- ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಮೇ 28ರಂದು ಚುನಾವಣೆ - ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ & ಇತರರ ಮೇಲೆ ಲೋಕಾಯುಕ್ತ ದಾಳಿ
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ) ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಬುಧವಾರ (ಮೇ 28) ಚುನಾವಣೆ ನಡೆಯುತ್ತಿದ್ದು, ಈ ನಡುವೆ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಅವರ ಮನೆ, ಕಚೇರಿಗಳ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಇತರರು ನಡೆಸಿರುವ ಅವ್ಯವಹಾರದಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 11 ಕೋಟಿ ರೂ. ನಷ್ಟವಾಗಿದ್ದು, ಅವ್ಯವಹಾರ ನಡೆದಿದೆ ಎನ್ನಲಾದ ಬಗೆಗಿನ ದಾಖಲಾತಿಗಳನ್ನು ಲೋಕಾಯುಕ್ತ ಪೊಲೀಸರು ದಾಳಿ ವೇಳೆ ವಶಪಡಿಸಿಕೊಂಡಿದ್ದಾರೆ.
ಲೋಕಾಯುಕ್ತ ದಾಳಿ ವೇಳೆ ರೈತ ಸಮುದಾಯದ ಸಾಲದ ಮೇಲಿನ ಬಡ್ಡಿ ಮನ್ನಕ್ಕೆ ಡಿ.ಸಿ.ಸಿ. ಬ್ಯಾಂಕಿನ ಮೂಲಕ ನೀಡುವ ಸಾಲದ ಬಡ್ಡಿ ಮನ್ನಾ ಹಾಗೂ 07 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಸಾಲ ವಸೂಲಿ, ನಗದು ರೂಪದಲ್ಲಿ ಹಣ ಡ್ರಾ ಮಾಡಿರುವ ಬಗೆಗಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಹಾಗೂ ಯನುಮಲಪಾಡಿ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಇಲ್ಲಿ ಸಾಲ ಮನ್ನಾಗೆ ಸಂಬಂಧಿಸಿದಂತೆ 2.14.00.000/- ರೂಗಳನ್ನು ಸೆಲ್ಫ್ ಡ್ರಾ ಮಾಡಿರುವ ಬಗ್ಗೆ 2 ಚೆಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಕುರುಬೂರು ವ್ಯವಸಾಯ ಸೇವಾ ಸಹಕಾರ ಸಂಘ ನಿ, ಇಲ್ಲಿ 9,00,00,000/- ರೂಗಳನ್ನು ಸೆಲ್ಫ್ ಡ್ರಾ ಮಾಡಿರುವ ಬಗ್ಗೆ ಕಂಡುಬಂದಿದ್ದು, ತನಿಖೆಗೆ ಅವಶ್ಯಕವಾದ ಕಡತ ಹಾಗೂ ದಾಖಲಾತಿಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತದಲ್ಲಿ ರೈತ ಸಮುದಾಯದ ಸಾಲದ ಮೇಲಿನ ಬಡ್ಡಿ ಮನ್ನಕ್ಕೆ ಡಿ.ಸಿ.ಸಿ. ಬ್ಯಾಂಕಿನ ಮೂಲಕ ನೀಡುವ ಸಾಲದ ಬಡ್ಡಿ ಮನ್ನಾ ಹಣದಲ್ಲಿ ಹಾಗೂ 07 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಸಾಲ ವಸೂಲಿಯಾಗದೆ ಇದ್ದರೂ 2018-19ನೇ ಸಾಲಿನ ಸಾಲ ಮನ್ನಾ ಜಿ.ಎಲ್. ಖಾತೆಗೆ ಜಮಾ ಮಾಡದೆ ವಸೂಲಿಯಾದಂತೆ ತೋರಿಸಿ, ನಕಲಿ ರೈತರ ವಿವರಗಳನ್ನು ಸೃಷ್ಟಿಸಿ ಸರ್ಕಾರದ ಹಣವನ್ನು ಕಬಳಿಸಿರುವುದು ಮತ್ತು ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ನಗದು ರೂಪದಲ್ಲಿ ಹಣ ಡ್ರಾ ಮಾಡಲು ಯಾವುದೇ ಅಧಿಕಾರವಿಲ್ಲದಿದ್ದರೂ ಪ್ರಾಥಮಿಕ ಕೃಷಿ ಸಹಕಾರ ಸಂಘ, ಕುರುಬೂರು ಇಲ್ಲಿ ಹಣವನ್ನು ನಗದಾಗಿ ಡ್ರಾ ಮಾಡಿ ಅಕ್ರಮ ಎಸಗಿ ಅವ್ಯವಹಾರ ನಡೆದಿರುವ ಬಗ್ಗೆ ಲೋಕಾಯುಕ್ತಕ್ಕೆ ಫಿರ್ಯಾದಿದಾರರೊಬ್ಬರು ದೂರು ದಾಖಲಿಸಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಆಡಳಿತಕ್ಕೆ 11 ವರ್ಷ; ದೇಶ ಉದ್ಧಾರವಾಯಿತೇ?
