ನಗರದ ಹೃದಯಭಾಗದಲ್ಲಿರುವ ಗಾಂಧಿ ವೃತ್ತದ ಸಮೀಪ ಹಿರಿಯ ವಕೀಲರ ಮೇಲೆ ಹಾಡಹಗಲೇ ಚಾಕುವಿನಿಂದ ಕುತ್ತಿಗೆಗೆ ಹಿರಿದು ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಕಸಬಾ ಗ್ರಾಮೀಣ ಕೃಷಿ ಸಹಕಾರ ಸಂಘದ ಕಟ್ಟಡದಲ್ಲಿರುವ ತಮ್ಮ ಕಚೇರಿಗೆ ಆಗಮಿಸುತ್ತಿದ್ದ ವಕೀಲ ಸಣ್ಣಕ್ಕಿ ವೆಂಕಟರಮಣಪ್ಪ ಅವರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಘಟನೆಯಿಂದ ವಕೀಲರ ವಲಯದಲ್ಲಿ ಆತಂಕ ಮನೆಮಾಡಿದೆ.
ಮಂಗಳವಾರ ಬೆಳಿಗ್ಗೆ ಸುಮಾರು 10.30ರ ವೇಳೆಗೆ ಎಂದಿನಂತೆ ಕರ್ತವ್ಯ ನಿರ್ವಹಿಸಲು ವೆಂಕಟರಮಣಪ್ಪ ಅವರು ಕಚೇರಿಗೆ ಆಗಮಿಸಿದ್ದರು. ಕಟ್ಟಡದ ಮೊದಲ ಮಹಡಿಯಲ್ಲಿರುವ ಕಚೇರಿಗೆ ಮೆಟ್ಟಿಲುಗಳ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿ ಅವರ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದ ಪರಿಣಾಮ ತೀವ್ರ ಗಾಯಗೊಂಡು ಅಪಾರ ಪ್ರಮಾಣದಲ್ಲಿ ರಕ್ತಸ್ರಾವವಾಗಿದೆ.
ಇದನ್ನು ಓದಿದ್ದೀರಾ..?ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್
ಕೂಡಲೇ ಸ್ಥಳೀಯರು ನೆರವಿಗೆ ಧಾವಿಸಿ, ಗಾಯಾಳುವನ್ನು ಆಟೋ ಮೂಲಕ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಗೌರಿಬಿದನೂರು | ವಕೀಲ ಸಣ್ಣಕ್ಕಿ ವೆಂಕಟರಮಣಪ್ಪ ಅವರ ಮೇಲೆ ಚಾಕು ಇರಿತ
ಪೋಸ್ಟ್ ಹಂಚಿಕೊಳ್ಳಿ:





