ತಿರುಪತಿ ಸಮೀಪ ಭೀಕರ ಅಪಘಾತ: ಚಿಕ್ಕಬಳ್ಳಾಪುರದ ಮೂವರು ಸಾವು; 12 ಮಂದಿಗೆ ಗಾಯ

Date:

ಇಲ್ಲಿಗೆ ಸಮೀಪದ ಅನ್ನಮಯ್ಯ ಜಿಲ್ಲೆಯ ಕುರಬಳಕೋಟ ಮಂಡಲದ ಚೆನ್ನಾಮರ್ರಿ ಮಿಟ್ಟ ಎಂಬಲ್ಲಿ ಸೋಮವಾರ ಬೆಳಗಿನ ಜಾವ ವೇಗವಾಗಿ ಬಂದ ಲಾರಿಯೊಂದು ಟೆಂಪೋ ಟ್ರಾವೆಲರ್‌ಗೆ ಅಪ್ಪಳಿಸಿದ ಪರಿಣಾಮ ಕರ್ನಾಟಕದ ಮೂವರು ಮೃತಪಟ್ಟಿದ್ದು, ಇತರ 12 ಜನರು ಗಾಯಗೊಂಡಿದ್ದಾರೆ.

- Advertisement -

ಮೃತರನ್ನು ಚಿಕ್ಕಬಳ್ಳಾಪುರದ ಬಾಗೇಪಲ್ಲಿ ನಿವಾಸಿಗಳಾದ ಮೇಘರಾಜ್(17), ಚರಣ್(17) ಮತ್ತು ಶ್ರಾವಣಿ(28) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಲಾರಿ ಡಿಕ್ಕಿ ಹೊಡೆದಾಗ ಟೆಂಪೋ ಟ್ರಾವೆಲರ್ ಮದನಪಲ್ಲಿಯಿಂದ ಬಾಗೇಪಲ್ಲಿ ಕಡೆಗೆ ಹೋಗುತ್ತಿತ್ತು. ಅಪಘಾತದ ತೀವ್ರತೆಗೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ. ಟೆಂಪೋದಲ್ಲಿದ್ದವರು ತಿರುಪತಿ ದರ್ಶನ ಮುಗಿಸಿ ಊರಿಗೆ ಮರಳುತ್ತಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನಾಗರಹೊಳೆ ಬುಡಕಟ್ಟು ಜನಾಂಗಕ್ಕೆ ಸಿಗಲಿ ನ್ಯಾಯ

ಗಾಯಾಳುಗಳನ್ನು ಮದನಪಲ್ಲಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಅಪಘಾತದ ಬಳಿಕ ಲಾರಿ ಸಹಿತ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆಯು ಪ್ರಗತಿಯಲ್ಲಿದೆ ಎಂದು ಪೋಲಿಸ್ ಅಧಿಕಾರಿ ಸತ್ಯನಾರಾಯಣ ತಿಳಿಸಿದ್ದಾರೆ.

ಆಂಧ್ರಪ್ರದೇಶದ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ಅವರು ಭೀಕರ ದುರಂತದ ಬಗ್ಗೆ ತೀವ್ರ ದುಃಖವನ್ನು ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...