ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್ vs ಮಾಜಿ ಸಚಿವ ಸುಧಾಕರ್ ವಾಕ್ಸಮರ!

Date:

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು ಬಾರಿ ಎಲ್ಲಾ ವೇದಿಕೆಗಳಲ್ಲಿಯೂ ಹೇಳಿಕೊಂಡೆ ಬರುತ್ತಿದ್ದರು ಹಾಗೂ ಎಂ.ಸಿ ಸುಧಾಕರ್ ಅವರನ್ನು ತಮ್ಮ ರಾಜಕೀಯ ಗುರು ಎಂದೇ ಕೊಂಡಾಡುತ್ತಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಇಬ್ಬರ ನಡುವಿನ ಒಳಜಗದ ಬೀದಿಗೆ ಬಂದಂತಾಗಿದೆ.

- Advertisement -

ಚಿಕ್ಕಬಳ್ಳಾಪುರ ತಾಲೂಕಿನ ಶಾಸಕ ಪ್ರದೀಪ್ ಈಶ್ವರ್ ಆಗಿದ್ದು ಅಧಿಕಾರ ಹಂಚಿಕೆ, ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶನಗಳು ಹಾಗೂ ಕ್ಷೇತ್ರದ ರಾಜಕೀಯ ಹಿಡಿತದ ವಿಚಾರದಲ್ಲಿ ಇವರ ನಡುವೆ ಭಿನ್ನಮತ ಸ್ಫೋಟಗೊಂಡಿದೆ. ಪ್ರದೀಪ್ ಈಶ್ವರ್ ಅವರ ಏಕಪಕ್ಷೀಯ ನಿರ್ಧಾರಗಳು ಸ್ಥಳೀಯವಾಗಿ ಕೆಲವರನ್ನು ಕೆರಳಿಸಿದ್ದರೆ, ಸುಧಾಕರ್ ಬಣವು ಇದರ ವಿರುದ್ಧ ತಿರುಗಿಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬಾಗಲಕೋಟೆ | ನಿಲ್ದಾಣಗಳಿದ್ದರೂ ರಸ್ತೆಯಲ್ಲೇ ಬಸ್‌ ನಿಲುಗಡೆ; ಟ್ರಾಫಿಕ್...

ಬಾಗಲಕೋಟೆ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಬಸ್‌ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಪ್ರಯಾಣಿಕರು ಬಿಸಿಲು, ಮಳೆಯಿಂದ ರಕ್ಷಣೆ ಪಡೆಯಲು ಆಸನ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಬಸ್‌ಗಳು ನಿಲುಗಡೆಗೊಳ್ಳಲು ಪ್ರತ್ಯೇಕ ಜಾಗವನ್ನೂ ಗುರುತಿಸಲಾಗಿದೆ. ಆದರೆ, ಬಸ್‌ಗಳು ಮಾತ್ರ ನಿಲ್ದಾಣಕ್ಕೆ...

ಅಂಬಾನಿ ರಕ್ಷಣೆಗೆ ನಿಂತಿತೇ ಮೋದಿ ಸರ್ಕಾರ; ಗೆಳೆಯನ ಹಿತ...

ಭಾರತದ ಡಿಜಿಟಲ್ ಆಕಾಶದಲ್ಲಿ ಈಗ ಜಾಗತಿಕ ದೈತ್ಯ ಎಲಾನ್ ಮಸ್ಕ್ ಮತ್ತು ದೇಶೀಯ ಕುಬೇರ ಮುಖೇಶ್ ಅಂಬಾನಿ ನಡುವೆ ಮಹಾಸಮರ ಶುರುವಾಗಿದೆ. ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಇಂಟರ್‌ನೆಟ್ ನೀಡಲು ಸಜ್ಜಾಗಿರುವ ಮಸ್ಕ್ ಅವರ...

ಕೆಪಿಸಿಸಿಗೆ ದೂರಿನ ಬಳಿಕ ಕೆರಳಿ ಕೆಂಡವಾದ ಶಾಸಕ ಪ್ರದೀಪ್ ಈಶ್ವರ್:

ಚಿಕ್ಕಬಳ್ಳಾಪುರ ತಾಲೂಕಿನ ಸ್ಥಳೀಯ ಮುಖಂಡರು ಎಂ.ಸಿ. ಸುಧಾಕರ್ ಹಾಗೂ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ರಕ್ಷಾರಾಮಯ್ಯ ನೇತೃತ್ವದಲ್ಲಿ ಜಿಲ್ಲೆಯ ಅತೃಪ್ತ ಕಾಂಗ್ರೆಸ್ ಮುಖಂಡರ ತಂಡವೊಂದು ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ತೆರಳಿ ಭಾರತ್ ಜೋಡೋ ಭವನದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಕಾರ್ಯವೈಖರಿ ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಹೈಕಮಾಂಡ್‌ಗೆ ದೂರು ನೀಡಿತ್ತು. ಅಷ್ಟೇ ಅಲ್ಲದೆ, ಮುಂದಿನ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಅವರಿಗೆ ಟಿಕೆಟ್ ನೀಡಬಾರದು ಎನ್ನುವ ಹಂತದವರೆಗೂ ಅತೃಪ್ತರು ಆಗ್ರಹ ಮಾಡಿದ್ದಾರೆ ಎಂದು ಗೊತ್ತಾಗಿದೆ.

