಿದ್ದಾರೆ. ಇದರಿಂದ ರೋಗಿಗಳಲ್ಲಿ ಆತಂಕ ಮೂಡಿದೆ ಎಂದು ಸಾರ್ವಜನಿಕರು ದೂರಿದರು.

ತರಬೇತಿ ಪಡೆಯುವ ಸಿಬ್ಬಂದಿಗೆ ಕನ್ನಡ ಭಾಷೆ ಬಾರದಿರುವ ಕಾರಣ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ನಡುವೆ ಸರಿಯಾದ ಸಂವಹನ ಸಾಧ್ಯವಾಗುತ್ತಿಲ್ಲ.
ಸುತ್ತಮುತ್ತಲಿನ ತಾಲೂಕುಗಳು ಹಾಗೂ ಗ್ರಾಮಾಂತರ ಪ್ರದೇಶಗಳಿಂದ ಬಡ ರೋಗಿಗಳೇ ಹೆಚ್ಚಾಗಿ ಇಲ್ಲಿಗೆ ಚಿಕಿತ್ಸೆ ಪಡೆಯಲು ಬರುತ್ತಿರುವುದರಿಂದ, ತರಬೇತಿದಾರರ ಬದಲು ನಿಪುಣ ವೈದ್ಯರೇ ನೇರವಾಗಿ ಚಿಕಿತ್ಸೆ ನೀಡಲು ಮುಂದಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.

ಸಾರ್ವಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ಡಾ.ಎನ್.ಮಂಜುಳಾ ಅವರು ವೈದ್ಯರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.ವೈದ್ಯರು ಆಪರೇಷನ್ ಥಿಯೇಟರ್ ಅಥವಾ ಆಸ್ಪತ್ರೆಯ ಇತರೆ ವಿಭಾಗಗಳಲ್ಲಿ ದೀರ್ಘಕಾಲ ಕೆಲಸ ನಿರ್ವಹಿಸುವಾಗ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಪರ್ಯಾಯ ವೈದ್ಯರನ್ನು ನಿಯೋಜಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಆಸ್ಪತ್ರೆಯನ್ನು ಸಮರ್ಥವಾಗಿ ನಿರ್ವಹಿಸುವ ಸಂಪೂರ್ಣ ಜವಾಬ್ದಾರಿ ವೈದ್ಯರ ಮೇಲಿದೆ ಎಂದು ಅವರು ತಾಕೀತು ಮಾಡಿದರು.

ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ದೆಹಲಿ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಪಿಐಎಂ ಬೆಂಬಲ

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ!ಚೇತನ್, ತಾಲೂಕು ಆರೋಗ್ಯ ಅಧಿಕಾರಿ ಡಾ!ರಾಮಚಂದ್ರ ರೆಡ್ಡಿ, ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ!ಸಂತೋಷ್ ಕುಮಾರ್, ತಾಲೂಕು ದಂಡಾಧಿಕಾರಿಗಳಾದ ಸುದರ್ಶನ್ ಯಾದವ್, ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಆನಂದ್,ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಪದವೀಧರರ ಶಿಕ್ಷಕರ ನಿಜವಾದ ಧ್ವನಿಯಾಗಲು ಸ್ಪರ್ಧೆ;ಯಾವುದೇ ಒತ್ತಡಕ್ಕೂ ಹಿಂದೆ ಸರಿಯಲ್ಲ:ವಕೀಲ ಬರೀದ್

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಕೀಲ ಬರೀದ್...

ಬಾಗೇಪಲ್ಲಿ | ದೆಹಲಿ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಪಿಐಎಂ ಬೆಂಬಲ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗೆ ದೇಶದ ವಿವಿಧ...

​ಚಿಂತಾಮಣಿ | ಅಕ್ರಮವಾಗಿ ಸಂಗ್ರಹಿಸಿದ್ದ 150 ನಾಡಬಾಂಬ್,ಬಂದೂಕು ವಶ:35 ವರ್ಷದ ವ್ಯಕ್ತಿಯ ಬಂಧನ

ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...