ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಚಿಂತಾಮಣಿ ಉಪ ವಿಭಾಗದ ನೂತನ ಡಿ ವೈ ಎಸ್ ಪಿ ಅವರಿಗೆ ಗೌರವಪೂರ್ವಕವಾಗಿ ಸನ್ಮಾನಿಸಿ,ರೈತರ ವಿವಿಧ ಜ್ವಲಂತ ಸಮಸ್ಯೆಗಳ ಕುರಿತು ಮನವಿ ಪತ್ರವನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷರಾದ ಜೆ.ವಿ. ರಘುನಾಥ್ ರೆಡ್ಡಿ ಅವರು ನಮ್ಮ ಭಾಗದಲ್ಲಿ ಭೀಕರ ಬರವಿದ್ದು,ಕೊಳವೆ ಬಾವಿಗಳಲ್ಲಿ ನೀರು ಆರೋಗುತ್ತಿದೆ.ಕೆಲಸ-ಕೂಲಿ ಇಲ್ಲದೆ ರೈತರು ಹಾಗೂ ಸಾರ್ವಜನಿಕರು ಕಷ್ಟದಲ್ಲಿದ್ದಾರೆ.ಇಂತಹ ಪರಿಸ್ಥಿತಿಯಲ್ಲಿ ಮೈಕ್ರೋ ಫೈನಾನ್ಸ್ ಹಾಗೂ ಖಾಸಗಿ ಬ್ಯಾಂಕ್‌ಗಳ ಸಿಬ್ಬಂದಿ ರೈತರ ಮನೆಗಳಿಗೆ ತೆರಳಿ ಸಾಲ ಮರುಪಾವತಿಸುವಂತೆ ಕಿರುಕುಳ ನೀಡುತ್ತಿದ್ದಾರೆ.ಹಲ್ಲೆ ಹಾಗೂ ಬೆದರಿಕೆ ಹಾಕುವ ಮೂಲಕ ರೈತರನ್ನು ಮಾನಸಿಕವಾಗಿ ಹಿಂಸಿಸುತ್ತಿದ್ದಾರೆ,” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಬ್ಯಾಂಕ್ ಹಾಗೂ ಫೈನಾನ್ಸ್ ಕಂಪನಿಗಳ ಇಂತಹ ದೌರ್ಜನ್ಯ ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ರೈತರ ಹಿತ ಕಾಯಬೇಕು,ಎಂದು ಡಿ ವೈ ಎಸ್ ಪಿ ಅವರಿಗೆ ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಡಿ ವೈ ಎಸ್ ಪಿ ಅವರು,ರೈತರ ಸಮಸ್ಯೆಗಳನ್ನು ಆಲಿಸಿ ಕಾನೂನು ವ್ಯಾಪ್ತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಇದನ್ನು ಓದಿದ್ದೀರಾ..?ಕೋಲಾರ | ನರಸಾಪುರ ಕೆ ಬಿ ಹೊಸಹಳ್ಳಿ ಬಂಡೆಯಲ್ಲಿ ಯಲಹಂಕ ಬಾಗಲೂರು ಮೂಲದ ಲಾರಿ ಚಾಲಕನ ಸಾವು
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪ್ರಮುಖ ಮುಖಂಡರಾದ ಶ್ರೀರಾಮ ರೆಡ್ಡಿ,ಪಿ ವಿ ಸೀತಾರಾಮ ರೆಡ್ಡಿ, ಅಶ್ವಥ್ ಗೌಡ,ಜಿ ಆರ್ ರಾಮಚಂದ್ರಪ್ಪ,ಮುನಿಪ್ಪ,ಹಾಗೂ ಸ್ಥಳೀಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.




