ನೆಕ್ಕುಂದಿಪೇಟೆ ಕೆರೆ ಸ್ವರೂಪ ನಾಶ: ಅಕ್ರಮವಾಗಿ ಮಣ್ಣು ಸಾಗಣೆ

Date:

ಚಿಂತಾಮಣಿ : ತಾಲ್ಲೂಕಿನ ನೆಕ್ಕುಂದಿ ಪೇಟೆ ಕೆರೆಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಹಗಲು-ರಾತ್ರಿ ಮಣ್ಣು ಸಾಗಾಟ ಮಾಡಲಾಗುತ್ತಿದೆ ಇದರಿಂದ ಕೆರೆ ಸ್ವರೂಪ ನಾಶವಾಗುತ್ತಿದೆ.ಅಂತರ್ಜಲ ಮಟ್ಟ ಕುಸಿಯುತ್ತಿದೆ.

- Advertisement -

ತಾಲ್ಲೂಕಿನ ಕೋನಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನೆಕ್ಕುಂದಿಪೇಟೆ ಕೆರೆಯಲ್ಲಿ ಕಳೆದ ಕೆಲವು ದಿನಗಳಿಂದ ಜೆಸಿಬಿ ಮತ್ತು ಟ್ರ್ಯಾಕ್ಟ‌ರ್ ಮೂಲಕ ಅವೈಜ್ಞಾನಿಕವಾಗಿ ಮಣ್ಣು ತೆಗೆಯಲಾಗುತ್ತಿದೆ.ಇದರಿಂದ ಕೆರೆ ಒಡ್ಡು ಮತ್ತು ತಳಭಾಗಕ್ಕೆ ಹಾನಿಯಾಗುತ್ತಿದ್ದು ಸಾರ್ವಜನಿಕ ಆಸ್ತಿಗೆ ಧಕ್ಕೆ ಉಂಟಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕೆರೆಯಲ್ಲಿ ಮಣ್ಣು ತೆಗೆಯುತ್ತಿರುವ ಆಳವು ವೈಜ್ಞಾನಿಕ ಮಿತಿಯನ್ನು ಮೀರಿದೆ ಇದರಿಂದ ಕೆರೆ ನೈಸರ್ಗಿಕ ಜಲಮೂಲ ನಾಶವಾಗುತ್ತಿದೆ ಮತ್ತು ಸುತ್ತಮುತ್ತಲಿನ ರೈತರ ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದೆ ಇದು ಪರಿಸರಕ್ಕೆ ಸರಿಪಡಿಸಲಾಗದ ಹಾನಿಯನ್ನುಂಟು ಮಾಡುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದರು.

ಕಂದಾಯ ಇಲಾಖೆ ನಿಯಮಗಳ ಪ್ರಕಾರ ಕೆರೆಗಳಲ್ಲಿ 3 ರಿಂದ 4 ಅಡಿಗಿಂತಲೂ ಹೆಚ್ಚು ಆಳವಾಗಿ ಹಾಗೂ ನೇರವಾಗಿ ಮಣ್ಣು ತೆಗೆಯುವಂತಿಲ್ಲ ಸರ್ಕಾರದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಅನುಮತಿ ಹಾಗೂ ಪರವಾನಗಿ ಪಡೆಯದೆ ಮಣ್ಣು ತೆಗೆಯುವಂತಿಲ್ಲ ಜೆಸಿಬಿಯಂತಹ ಭಾರಿ ಯಂತ್ರಗಳನ್ನು ಕೆರೆಗಳಿಗೆ ಇಳಿಸುವಂತಿಲ್ಲ ಇಷ್ಟೆಲ್ಲ ನಿಯಮಗಳಿದ್ದರೂ ಕೆಲ ಪ್ರಭಾವಿಗಳಿಂದ ಅವ್ಯಾಹತವಾಗಿ ಮಣ್ಣು ದಂಧೆ ನಡೆಯುತ್ತಿದೆ.

