ಚಿಂತಾಮಣಿ | ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರೈತರು ಸಂಕಷ್ಟಕ್ಕೆ: ಸೀಕಲ್ ರಾಮಚಂದ್ರಗೌಡ ಆಕ್ರೋಶ

Date:

ಮುಂಬರುವ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಸೀಕಲ್ ಗ್ರಾಮದಲ್ಲಿ ನಡೆದ ಸಭೆಯ ನಂತರ, ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು ಹಾಗೂ ದುರಾಡಳಿತದಿಂದಾಗಿ ಜನಸಾಮಾನ್ಯರು ಮತ್ತು ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

- Advertisement -

ರಾಜ್ಯ ಸರ್ಕಾರದ ದುರಾಡಳಿತದಿಂದಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಭಾಗದ ರೈತರಿಗೆ ಕುಡಿಯಲು ನೀರು ಸಿಗುತ್ತಿಲ್ಲ ಹಾಗೂ ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ದೊರೆಯದೆ ಕಂಗಾಲಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರಿಗೆ ಸರಿಯಾದ ರೀತಿಯಲ್ಲಿ ಅನುಕೂಲವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಮದ್ಯದ ಪರವಾನಗಿಗಳನ್ನು ನೀಡುವ ಮೂಲಕ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಮತ್ತು ವ್ಯಸನಕ್ಕೆ ಸಿಲುಕಿಸಲಾಗುತ್ತಿದೆ ಎಂದು ಅವರು ತೀವ್ರವಾಗಿ ಖಂಡಿಸಿದ್ದಾರೆ.

ದೇಶವು ಸದೃಢವಾಗಿರಲು ಮತ್ತು ಉಳಿಯಲು ನರೇಂದ್ರ ಮೋದಿ ಅವರ ನೇತೃತ್ವದ ಎನ್.ಡಿ.ಎ.ಸರ್ಕಾರ ಕೇಂದ್ರದಲ್ಲಿ ಮುಂದುವರಿಯುವುದು ಅತ್ಯಗತ್ಯ ಎಂದು ಸೀಕಲ್ ರಾಮಚಂದ್ರಗೌಡ ಅಭಿಪ್ರಾಯಪಟ್ಟಿದ್ದಾರೆ.

ಇದನ್ನು ಓದಿದ್ದೀರಾ..?ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

​ಮುಂಬರುವ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದ ಬೆಂಬಲಿತ ಅಭ್ಯರ್ಥಿಯಾದ ಕೆ.ಎನ್. ಸುರೇಶ್ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಅವರು ಸಭೆಯ ಮೂಲಕ ಸಾರ್ವಜನಿಕರಲ್ಲಿ ಮತ್ತು ಪದವೀಧರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಎತ್ತಿನಹೊಳೆ ಅಲ್ಲ ಹಣದಹೊಳೆ ಹರಿಸುವ ಯೋಜನೆ-ಸಂಸದ ಡಾ.ಕೆ.ಸುಧಾಕರ್

ಕೇರಳ,ತೆಲಂಗಾಣ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮತದಾರರ ಪಟ್ಟಿಯಲ್ಲಿ...