ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ಅಧ್ಯಕ್ಷನಿಂದ ₹11 ಕೋಟಿ ಅಕ್ರಮ, ಲೋಕಾಯುಕ್ತ ಪೊಲೀಸರಿಂದ ದಾಖಲೆ ವಶಕ್ಕೆ

Date:

- ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಸ್ಥಾನಕ್ಕೆ ಮೇ 28ರಂದು ಚುನಾವಣೆ
- ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ & ಇತರರ ಮೇಲೆ ಲೋಕಾಯುಕ್ತ ದಾಳಿ

ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ) ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಬುಧವಾರ (ಮೇ 28) ಚುನಾವಣೆ ನಡೆಯುತ್ತಿದ್ದು, ಈ ನಡುವೆ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಅವರ ಮನೆ, ಕಚೇರಿಗಳ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

- Advertisement -

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಇತರರು ನಡೆಸಿರುವ ಅವ್ಯವಹಾರದಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 11 ಕೋಟಿ ರೂ. ನಷ್ಟವಾಗಿದ್ದು, ಅವ್ಯವಹಾರ ನಡೆದಿದೆ ಎನ್ನಲಾದ ಬಗೆಗಿನ ದಾಖಲಾತಿಗಳನ್ನು ಲೋಕಾಯುಕ್ತ ಪೊಲೀಸರು ದಾಳಿ ವೇಳೆ ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಲೋಕಾಯುಕ್ತ ದಾಳಿ ವೇಳೆ ರೈತ ಸಮುದಾಯದ ಸಾಲದ ಮೇಲಿನ ಬಡ್ಡಿ ಮನ್ನಕ್ಕೆ ಡಿ.ಸಿ.ಸಿ. ಬ್ಯಾಂಕಿನ ಮೂಲಕ ನೀಡುವ ಸಾಲದ ಬಡ್ಡಿ ಮನ್ನಾ ಹಾಗೂ 07 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಸಾಲ ವಸೂಲಿ, ನಗದು ರೂಪದಲ್ಲಿ ಹಣ ಡ್ರಾ ಮಾಡಿರುವ ಬಗೆಗಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಹಾಗೂ ಯನುಮಲಪಾಡಿ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಇಲ್ಲಿ ಸಾಲ ಮನ್ನಾಗೆ ಸಂಬಂಧಿಸಿದಂತೆ 2.14.00.000/- ರೂಗಳನ್ನು ಸೆಲ್ಫ್ ಡ್ರಾ ಮಾಡಿರುವ ಬಗ್ಗೆ 2 ಚೆಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಕುರುಬೂರು ವ್ಯವಸಾಯ ಸೇವಾ ಸಹಕಾರ ಸಂಘ ನಿ, ಇಲ್ಲಿ 9,00,00,000/- ರೂಗಳನ್ನು ಸೆಲ್ಫ್ ಡ್ರಾ ಮಾಡಿರುವ ಬಗ್ಗೆ ಕಂಡುಬಂದಿದ್ದು, ತನಿಖೆಗೆ ಅವಶ್ಯಕವಾದ ಕಡತ ಹಾಗೂ ದಾಖಲಾತಿಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತದಲ್ಲಿ ರೈತ ಸಮುದಾಯದ ಸಾಲದ ಮೇಲಿನ ಬಡ್ಡಿ ಮನ್ನಕ್ಕೆ ಡಿ.ಸಿ.ಸಿ. ಬ್ಯಾಂಕಿನ ಮೂಲಕ ನೀಡುವ ಸಾಲದ ಬಡ್ಡಿ ಮನ್ನಾ ಹಣದಲ್ಲಿ ಹಾಗೂ 07 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಸಾಲ ವಸೂಲಿಯಾಗದೆ ಇದ್ದರೂ 2018-19ನೇ ಸಾಲಿನ ಸಾಲ ಮನ್ನಾ ಜಿ.ಎಲ್. ಖಾತೆಗೆ ಜಮಾ ಮಾಡದೆ ವಸೂಲಿಯಾದಂತೆ ತೋರಿಸಿ, ನಕಲಿ ರೈತರ ವಿವರಗಳನ್ನು ಸೃಷ್ಟಿಸಿ ಸರ್ಕಾರದ ಹಣವನ್ನು ಕಬಳಿಸಿರುವುದು ಮತ್ತು ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ನಗದು ರೂಪದಲ್ಲಿ ಹಣ ಡ್ರಾ ಮಾಡಲು ಯಾವುದೇ ಅಧಿಕಾರವಿಲ್ಲದಿದ್ದರೂ ಪ್ರಾಥಮಿಕ ಕೃಷಿ ಸಹಕಾರ ಸಂಘ, ಕುರುಬೂರು ಇಲ್ಲಿ ಹಣವನ್ನು ನಗದಾಗಿ ಡ್ರಾ ಮಾಡಿ ಅಕ್ರಮ ಎಸಗಿ ಅವ್ಯವಹಾರ ನಡೆದಿರುವ ಬಗ್ಗೆ ಲೋಕಾಯುಕ್ತಕ್ಕೆ ಫಿರ್ಯಾದಿದಾರರೊಬ್ಬರು ದೂರು ದಾಖಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಆಡಳಿತಕ್ಕೆ 11 ವರ್ಷ; ದೇಶ ಉದ್ಧಾರವಾಯಿತೇ?

