ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

Date:

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ದೊರಕಿಸಲು ನೆರವಾದ ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆ ಇಆರ್‌ಎಸ್‌ಎಸ್‌ ಸಿಬ್ಬಂದಿಯಾದ ಎಎಸ್‌ಐ ಕೃಷ್ಣಪ್ಪ ಮತ್ತು ದಫೇದಾ‌ರ್ ಮಾದೇಶ್ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪದ್ಮನಿ ಸಾಹು ಅಭಿನಂದಿಸಿ, ಪ್ರಶಂಸಾ ಪತ್ರ ನೀಡಿ ಗೌರವಿಸಿದ್ದಾರೆ.

ಇದನ್ನು ಓದಿದ್ದೀರಾ..?ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ಕರ್ತವ್ಯದಲ್ಲಿದ್ದ ಎಎಸ್‌ಐ ಕೃಷ್ಣಪ್ಪ ಮತ್ತು ದಫೇದಾ‌ರ್ ಮಾದೇಶ್‌ ಅವರಿಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸೋರಪ್ಪಲ್ಲಿ ಗ್ರಾಮದ ಬಳಿ ದ್ವಿಚಕ್ರ ವಾಹನ ಸವಾರನೊಬ್ಬ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಕುರಿತು ಸ್ಥಳೀಯರು ದೂರವಾಣಿ ಮೂಲಕ ಮಾಹಿತಿ ನೀಡಿದ್ದರು.ಕೂಡಲೇ ಸ್ಥಳಕ್ಕೆ ತೆರಳಿದ ಸಿಬ್ಬಂದಿ,ಆಂಬ್ಯು ಲೆನ್ಸ್ ಬಾರದ ಹಿನ್ನೆಲೆಯಲ್ಲಿ ಗಾಯಾಳುವನ್ನು ತಮ್ಮ ವಾಹನದಲ್ಲೇ ಚಿಂತಾಮಣಿ ನಗರದ ಸರ್ಕಾರಿ ಸಾರ್ವ ಜನಿಕ ಆಸ್ಪತ್ರೆಗೆ ಕರೆದೊಯ್ದು ಸಕಾಲದಲ್ಲಿ ಚಿಕಿತ್ಸೆ ದೊರಕಿಸಲು ನೆರವಾದರು.ಗಾಯಾಳುವಿನ ಆರೈಕೆ ಯಲ್ಲಿ ತುರ್ತಾಗಿ ಸ್ಪಂದಿಸಿ ಮಾನವೀಯತೆ ಮೆರೆದ ಇಬ್ಬರು ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದ ಎಸ್ಪಿ ಪದ್ಮನಿ ಸಾಹು, ಅವರಿಗೆ ಪ್ರಶಂಸಾ ಪತ್ರ ನೀಡಿ ಅಭಿ ನಂದಿಸಿದರು. ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ಕರ್ತವ್ಯ ನಿಷ್ಠೆಗೆ ಸಾರ್ವಜನಿಕರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...