ಈ ಹಿನ್ನೆಲೆಯಲ್ಲಿ ದೂರುದಾರರ ಮಾಹಿತಿ ಮೇರೆಗೆ ನಿಯಮಾನುಸಾರ ಪರಿಶೀಲನೆ ಕೈಗೊಂಡು, ಸಕ್ಷಮ ಪ್ರಾಧಿಕಾರದಿಂದ ಅಧಿಕಾರಿಗಳ ವಿರುದ್ಧ ಪೂರ್ವಾನುಮತಿಯನ್ನು ಪಡೆದು, ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಮತ್ತು ಇತರರ ವಿರುದ್ಧ ಕೋಲಾರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ 23.05.2025 ರಂದು ಠಾಣಾ ಪ್ರಕರಣ ಸಂಖ್ಯೆ: 06/2025, ಕಲಂ 13(1)(ಎ) ಜೊತೆಗೆ 13(2) ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆ 1988 2 0 409, 420, 468 3 120(2) ಪ್ರಕರಣ ದಾಖಲಾಗಿತ್ತು.
ನ್ಯಾಯಾಲಯದಿಂದ 26.05.2025 ರಂದು ಶೋಧನಾ ವಾರಂಟ್ ಪಡೆದು 27.05.2025 ರಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಕಚೇರಿ ಮತ್ತು ಕುರುಬೂರು ವ್ಯವಸಾಯ ಸೇವಾ ಸಹಕಾರ ಸಂಘ ನಿ. ಬೊಮ್ಮೇಪಲ್ಲಿ ವ್ಯವಸಾಯ ಸೇವಾ ಸಹಕಾರ ಸಂಘ ನಿ, ಯಗವಕೋಟೆ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಹುಲ್ಲಗುಮ್ಮನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಯನುಮಲಪಾಡಿ ವ್ಯವಸಾಯ ಸೇವಾ ಸಹಕಾರ ಸಂಘ ನಿ, ನಂದಿಗಾಣಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಟಿ.ಗೊಲ್ಲಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ ನಿ ಹಾಗೂ ಗೋವಿಂದೇಗೌಡ, ಡಿಸಿಸಿ ಬ್ಯಾಂಕಿನ ಅಧ್ಯಕ್ಷರು, ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಇವರ ಮನೆ ಒಳಗೊಂಡಂತೆ ಒಟ್ಟು 10 ಸ್ಥಳಗಳಲ್ಲಿ 18 ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡಗಳೊಂದಿಗೆ ಲೋಕಾಯುಕ್ತ ಪೊಲೀಸರಿಂದ ದಾಳಿ ನಡೆದಿದೆ. ಪ್ರಕರಣದ ತನಿಖೆ ಮುಂದುವರಿದಿದೆ.