ಈ ಹಿನ್ನೆಲೆಯಲ್ಲಿ ದೂರುದಾರರ ಮಾಹಿತಿ ಮೇರೆಗೆ ನಿಯಮಾನುಸಾರ ಪರಿಶೀಲನೆ ಕೈಗೊಂಡು, ಸಕ್ಷಮ ಪ್ರಾಧಿಕಾರದಿಂದ ಅಧಿಕಾರಿಗಳ ವಿರುದ್ಧ ಪೂರ್ವಾನುಮತಿಯನ್ನು ಪಡೆದು, ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಮತ್ತು ಇತರರ ವಿರುದ್ಧ ಕೋಲಾರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ 23.05.2025 ರಂದು ಠಾಣಾ ಪ್ರಕರಣ ಸಂಖ್ಯೆ: 06/2025, ಕಲಂ 13(1)(ಎ) ಜೊತೆಗೆ 13(2) ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆ 1988 2 0 409, 420, 468 3 120(2) ಪ್ರಕರಣ ದಾಖಲಾಗಿತ್ತು.

ನ್ಯಾಯಾಲಯದಿಂದ 26.05.2025 ರಂದು ಶೋಧನಾ ವಾರಂಟ್ ಪಡೆದು 27.05.2025 ರಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಕಚೇರಿ ಮತ್ತು ಕುರುಬೂರು ವ್ಯವಸಾಯ ಸೇವಾ ಸಹಕಾರ ಸಂಘ ನಿ. ಬೊಮ್ಮೇಪಲ್ಲಿ ವ್ಯವಸಾಯ ಸೇವಾ ಸಹಕಾರ ಸಂಘ ನಿ, ಯಗವಕೋಟೆ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಹುಲ್ಲಗುಮ್ಮನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಯನುಮಲಪಾಡಿ ವ್ಯವಸಾಯ ಸೇವಾ ಸಹಕಾರ ಸಂಘ ನಿ, ನಂದಿಗಾಣಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಟಿ.ಗೊಲ್ಲಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ ನಿ ಹಾಗೂ ಗೋವಿಂದೇಗೌಡ, ಡಿಸಿಸಿ ಬ್ಯಾಂಕಿನ ಅಧ್ಯಕ್ಷರು, ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಇವರ ಮನೆ ಒಳಗೊಂಡಂತೆ ಒಟ್ಟು 10 ಸ್ಥಳಗಳಲ್ಲಿ 18 ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡಗಳೊಂದಿಗೆ ಲೋಕಾಯುಕ್ತ ಪೊಲೀಸರಿಂದ ದಾಳಿ ನಡೆದಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಟಿಒ ಕಚೇರಿಗಳಲ್ಲಿ ಬೋಗಸ್ ವಾಹನ ನೋಂದಣಿ ಮತ್ತು ಡಿಎಲ್ ಅಕ್ರಮ: ಸೈಯದ್ ಮಾಲಿಕ್ ಆರೋಪ

​​ಚಿಂತಾಮಣಿ | ಆರ್‌ಟಿಒ(ಸಾರಿಗೆ ಇಲಾಖೆ)ಅಧಿಕಾರಿಗಳ ಬೆಂಬಲದೊಂದಿಗೆ ರಾಜ್ಯದಲ್ಲಿ ಬೋಗಸ್ ವಾಹನ ನೋಂದಣಿ...

ಕೋಲಾರ | ಕ್ರೀಡೆ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ: ಮೈಲಾಂಡಹಳ್ಳಿ ಮುರಳಿ

ಕ್ರೀಡೆಯಲ್ಲಿ ಗ್ರಾಮೀಣ ಭಾಗದ ಯುವಕರಿಗೆ ಉತ್ತಮ ಅವಕಾಶಗಳು ದೊರೆಯಬೇಕು. ಕ್ರೀಡೆ ದೈಹಿಕ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...