ಸ್ನೇಹಿತನನ್ನೇ ಕೊಂದು ಮೃತದೇಹ ಸುಟ್ಟು ಹಾಕಿದ್ದ ದುಷ್ಕರ್ಮಿಗಳು; ಒಬ್ಬನ ಬಂಧನ, ಮತ್ತೊಬ್ಬ ಆತ್ಮಹತ್ಯೆ

Date:

ಸ್ನೇಹಿತನನ್ನೇ ಕೊಂದು, ಆತನ ಮೃತದೇಹವನ್ನು ಗುಹೆಯಲ್ಲಿ ಸುಟ್ಟಯ ಹಾಕಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಚಿಕ್ಕಬಳ್ಳಾಪುರದ ಪಾತಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ, ಹೆದರಿದ್ದ ಮತ್ತೊಬ್ಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಆಂಧ್ರ ಪ್ರದೇಶದ ದಾದಿವಾರಪಲ್ಲಿ ನಿವಾಸಿ ವೆಂಕಟರಮಣ ನಾಯ್ಕ ಎಂಬಾತನನ್ನು ಆತನ ಇಬ್ಬರು ಸ್ನೇಹಿತರಾದ ಬಾಬು ಮತ್ತು ಪ್ರಭಾಕರ್ ಹತ್ಯೆಗೈದು ಸುಟ್ಟುಹಾಕಿದ್ದರು. ವೆಂಕಟರಮಣ ಮನೆಗೆ ಬಾರದ ಹಿನ್ನೆಲೆಯಲ್ಲಿ, ಆತನ ತಂದೆ ಜ.7ರಂದು ಆಂಧ್ರದ ಅಮ್ಮಡಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ಈ ವೇಳೆ, ಮೃತನ ಸ್ನೇಹಿತ ಬಾಬುನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ತನಿಖೆಯಲ್ಲಿ ಕೃತ್ಯದ ಬಗ್ಗೆ ಒಪ್ಪಿಕೊಂಡಿರುವ ಆರೋಪಿ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ವಂಡಮಾನ್ ಜಲಾಶಯದ ಬಳಿ ವೆಂಕಟರಮಣನನ್ನು ಕೊಂದು, ಸುಟ್ಟು ಹಾಕಿರುವುದಾಗಿ ತಿಳಿಸಿದ್ದಾನೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಳಿಕ, ಅಮ್ಮಡಗೂರು ಪೊಲೀಸರು ಪಾತಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ತನಿಖೆ ಬಗ್ಗೆ ತಿಳಿದ ಮತ್ತೊಬ್ಬ ಆರೋಪಿ ಪ್ರಭಾಕರ್ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಾಬು ಹಾಗೂ ವೆಂಕಟರಮಣ ನಾಯ್ಕ ಮಧ್ಯೆ ಜಮೀನು ವಿವಾದ ಇತ್ತು. ಇಬ್ಬರು ಪದೇ-ಪದೇ ಜಗಳ ಆಡುತ್ತಿದ್ದರು. ಇದೇ ವಿಚಾರಕ್ಕೆ ಕೊಲೆ ಮಾಡಿದ್ದಾರೆ. ಮೃತದೇಹವನ್ನು ವಂಡಮಾನ್‌ ಜಲಾಶಯದ ಬಳಿಗೆ ತಂದು ಸುಟ್ಟು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...