ವಿವಿಧೆಡೆ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ:ಮೊಳಗಿದ ಗಣಪತಿ ಬೊಪ್ಪ ಮೋರಯಾ ಘೋಷಣೆ: ಗಮನಸೆಳೆದ ಹೂವಿನ, ವಿದ್ಯುತ್ ಅಲಂಕಾರ

Date:

ಬಾಗೇಪಲ್ಲಿ:-ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಪ್ರಥಮ ಪೂಜಿತ ಗಣೇಶನ ಹಬ್ಬದ ಅಂಗವಾಗಿ ಗಣೇಶ ಚತುರ್ಥಿಯನ್ನು ಶ್ರದ್ಧಾ–ಭಕ್ತಿಯಿಂದ ಆಚರಿಸಲಾಯಿತು. ಹೆಚ್ಚಿನ ಸಂಖ್ಯೆಯ ಗಣೇಶ ಮಂಡಳಿಗಳು ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.

- Advertisement -

ಚಿಕ್ಕ ಗಾತ್ರದ ಮೂರ್ತಿ, ಇಪ್ಪತ್ತು ಅಡಿ ಮೂರ್ತಿಗಳನ್ನು ಸಂಘ ಸಂಸ್ಥೆಗಳು ಪ್ರತಿಷ್ಠಾಪಿಸಲಾಗಿದೆ. ಪ್ರತಿಷ್ಠಾಪನೆಗೆ ಮುನ್ನ ಹೋಮ–ಹವನ ಮಾಡಲಾಯಿತು. ಗಣಪತಿ ಬೊಪ್ಪ ಮೋರಯಾ ಘೋಷಣೆಗಳು ಕೇಳಿ ಬಂದವು. ಕಡಬು, ಲಾಡು, ಕರ್ಚಿ ಕಾಯಿ, ಹೋಳಿಗೆ ತಯಾರಿಸಿ ಅರ್ಪಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಪಟ್ಟಣದ ಡಾಲರ್ಸ ,ನೇತಾಜಿ ಸರ್ಕಲ್, ಬಸ್ ನಿಲ್ದಾಣ, ಪುರಸಭೆ ರಸ್ತೆ, ಬಂಗಾರು ಅಂಗಡಿ ರಸ್ತೆ, ಕೊತ್ತಪಲ್ಲಿ ರಸ್ತೆ,ಗೂಳೂರು ರಸ್ತೆ, ಏಳು ನೇ ವಾರ್ಡ್, ಅವುಲುಮಂದೆ ರಸ್ತೆ, ನ್ಯಾಷನಲ್ ಕಾಲೇಜು ರಸ್ತೆ, ಘಂಟಂವಾರಿಪಲ್ಲಿ ಗ್ರಾಮ ಸೇರಿದಂತೆ ವಿವಿಧ ಕಡೆಗಳಲ್ಲಿ ಸಾರ್ವಜನಿಕವಾಗಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ.

ವಿವಿಧ ಭಂಗಿಯ ಮೂರ್ತಿಗಳು: ಗಣೇಶೋತ್ಸವದ ಅಂಗವಾಗಿ ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ವಿವಿಧ ಭಂಗಿಯ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ.
ಒಂದೇ ವಾರ್ಡಿನಲ್ಲಿ ಮೂರ್ನಾಲ್ಕು ಕಡೆ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

ಅಯೋಧ್ಯೆ ರಾಮ ಗಣಪತಿ, ನವಿಲು ಗಣಪತಿ, ಶ್ರೀರಾಮ ಗಣಪತಿ, ಸುಖಾಸಿನ ಗಣಪತಿ, ಕೃಷ್ಣಾ ಗಣಪತಿ, ಪಾರ್ವತಿ ಪರಮೇಶ್ವರ ಗಣಪತಿ, ಮಹಾರಾಜ ಗಣಪತಿ, ಗೋವು ಗಣಪತಿ ಹೀಗೆ ವಿವಿಧ ರೀತಿಯ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.

ಆಕರ್ಷಕ ಅಲಂಕಾರ: ಹೂಗಳಿಂದ ಅಲಂಕಾರ ಮಾಡಲಾಗಿದೆ. ಕೆಲವು ಬಡಾವಣೆಗಳಲ್ಲಿ ರಸ್ತೆಗಳಲ್ಲಿ ವಿದ್ಯುತ್‌ ದೀಪ ಅಲಂಕಾರ ಮಾಡಿದ್ದು, ಸಾರ್ವಜನಿಕರನ್ನು ಸೆಳೆಯುತ್ತಿದೆ.

ಹಲವಡೆ ದಿನಾಲು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನವೂ ನಡೆಯುತ್ತಿದೆ.

ಪೂಜೆ: ಬೆಳಿಗ್ಗೆ ಮತ್ತು ಸಂಜೆ ಗಣೇಶ ಪೂಜೆ ಮಾಡಲಾಯಿತು. ಗಂಗಾಸ್ನಾನ, ವಸ್ತ್ರಾಧಾರಣೆ, ದೀಪರಾಧನೆ, ಅಭಿಷೇಕ, ಪಂಚಾಮೃತ, ಪ್ರಸಾದ, ಐದು ತರದ ಹಣ್ಣು ಇಟ್ಟು ಪೂಜೆಯ ನಂತರ ಮಹಾಮಂಗಲ ಆರತಿ ಮಾಡಲಾಯಿತು.