ನೆಕ್ಕುಂದಿ ಪೇಟೆಯ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಎತ್ತುತ್ತಿರುವ ಬಗ್ಗೆ ಮಾಧ್ಯಮದವರಿಗೆ ಮಾಹಿತಿ ಸಿಕ್ಕಿದ ತಕ್ಷಣ ಸ್ಥಳಕ್ಕೆ ಹೋದ ಮಾಧ್ಯಮದವರ ಮೇಲೆ ಕೆಲವರು ಗುಂಡಾಗಿರಿ ತೋರಿಸಿ ನಾವು ಅನುಮತಿ ಪಡೆದು ಮಣ್ಣು ತೆಗೆಯುತ್ತಿದ್ದೇವೆ ನೀವು ಯಾರು ನಮಗೆ ಪ್ರಶ್ನೆ ಮಾಡುವುದಕ್ಕೆ ಎಂದು ಅವಾಜ್ ಹಾಕಿದ್ದಾರೆ ಕೂಡಲೇ ಮಾಧ್ಯಮದವರು ತಾಲೂಕು ದಂಡಾಧಿಕಾರಿಗಳಿಗೆತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ಪೊಲೀಸ್ ಇಲಾಖೆಗೆ ಮಾಹಿತಿ ಮುಟ್ಟಿಸಿದ ತಕ್ಷಣ ಸ್ಥಳಕ್ಕೆ ಪೊಲೀಸರು ಆಗಮಿಸುತ್ತಿದ್ದಂತೆ ಜೆಸಿಬಿ ಹಾಗೂ ಎರಡು ಟಿಪ್ಪರ್ ಗಳು ಅಲ್ಲಿಂದ ನಾಪತ್ತೆಯಾಗಿವೆ,ಮಣ್ಣು ತೆಗೆಯುತ್ತಿದ್ದವರನ್ನು ಪೋಲೀಸರು ನಿಮ್ಮ ಬಳಿ ಕೆರೆಯಲ್ಲಿ ಮಣ್ಣು ತೆಗೆಯಲು ಅನುಮತಿ ಪತ್ರವಿದ್ದರೆ ತೋರಿಸಿ ಎಂದು ಪ್ರಶ್ನಿಸಿದಾಗ ಅವರ ಬಳಿ ಅನುಮತಿ ಪತ್ರವೇ ಇರಲಿಲ್ಲ.

ಇದನ್ನು ಓದಿದ್ದೀರಾ..? ಹೋಬಳಿವಾರು ಸಭೆ ಮಾಡಿ ಸಮಸ್ಯೆಗಳು ಇದ್ದರೆ ಪರಿಹಾರಕ್ಕೆ ಕ್ರಮ: ಅಧ್ಯಕ್ಷ ವಿ.ಎಂ ಮುನಿಯಪ್ಪ

ನಂತರ ಪೊಲೀಸರು ಮೊದಲು ಅನುಮತಿ ಪಡೆದು ಕೆರೆಯಿಂದ ಮಣ್ಣು ತೆಗೆದುಕೊಳ್ಳಬಹುದು ಅನುಮತಿ ಇಲ್ಲದೆ ಕೆರೆಯಿಂದ ಮಣ್ಣು ತೆಗೆದರೆ ಅದು ಕಾನೂನು ಉಲ್ಲಂಘನೆ ಆಗುತ್ತದೆ ಎಂದು ಎಚ್ಚರಿಕೆ ನೀಡಿ ವಾಪಾಸಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ಆಗ್ನೇಯ ಪದವೀಧರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಕೆ ಎಂ ಸುರೇಶ್ ಪರ ಬಹಿರಂಗ ಪ್ರಚಾರ

ಚಿಂತಾಮಣಿ ತಾಲ್ಲೂಕಿನ ಬುರುಗಮಾಕಲಹಳ್ಳಿಯ ಸಂಜೀವಿನಿ ಭವನದಲ್ಲಿಆಗ್ನೇಯ ಪದವೀಧರ ಕ್ಷೇತ್ರದ ಎನ್ ಡಿ...

ಬಾಗೇಪಲ್ಲಿ | ಕೇಂದ್ರದ ವಿರುದ್ಧ ಸಿಪಿಐಎಂ ಮುಖಂಡರಿಂದ ಮೇಣದ ಬತ್ತಿ ಹಿಡಿದು ಪ್ರತಿಭಟನೆ

ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ. ಹೋರಾಟಗಳನ್ನು...

ಚಿಂತಾಮಣಿ | ಪೊಲೀಸರ ಮಾನವೀಯತೆ:112 ವಾಹನದಲ್ಲಿ ಗಾಯಾಳು ಆಸ್ಪತ್ರೆಗೆ ದಾಖಲು

ಚಿಂತಾಮಣಿ ತಾಲ್ಲೂಕಿನ ಕೋನಪಲ್ಲಿ ಸಮೀಪ ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಸ್ವಯಂ ಅಪಘಾತ...

ಚಿಂತಾಮಣಿ | ಮುರುಗುಮಲ್ಲ ದರ್ಗಾ ದರ್ಶನ ಮುಗಿಸಿ ಮರಳುತ್ತಿದ್ದವರ ಆಟೋ ಕಾರು ಡಿಕ್ಕಿ..ಇಬ್ಬರ ಸ್ಥಿತಿ ಗಂಭೀರ

ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ಲ ಹಳ್ಳಿ ಹಾಗೂ...