ಚಿಂತಾಮಣಿ ನಗರದ ಹೊರವಲಯದ ಕಡಪ–ಬೆಂಗಳೂರು ರಸ್ತೆಯ ಚಿನ್ನಸಂದ್ರ ಕಾಟಮಾಚನಹಳ್ಳಿ ಸಮೀಪದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಕ್ಕೆ ತಾಲೂಕು ದಂಡಾಧಿಕಾರಿಗಳು ಹಾಗೂ ತಹಶೀಲ್ದಾರ್ ಆದ ಸುದರ್ಶನ್ ಯಾದವ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್ ಆನಂದ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇತ್ತೀಚಿಗೆ ಸದರಿ ಹಾಸ್ಟೆಲ್ ನಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು ಹಾಸ್ಟೆಲ್ ಗೆ ತಹಶೀಲ್ದಾರ ವಸತಿನಿಲಯದ ಕಟ್ಟಡದ ವ್ಯವಸ್ಥೆ,ವಿದ್ಯಾರ್ಥಿಗಳ ಕೊಠಡಿಗಳು, ಶುಚಿತ್ವ ಹಾಗೂ ಮೂಲಸೌಕರ್ಯಗಳನ್ನು ಪ್ರತ್ಯಕ್ಷವಾಗಿ ವೀಕ್ಷಿಸಿದರು.
ಕೊಠಡಿಗಳಿಗೆ ಭೇಟಿ ನೀಡಿ ಅಲ್ಲಿನ ಹಾಸಿಗೆ,ಬೆಳಕು ಮತ್ತು ಗಾಳಿಯ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು, ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರಿಗೆ ದೊರೆಯುತ್ತಿರುವ ಆಹಾರದ ಗುಣಮಟ್ಟ ಮತ್ತು ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.
ಇದೇ ವೇಳೆ ವಿದ್ಯಾರ್ಥಿನಿಲಯದ ಸಿಬ್ಬಂದಿ ಹಾಗೂ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿ, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಿಗಾವಹಿಸಲು ಮತ್ತು ನೈರ್ಮಲ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಲು ಸೂಚನೆ ನೀಡಿದರು.
ಹಾಸ್ಟೆಲ್ ನಲ್ಲಿರುವ ವಿದ್ಯಾರ್ಥಿಗಳು ಹಾಸ್ಟೆಲ್ ನಾ ವಾರ್ಡನ್ ಮಹಬೂಬ್ ಬಾಬು ಪಾಷಾ ರವರ ಕಾರ್ಯವೈಖರಿಯ ಬಗ್ಗೆ ಶ್ಲಾಘಸಿ ತಾಲೂಕ್ ಆಡಳಿತಗೆ ಮಾಹಿತಿ ನೀಡಿದರು ಹಾಸ್ಟೆಲ್ ನಲ್ಲಿ ಉತ್ತಮ ಊಟದ ವ್ಯವಸ್ಥೆ, ಮೂಲಭೂತ ಸೌಕರ್ಯಗಳು ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿದೆ, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಾದಂತಹ ತೊಂದರೆಗಳು ಆಗದಂತೆ ಹಾಸ್ಟೆಲ್ ವಾರ್ಡನ್ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಇದನ್ನು ಓದಿದ್ದೀರಾ..?ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್
ಈ ದಿಢೀರ್ ತಪಾಸಣೆಯ ಸಮಯದಲ್ಲಿ ತಾಲೂಕು ಆಡಳಿತದ ಅಧಿಕಾರಿಗಳು ಹಾಗೂ ವಿದ್ಯಾರ್ಥಿನಿಲಯದ ಸಿಬ್ಬಂದಿ ವರ್ಗದವರು ಹಾಜರಿದ್ದರು.