ಬರಗಾಲವಾದರೂ ನಮಗೆ ಅದರ ಪರಿಣಾಮ ಇಲ್ಲ ಎನ್ನುವಂತೆ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಜನತೆ ಗಣೇಶನ ಹಬ್ಬದ ಆಚರಣೆ ನಡೆಸುತ್ತಿದ್ದಾರೆ.

ಸ್ವಾತಂತ್ರ್ಯ ಪೂರ್ವದಲ್ಲಿ ಸ್ವತಂತ್ರ್ಯ ಹೋರಾಟಕ್ಕಾಗಿ ದೇಶದ ಜನತೆ ಒಂದಡೆ ಸೇರಿ ಬ್ರಿಟೀಷರ ವಿರುದ್ದ ಹೋರಾಟ ರೂಪಿಸುವ ನಿಟ್ಟಿನಲ್ಲಿ ಆರಂಭಗೊಂಡ ಸಾರ್ವಜನಿಕ ಣೇಶನ ಹಬ್ಬದ ಆಚರಣೆ. ಈಗ ದೇಶದ ಹಿಂದುತ್ವದ ಸಂಕೇತವಾಗಿ ರೂಪುಗೊಂಡಿದೆ.

ಇದನ್ನು ಓದಿದ್ದೀರಾ..?ಕೋಲಾರ | ಸಂವಿಧಾನದ ಆಶಯದಂತೆ ಸೌಲಭ್ಯಗಳು ಪ್ರಾಮಾಣಿಕ ಅನುಷ್ಠಾನವಾಗಲಿ: ಕೊತ್ತೂರು ಮಂಜುನಾಥ್

ನೀರಿನ ಅಭಾವ: ತಾಲ್ಲೂಕು ಆಂದ್ರಪ್ರದೇಶ ಗಡಿಭಾಗದಲ್ಲಿ ಇದ್ದು ಬರ ಪೀಡಿತ ಪ್ರದೇಶ ಆಗಿದ್ದು,ಮಳೆ ಅಭಾವದಿಂದ ನೀರು ಇಲ್ಲದ ಕಾರಣ ಪಟ್ಟಣದ ಹೊರವಲಯದ ರಾಮಸ್ವಾಮಿ ಪಲ್ಲಿ ರೆಡ್ಡಿ ಕೆರೆಯಲ್ಲಿ ಪುರಸಭೆ ಪುಷ್ಕರಣಿಯಲ್ಲಿ ಮೂರ್ತಿಗಳ ವಿಸರ್ಜನೆಗೆ ಅವಕಾಶವನ್ನು ಕಲ್ಪಿಸಿದಡ ಮಳೆ ಇಲ್ಲದೆ ಪುಷ್ಕರಣಿಯು ಸಂಪೂರ್ಣವಾಗಿ ಒಣಗಿದೆ. ಪುರಸಭೆ ಸಿಬ್ಬಂದಿ ಪುಷ್ಕರಣಿಯನ್ನು ಸ್ವಚ್ಛಗೊಳಿಸಿ ಕೊಳವೆ ಭಾವಿ ಮೂಲಕ ನೀರನ್ನು ತುಂಬಿಸಿ ಗಣೇಶ ವಿಸರ್ಜನೆಗೆ ಅನುಕೂಲ ಮಾಡಿಕೊಡಲಾಗಿದೆ.

WhatsApp Image 2025 06 24 at 16.24.21 6207fd1d
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕಲೆಯ ಮೂಲ ಸತ್ವ ಉಳಿಸಿ ಬೆಳೆಸುವುದು ಕಲಾವಿದರ ಜವಾಬ್ದಾರಿ: ಪ.ಸ.ಕುಮಾರ

"ಕಲಾವಿದರು ತಮ್ಮ ಸೃಜನಶೀಲತೆಯನ್ನು ಯಾವುದೇ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೊರೆ...

ಗದಗ | ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರ ಜಿಲ್ಲಾ ಪ್ರವಾಸ

ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಬಸವರಾಜ ರಾಯರಡ್ಡಿ...

ಏಕರೂಪ ಸಮಾನ ಶಿಕ್ಷಣ ಜಾರಿಗೆ ಆಗ್ರಹ: ಸಿಎಂಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಪ್ರತಿಭಟನಾಕಾರರ ಬಂಧನ

ರಾಜ್ಯದಲ್ಲಿ ಏಕರೂಪ ಸಮಾನ ಶಿಕ್ಷಣ ನೀತಿ ಜಾರಿಗೊಳಿಸುವಂತೆ ಆಗ್ರಹಿಸಿ ಮಂಡ್ಯಕ್ಕೆ ಭೇಟಿ...

ಜವಳಿ ಉತ್ಪನ್ನಗಳ ರಫ್ತು ಹೆಚ್ಚಿಸಲು ಕೊಡಗಿನಲ್ಲಿ ಕಾರ್ಯಾಗಾರ

ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದೊಂದಿಗೆ ಉತ್ಪಾದಿಸಿ ವಿದೇಶಗಳಿಗೆ ರಫ್ತು ಮಾಡುವ...