ಚಿಂತಾಮಣಿ ತಾಲೂಕಿನ ವಿವಿಧ ಪ್ರವಾಸಿ ಸ್ಥಳಗಳಿಗೆ ಬಂದು ವಾಪಸ್ ಹೋಗುತ್ತಿದ್ದ ವೇಳೆ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಸಂಜೆ ವೇಳೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೇಕಲ್ಲಹಳ್ಳಿ ಹಾಗೂ ವೈಜಕುರ ಮಧ್ಯ ನಡೆದಿದೆ.
ಮೃತಪಟ್ಟ ಯುವಕನನ್ನು ಬೆಂಗಳೂರು ಜಾಲಹಳ್ಳಿ ನಿವಾಸಿಯಾದ ಸಾಯಿ ಕುಮಾರ್ 23 ವರ್ಷ ಎಂದು ಗುರುತಿಸಲಾಗಿದೆ.
ಸಾಯಿ ಕುಮಾರ್ ತಮ್ಮ ಸ್ನೇಹಿತರೊಂದಿಗೆ ಚಿಂತಾಮಣಿ ತಾಲ್ಲೂಕಿನ ಕೈಲಾಸಗಿರಿ ಸೇರಿದಂತೆ ವಿವಿಧ ಪ್ರವಾಸಿ ಸ್ಥಳಗಳಿಗೆ ಬಂದು ದ್ವಿಚಕ್ರ ವಾಹನದಲ್ಲಿ ಬೆಂಗಳೂರಿಗೆ ವಾಪಸ್ ಹೋಗುವ ವೇಳೆ ಸಂತೇಕಲ್ಲಹಳ್ಳಿ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾಯಿ ಕುಮಾರ್ ಮೃತಪಟ್ಟಿದ್ದಾನೆ.
ಇದನ್ನು ಓದಿದ್ದೀರಾ..?ಕೋಲಾರ | ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಶಾಸಕ ಕೊತ್ತೂರು ಮಂಜುನಾಥ್ ನೆರವು
ಘಟನೆಯ ವಿಷಯ ತಕ್ಷಣ ಡಿವೈಎಸ್ಪಿ ಪ್ರಕಾಶ್,ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್ ಘಟನಾ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ





