ಇತ್ತೀಚೆಗೆ ಹೆಚ್ಚಾಗುತ್ತಿರುವ ರಸ್ತೆ ಅಪಘಾತಗಳ ಬೆನ್ನೆಲೆಯಲ್ಲಿ, ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಡಿವೈಎಸ್ಪಿ ರಘು ಎನ್ ರವರ ನೇತೃತ್ವದಲ್ಲಿ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.ಹೆಲ್ಮೆಟ್ ಧರಿಸದೆ ಹಾಗೂ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಾಲನೆ ಮಾಡುತ್ತಿದ್ದ ಸವಾರರನ್ನು ಇಲ್ಲಿನ ಬೆಂಗಳೂರು ರಸ್ತೆಯಲ್ಲಿ ತಡೆದು ಪೊಲೀಸರು ದಂಡ ವಿಧಿಸಿದ್ದಾರೆ.
ರಸ್ತೆಯಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದಿರುವುದು,ಅಗತ್ಯ ದಾಖಲೆಗಳಿಲ್ಲದೆ ವಾಹನ ಚಾಲನೆ ಮಾಡುವುದು ಹಾಗೂ ಇತರ ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿರುವುದನ್ನು ಗಮನಿಸಿದ ಪೊಲೀಸರು,ಸ್ಥಳದಲ್ಲೇ ದಂಡ ವಸೂಲಿ ಮಾಡಿದ್ದಾರೆ.
ಇದನ್ನು ಓದಿದ್ದೀರಾ..?ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್
ಅಪಘಾತಗಳನ್ನು ತಡೆಯುವುದು ಹಾಗೂ ಸಾರ್ವಜನಿಕರಲ್ಲಿ ಸಂಚಾರ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗುತ್ತಿದ್ದು,ಪ್ರತಿಯೊಬ್ಬ ವಾಹನ ಸವಾರರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಕಾನೂನು ಪಾಲನೆ ಮಾಡಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.





