ಚಿಂತಾಮಣಿ ತಾಲ್ಲೂಕಿನ ಕೋನಪಲ್ಲಿ ಸಮೀಪ ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಸ್ವಯಂ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಬಾಲರಾಜು ಬಿನ್ ಚೆನ್ನಪ್ಪಯ್ಯ(21ವರ್ಷ )ಶ್ರೀನಿವಾಸಪುರ ತಾಲ್ಲೂಕು ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಕೂಡಲೇ ಸ್ಥಳೀಯರು ವಿಷಯ ಮುಟ್ಟಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು,112 ಜನಸ್ನೇಹಿ ಪೊಲೀಸ್ ವಾಹನದಲ್ಲಿ ಗಾಯಾಳುವನ್ನು ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ಕರೆತಂದಿದ್ದಾರೆ.
ಬಾಲರಾಜು ಚಿಕ್ಕಬಳ್ಳಾಪುರದಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ದೆಹಲಿ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಪಿಐಎಂ ಬೆಂಬಲ
ಗಾಯಾಳು ಬಾಲರಾಜು ಅವರನ್ನು ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸುವ ಮೂಲಕ ಪೊಲೀಸರು ತಮ್ಮ ಮಾನವೀಯತೆ ಮೆರೆದಿದ್ದಾರೆ.




