​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

Date:

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಜೆಡಿಎಸ್ ಕೋರ್ ಕಮಿಟಿ ರಾಜ್ಯ ಅಧ್ಯಕ್ಷರಾದ ಜೆ.ಕೆ. ಕೃಷ್ಣಾರೆಡ್ಡಿ ಅವರು ಮಾತನಾಡಿದರು.ಆಗಸ್ಟ್ 29 ರಂದು ಬೆಂಗಳೂರಿನ ಜೆ.ಪಿ.ಭವನದಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಪ್ರತಿ ತಿಂಗಳು ಮೂರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲು ತೀರ್ಮಾನಿಸಲಾಗಿತ್ತು.ಅದರಂತೆ ಈ ತಿಂಗಳು ಸೆಪ್ಟೆಂಬರ್ 18 ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ನಂತರ ಸೆಪ್ಟೆಂಬರ್ 19 ರಂದು ಕೋಲಾರ ಜಿಲ್ಲೆಯ ಮಾಲೂರು ಹಾಗೂ 20 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೋರ್ ಕಮಿಟಿ ಸಭೆ ಮತ್ತು ಪ್ರವಾಸ ಕಾರ್ಯಕ್ರಮ ನಿಗದಿಯಾಗಿತ್ತು.ಶಿಡ್ಲಘಟ್ಟದಲ್ಲಿ ಮಳೆ ಮುನ್ಸೂಚನೆ ಸುಮಾರು 80% ಮಳೆಯಾಗುವ ಸಾಧ್ಯತೆ ಇದ್ದು,ಹಾಗೂ ಅಲ್ಲಿನ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯಕ್ರಮಗಳು ನಿಗದಿಯಾಗಿದ್ದರಿಂದ ಸ್ಥಳದ ಅಭಾವ ಎದುರಾಯಿತು.ಆದ್ದರಿಂದ,ಕಾರ್ಯಕರ್ತರಿಗೆ ಮತ್ತು ಸಾರ್ವಜನಿಕರಿಗೆ ಯಾವುದೇ ರೀತಿಯ ಗೊಂದಲ ಹಾಗೂ ತೊಂದರೆಯಾಗದಂತೆ ತಕ್ಷಣವೇ ಸ್ಥಳವನ್ನು ಬದಲಾಯಿಸಲಾಗಿದೆ.ಇದೀಗ ಈ ಕಾರ್ಯಕ್ರಮವನ್ನು ಚಿಂತಾಮಣಿಯ ಮಾಡಿಕೇರಿ ಕ್ರಾಸ್ ಬಳಿ ಇರುವ ವಿ.ಪಿ.ಪ್ಯಾಲೇಸ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

- Advertisement -

​ಗೌರಿಬಿದನೂರು,ಬಾಗೇಪಲ್ಲಿ,ಚಿಕ್ಕಬಳ್ಳಾಪುರ,ಶಿಡ್ಲಘಟ್ಟ ಹಾಗೂ ಚಿಂತಾಮಣಿ ಸೇರಿದಂತೆ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಈ ಸ್ಥಳ ಬದಲಾವಣೆಯನ್ನು ಗಮನಿಸಿ,ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜೆ.ಕೆ. ಕೃಷ್ಣಾರೆಡ್ಡಿ ಅವರು ಮಾಧ್ಯಮಗಳ ಮೂಲಕ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕರಾದ ಮೇಲೂರ್ ರವಿಕುಮಾರ್ ಮಾತನಾಡಿ ಮುಂದೆ ಬರಲಿರುವ ಗ್ರಾಮ ಪಂಚಾಯಿತಿ,ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವುದು ಈ ಸಮಾವೇಶದ ಮುಖ್ಯ ಉದ್ದೇಶವಾಗಿದೆ.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಹಲವು ತಿಂಗಳುಗಳಾಗಿದ್ದರೂ,ರೈತರ ಬಗ್ಗೆ ಯಾವುದೇ ಕಾಳಜಿ ವಹಿಸಿಲ್ಲ ಎಂದು ಅವರು ಆರೋಪಿಸಿದರು.

​ಬರುವ 2028ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರವನ್ನು ಅಧಿಕಾರಕ್ಕೆ ತರುವುದು ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ಮಾಡುವುದು ನಮ್ಮ ಮುಖ್ಯ ಸಂಕಲ್ಪವಾಗಿದೆ ಎಂದು ಶಾಸಕ ರವಿಕುಮಾರ್ ತಿಳಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಸಂವಿಧಾನದ ಆಶಯದಂತೆ ಸೌಲಭ್ಯಗಳು ಪ್ರಾಮಾಣಿಕ ಅನುಷ್ಠಾನವಾಗಲಿ: ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಗುಡೆ ಶ್ರೀನಿವಾಸ ರೆಡ್ಡಿ,ಚಿಮುಲ್ ನಿರ್ದೇಶಕರಾದ ಕೆಎನ್ ಅವಲಪ್ಪ, ಬೈರೆಡ್ಡಿ,ಪ್ರಭಾಕರ,ಶ್ರೀನಿವಾಸ ಗೌಡ,ಸುಬ್ರಹ್ಮಣ್ಯಂ,ಯುವ ಮುಖಂಡರಾದ ಅಬ್ದುಲ್ ಸಮದ್,ಚಲಪತಿ,ಅಪ್ಸರ ಪಾಷಾ, ಕೊತ್ತೂರ್ ಬಾಬು,ಜೆಸಿಬಿ ಶಿವು,ರಾಮಾಂಜಿ,ಜನಾರ್ಧನ್, ನಿಮ್ಮಕಾಯಲಹಳ್ಳಿ ರೆಡ್ಡಪ್ಪ,ಚಂದ್ರಪ್ಪ,ಮಾಜಿ ನಗರಸಭಾ ಸದಸ್ಯರಾದ ವೆಂಕಟರೋಣಪ್ಪ,ಫೋಟೋ ನಾರಾಯಣಪ್ಪ,ಅಂಜಿ,ಕುರುಬರು ಶಂಕರ್,ಸೇರಿದಂತೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...

ಬಾಗಲಕೋಟೆ | ಕೆಲಸ ಮಾಡದೇ ಸಂಬಳ; ಶಾಸಕ ಮೇಟಿ ಸೊಸೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ

ಸರ್ಕಾರಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್...