ಚಿಂತಾಮಣಿಯಲ್ಲಿ ₹7 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ:ಇಬ್ಬರು ಜೈಲಿಗೆ!

Date:

ಅಬಕಾರಿ ಜಂಟಿ ಆಯುಕ್ತರು ಜಾರಿ ಮತ್ತು ತನಿಖೆ ಬೆಂಗಳೂರು ಗ್ರಾಮಾಂತರ ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು, ಚಿಕ್ಕಬಳ್ಳಾಪುರ ಜಿಲ್ಲೆ ರವರ ನಿರ್ದೇಶನ ಮತ್ತು ಮಾರ್ಗದರ್ಶನದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ಜಪ್ತು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ರಾತ್ರಿ ಸುಮಾರು 10:00 ಗಂಟೆಯ ವೇಳೆಗೆ ಚಿಂತಾಮಣಿ ಉಪ ವಿಭಾಗದ ಅಬಕಾರಿ ನಿರೀಕ್ಷಕರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ,ಅಧಿಕಾರಿಗಳ ತಂಡವು ಚಿಂತಾಮಣಿ ನಗರದ ಕನ್ನಂಪಲ್ಲಿ ಬಸ್ ನಿಲ್ದಾಣದ ಬಳಿ ದಿಢೀರ್ ದಾಳಿ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

​ಈ ವೇಳೆ ಅಕ್ರಮವಾಗಿ ಮಾದಕ ವಸ್ತುಗಳನ್ನು ಹೊಂದಿದ್ದ ಮೋಹನ್ ಎನ್. ವಿ. ಹಾಗೂ ಪುನೀತ್ ಯಾದವ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಆರೋಪಿಗಳಿಂದ 138 ಗ್ರಾಂ MDMA ಹಾಗೂ 74 ಗ್ರಾಂ ಕೊಕೇನ್ COCAIN ಸೇರಿ ಒಟ್ಟು 212 ಗ್ರಾಂ ನಿಷೇಧಿತ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತು ಮಾಡಲಾದ ಈ ಮಾದಕ ವಸ್ತುಗಳ ಅಂದಾಜು ಮೌಲ್ಯ ₹7 ಲಕ್ಷ ರೂಪಾಯಿಗಳು ಎಂದು ತಿಳಿದುಬಂದಿದೆ.

​ಬಂಧಿತ ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು,ಅವರನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Advertisements

ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ಅಧೀಕ್ಷಕರಾದ ಜಿ.ಎಸ್.ಪಾಟೀಲ್,ನಿರೀಕ್ಷಕರಾದ ನಾಗೇಂದ್ರ ಸಿಂಗ್ ಹಾಗೂ ರೇಣುಕ ವಿ.ಉಪ ನಿರೀಕ್ಷಕರಾದ ನಿಟಿನ್ ಎ. ಮತ್ತು ಹುಚ್ಚಪ್ಪ, ಮುಖ್ಯ ಪೇದೆ ಮೋಹನ್ ಎಂ.ಅಬಕಾರಿ ಪೇದೆಗಳಾದ ಸುಮನ್ ಕುಮಾರ್ ಹಾಗೂ ಶಿವಸ್ವಾಮಿ ಸಿ. ಎಸ್.ಮತ್ತು ಚಾಲಕರಾದ ಅಶ್ವಥ್ ನಾರಾಯಣ👇 ಅವರು ಸಕ್ರಿಯವಾಗಿ ಭಾಗವಹಿಸಿದ್ದರು.

ಇದನ್ನು ಓದಿದ್ದೀರಾ..?ಆರ್‌ಟಿಒ ಕಚೇರಿಗಳಲ್ಲಿ ಬೋಗಸ್ ವಾಹನ ನೋಂದಣಿ ಮತ್ತು ಡಿಎಲ್ ಅಕ್ರಮ: ಸೈಯದ್ ಮಾಲಿಕ್ ಆರೋಪ

​ಅಬಕಾರಿ ಇಲಾಖೆಯ ಈ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಸ್ಮಶಾನಗಳ ದಾರಿ ಒತ್ತುವರಿ ತೆರವುಗೊಳಿಸಿ ಮೂಲಸೌಕರ್ಯ ಒದಗಿಸಿ: ರೈತ ಸಂಘ ಒತ್ತಾಯ

ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸ್ಮಶಾನದ ದಾರಿಗಳನ್ನು ಗುರುತಿಸಿ ತೆರವುಗೊಳಿಸುವುದರ ಜತೆಗೆ, ಸ್ಮಶಾನಗಳಲ್ಲಿ ಮೂಲಸೌಕರ್ಯಗಳನ್ನು...

ಚಿಂತಾಮಣಿ | ಕಾರು ಡಿವೈಡರ್‌ಗೆ ಡಿಕ್ಕಿ:ಎರಡು ವರ್ಷದ ಕಂದಮ್ಮ ಸಾವು, ಐವರಿಗೆ ಗಂಭೀರ ಗಾಯ

ಜೋರು ಮಳೆಯಿಂದಾಗಿ ರಸ್ತೆ ಮಧ್ಯದಲ್ಲಿದ್ದ ಡಿವೈಡರ್ ಸರಿಯಾಗಿ ಕಾಣಿಸದೆ,ಚಾಲಕನ ನಿಯಂತ್ರಣ ತಪ್ಪಿದ...

ರಾಯಚೂರು | ನಾಳೆ ಜಿಲ್ಲೆಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ನಾಳೆ (ಅಕ್ಟೋಬರ್ 8ರಂದು) ರಾಯಚೂರು ಹಾಗೂ...

ಮಂಗಳೂರು | 350 ಪೊಲೀಸ್ ಠಾಣೆಗಳಲ್ಲಿ ಹುಡುಕಿದರೂ ‘ಲವ್ ಜಿಹಾದ್’ ದೂರು ಸಿಗಲಿಲ್ಲ : ಎಂ.ಜಿ. ಹೆಗಡೆ

‘ಲವ್ ಜಿಹಾದ್’ ಕುರಿತು ಕಳೆದ ಎರಡು ದಶಕಗಳಿಂದ ನಡೆಯುತ್ತಿರುವ ಚರ್ಚೆ, ಪ್ರಚಾರ...