ತನ್ನ ವಿರುದ್ಧ ಸ್ವಪಕ್ಷೀಯರೇ ದೂರು ನೀಡಿರುವುದಕ್ಕೆ ಕೆರಳಿದ ಶಾಸಕ ಪ್ರದೀಪ್ ಈಶ್ವರ್, ಸಾಮಾಜಿಕ ಜಾಲತಾಣಗಳ ಮೂಲಕ ಮತ್ತು ನೇರ ಸವಾಲುಗಳ ಮೂಲಕ ಮಾಜಿ ಸಚಿವ ಸುಧಾಕರ್ ಅವರ ವಿರುದ್ಧ ಕಿಡಿಕಾರಿದ್ದಾರೆ. ಚಿಂತಾಮಣಿ ರಾಜಕಾರಣವನ್ನು ಉಲ್ಲೇಖಿಸಿ, ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ವಿರೋಧಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ನೇರ ಆರೋಪ ಮಾಡಿದರು. ಅಲ್ಲದೆ, “ನಾನೊಬ್ಬ ಸೆಲ್ಫ್ ಮೇಡ್ ಮ್ಯಾನ್, ನಿಮ್ಮ ವಿಕೃತ ರಾಜಕಾರಣಕ್ಕೆ ಹೆದರುವುದಿಲ್ಲ, ಲೆಟ್ಸ್ ಫೈಟ್” ಎಂದು ಬಹಿರಂಗವಾಗಿ ಸವಾಲು ಹಾಕಿದ್ದಾರೆ.

ಶಾಸಕ ಪ್ರದೀಪ್ ಈಶ್ವರ್ ತಿರುಗೇಟಿಗೆ ಮಾಜಿ ಸಚಿವ ಸುಧಾಕರ್ ಮೌನ ಪ್ರತಿಕ್ರಿಯೆ:

ಪ್ರದೀಪ್ ಈಶ್ವರ್ ಚಿಂತಾಮಣಿ ಶಾಸಕ ರಾಜಕೀಯ ಗುರು ಎಂ.ಸಿ ಸುಧಾಕರ್ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸುತ್ತಿದ್ದರೂ, ಎಂ.ಸಿ. ಸುಧಾಕರ್ ಮಾತ್ರ ಬಹಿರಂಗವಾಗಿ ಯಾವುದೇ ಪ್ರತಿಕ್ರಿಯೆ ನೀಡದೆ ‘ವೇಟ್ ಅಂಡ್ ವಾಚ್’ ಹಾಗೂ ಮೌನ ತಂತ್ರವನ್ನು ಅನುಸರಿಸುತ್ತಿದ್ದಾರೆ. ತಮ್ಮ ಬೆಂಬಲಿಗರ ಸಭೆ ನಡೆಸಿ ಯಾರೂ ಕೂಡ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ತರಬೇಡಿ, ಎಲ್ಲವೂ ಹೈಕಮಾಂಡ್ ಗಮನದಲ್ಲಿದೆ ಎಂದು ಸೂಚಿಸಿದ್ದಾರೆ.

ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವ ಎಂ.ಸಿ ಸುಧಾಕರ್ ನಾನು ಮೂರು ವರ್ಷಗಳ ಕಾಲ ಸಚಿವನಾಗಿ ಕೆಲಸ ಮಾಡಿ, ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದು ಪಕ್ಷಕ್ಕೆ ಮುಜುಗರ ಆಗುವ ಹೇಳಿಕೆಯನ್ನು ನೀಡುವುದಿಲ್ಲ ಎಂದು ಹೇಳಿ ಶಾಸಕ ಪ್ರದೀಪ್ ಈಶ್ವರ್ ಗೆ ಪರೋಕ್ಷವಾಗಿ ಟಾಂಗ್ ನೀಡಿ, ಚಿಕ್ಕಬಳ್ಳಾಪುರ ಬಣ ರಾಜಕೀಯದ ಕುರಿತು ಹೆಚ್ಚಾಗಿ ಪ್ರತಿಕ್ರಿಯೆ ನೀಡಿದೆ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ ಎಂದು ಹೇಳಿ ಸುಮ್ಮನಾದರು.

ಶಾಸಕ ಪ್ರದೀಪ್ ಈಶ್ವರ್ ಆಗ್ನೇಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿಕುಂಟೆ ಹುಲಿಮಟ್ ರವರ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪ್ರಚಾರಕ್ಕಿಂತ ಹೆಚ್ಚಾಗಿ ಮಾಜಿ ಸಚಿವ ಚಿಂತಾಮಣಿ ಶಾಸಕ ಎಂ.ಸಿ ಸುಧಾಕರ್ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದರು.

ನಾನು ಸ್ಥಳೀಯವಾಗಿ ಶಾಸಕನಾಗಿದ್ದರು ಸಹ ಎಲ್ಲಾ ವಿಚಾರಗಳಲ್ಲಿ ಎಂ.ಸಿ ಸುಧಾಕರ್ ರವರ ಹಸ್ತಕ್ಷೇಪ ಹೆಚ್ಚಾಗಿತ್ತು, ಪೋಲಿಸ್ ಸಬ್ ಇನ್ಸ್ಪೆಕ್ಟರ್ ನಿಂದ ಎಲ್ಲಾ ಅಧಿಕಾರಿಗಳನ್ನು ಅವರೇ ಹಾಕಿಸಿಕೊಂಡು ಬರುತ್ತಿದ್ರು, ಕೋಮುಲ್ ಚುನಾವಣೆ ಆಗಿರಬಹುದು, ಕೋಮುಲ್ ನಿರ್ದೇಶಕರ ಆಯ್ಕೆ, ಚಿಕ್ಕಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಆಯ್ಕೆ ಎಲ್ಲದಲ್ಲಿಯೂ ಅವರೆ ಮುಖ್ಯ ಪಾತ್ರ ವಹಿಸುತ್ತಿದ್ದರು. ನಾನು ಎಷ್ಟು ಅಂತ ನೋಡ್ಲಿ, ಎಂದು ಬೇಸರ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ನಾನು ಶಾಸಕ ಇಲ್ಲಿ ನಾನೇ ಬಾಸ್ ಎಂದು ಹೇಳಿ, ಗ್ರಾಂಪಂ, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ನಗರಸಭೆ ಎಲ್ಲಾ ಚುನಾವಣೆಯಲ್ಲಿ ನಾನೇ ಭಿ ಫಾರಂ ನೀಡಲಿದ್ದು ಬೇರೆ ಯಾರೂ ನೀಡುವುದಿಲ್ಲಾ ಎಂದು ಸುಧಾಕರ್ ಹಾಗೂ ರಕ್ಷಾರಾಮಯ್ಯ ಬೆಂಬಲಿಗರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ಚಿಂತಾಮಣಿಯ ಹಲವಾರು ಕಾಂಗ್ರೆಸ್ ಮುಖಂಡರು ಶಾಸಕ ಪ್ರದೀಪ್ ಈಶ್ವರ್ ಗೆ ತಿರುಗೇಟು ನೀಡುತ್ತಾ ಬಂದಿದರು, ಅಷ್ಟೇ ಅಲ್ಲದೆ ಚಿಕ್ಕಬಳ್ಳಾಪುರ ತಾಲೂಕಿನ ಹಲವಾರು ಕಾಂಗ್ರೆಸ್ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ನಾಯಕರ ನಡುವೆ ನಡೆಯುತ್ತಿರುವ ಈ ಒಳಜಗಳವನ್ನು ಅಲ್ಲಿನ ಹಿರಿಯ ನಾಯಕರಾದ ವೀರಪ್ಪ ಮೊಯ್ಲಿ, ಶಿವಶಂಕರ್ ರೆಡ್ಡಿ, ಮುಂತಾದವರು ಪ್ರತಿಕ್ರಿಯೆ ನೀಡಿದ ಸುಮ್ಮಾನಾಗಿದ್ದಾರೆ.

ಚಿಕ್ಕಬಳ್ಳಾಪುರ ಕಾಂಗ್ರೆಸ್ ನಾಯಕರ ಆಂತರಿಕ ಜಗಳದ ಲಾಭ ಪಡೆಯಲು ಮೌನವಾಗಿ ಕಾದು ನೋಡುತ್ತಿದ್ದಾರೆ, ಈ ಕುರಿತು ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ ಸುಧಾಕರ್ ಪ್ರತಿಕ್ರಿಯೆ ನೀಡಿ ನಮಗೆ ಕಾಂಗ್ರೆಸ್ ನಾಯಕರು ಉಚಿತವಾಗಿ ಮನೋರಂಜನೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಮಾಜಿ ಸಚಿವ ಮತ್ತು ಶಾಸಕರ ನಡುವಿನ ಈ ಬಹಿರಂಗ ಕಾಳಗದಿಂದಾಗಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ಕಾಂಗ್ರೆಸ್ ಪಕ್ಷದ ಒಳಜಗದ ಮುಗಿಯುತ್ತಾ.. ಇಲ್ಲವೇ ಮುಂದಿನ ಚುನಾವಣೆಯಲ್ಲಿ ಇದರ ಪರಿಣಾಮ ಯಾವ ರೀತಿ ಬೀಳುತ್ತೆ ಎಂದು ಕಾದುನೋಡಬೇಕಿದೆ.

WhatsApp Image 2026 03 09 at 18.17.26
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.18ರಂದು ಮೈಸೂರಿನಲ್ಲಿ ಎರಡನೇ ವರ್ಷದ ದಸರಾ ಕಲಾಜಾತ್ರೆ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾ ಲಲಿತಕಲೆ ಮತ್ತು ಕರಕುಶಲ ಕಲೆ...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...